ಮಕ್ಕಳನ್ನ ಅಡ್ಮಿಷನ್ ಮಾಡಿಕೊಳ್ಳಲು ಶಾಲೆಗಳಿಗೆ ಅನುಮತಿ: ತರಗತಿ ಪ್ರಾರಂಭ ಯಾವಾಗ..?
ಕೊರೋನಾ ವೈರಸ್ ಕಾಟದಿಂದಾಗಿ ಹೊಸ ಶೈಕ್ಷಣಿಕ ವರ್ಷ ರಾಜ್ಯದಲ್ಲಿ ಯಾವಾಗ ಪ್ರಾರಂಭವಾಗುತ್ತದೆ ಎಂಬ ಗೊಂದಲ ಇನ್ನೂ ಮುಂದುವರೆದಿದೆ.ಇದರ ಮಧ್ಯೆ ಸಿಎಂ ಮಕ್ಕಳನ್ನ ಅಡ್ಮಿಷನ್ ಮಾಡಿಕೊಳ್ಳಲು ಶಾಲೆಗಳಿಗೆ ಅನುಮತಿ ಕೊಟ್ಟಿದ್ದಾರೆ.
ಬೆಂಗಳೂರು, (ಮೇ.16): ಶಿಕ್ಷಣ ಹಾಗೂ ಪದವೀಧರ ಕ್ಷೇತ್ರದ ಎಲ್ಲಾ ಸದಸ್ಯರು ಇಂದು (ಶನಿವಾರ) ಸಿಎಂ ಬಿಎಸ್ ಯಡಿಯೂರಪ್ಪರನ್ನ ಭೇಟಿ ಮಾಡಿ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು.
ಈ ವೇಳೆ ಆಡಳಿತ ಮಂಡಳಿಗಳಿಗೆ ಅಡ್ಮಿಷನ್ ಮಾಡಿಕೊಳ್ಳಲು ಸಿಎಂ ಅನುಮತಿ ಕೊಟ್ಟಿದ್ದಾರೆ. ಈ ಬಗ್ಗೆ ಜೆಡಿಎಸ್ ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಖಚಿತ ಪಡಿಸಿದ್ದಾರೆ.
ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಹೊರಟ್ಟಿ, ಖಾಸಗಿ ಶಾಲೆ ಆಡಳಿತ ಮಂಡಳಿಗಳಿಗೆ ಅಡ್ಮಿಷನ್ ಮಾಡಿಕೊಳ್ಳಲು ಸಿಎಂ ಅನುಮತಿ ಕೊಟ್ಟಿದ್ದಾರೆ. ಇದರಿಂದ ಶಿಕ್ಷಕರಿಗೆ ವೇತನ ನೀಡಲು ಅನುಕೂಲ ಆಗುತ್ತದೆ ಎಂದು ಹೇಳಿದರು.
ಶಾಲೆ ಪುನರಾರಂಭ: ಸಚಿವ ಸುರೇಶ್ ಕುಮಾರ್ ಹೇಳಿದ್ದಿಷ್ಟು
ಬಡತನದಲ್ಲಿ ಇರುವ ಶಿಕ್ಷಕರಿಗೆ 25 ಸಾವಿರ ಪರಿಹಾರ ನೀಡಲು ಮನವಿ ಮಾಡಿದ್ದೇವೆ. ಆರ್ ಟಿ ಐ ಹಣ ಬಿಡುಗಡೆ ಮಾಡದೇ ಎರಡು ವರ್ಷ ಆಗಿದ್ದು, ಕೂಡಲೇ ಹಣ ಬಿಡುಗಡೆ ಮಾಡಲು ಮನವಿ ಮಾಡಿದ್ದೇವೆ ಎಂದರು.
ಇದರ ಕುರಿತು ರೂಪುರೇಷೆಗಳ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಶನಿವಾರ ಇನ್ನೊಂದು ಸಭೆ ನಡೆಯಲಿದ್ದು, ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.
ಕೋವಿಡ್ ಕಾಟದಿಂದಾಗಿ ಹೊಸ ಶೈಕ್ಷಣಿಕ ವರ್ಷ ರಾಜ್ಯದಲ್ಲಿ ಯಾವಾಗ ಪ್ರಾರಂಭವಾಗುತ್ತದೆ ಎಂಬ ಗೊಂದಲ ಇನ್ನೂ ಮುಂದುವರೆದಿದೆ.
ಈ ನಡುವೆ ಹೊಸ ಮಾರ್ಗಸೂಚಿಯೊಂದನ್ನು ಬಿಡುಗಡೆಗೊಳಿಸಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪಾಳಿ ಪದ್ಧತಿಯಲ್ಲಿ ತರಗತಿ ನಡೆಸಲು ಚರ್ಚೆಗಳು ನಡೆದಿವೆ.
ಪಾಳಿ ಪದ್ಧತಿಯಲ್ಲಿ ತರಗತಿ
ಹೌದು...ಶಾಲಾ ತರಗತಿ ಕೊಠಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪಾಳಿ ಪದ್ಧತಿಯಲ್ಲಿ ತರಗತಿ ಸಮಯಗಳ ವಿಂಗಡನೆ ಮಾಡಲಾಗಿದೆ. ಮೊದಲನೇ ಪಾಳಿ ಸಮಯ ಬೆಳಿಗ್ಗೆ 7.50ರಿಂದ ಪ್ರಾರಂಭಗೊಂಡು ಮಧ್ಯಾಹ್ನ 12.20ರವರೆಗೆ ನಡೆಸುವುದು ಹಾಗೂ 2ನೇ ಪಾಳಿಯನ್ನು ಮಧ್ಯಾಹ್ನ 12.10ರಿಂದ ಸಂಜೆ 5.00 ಗಂಟೆಯವರೆಗೆ ನಡೆಸಲು ಸಮಾಲೋಚನೆಗಳು ನಡೆದಿವೆ.