Asianet Suvarna News Asianet Suvarna News

ರಾಜ್ಯದಲ್ಲಿ ಶುರುವಾಗಲಿದೆ 1ರಿಂದ 5ನೇ ತರಗತಿ : ಸುರೇಶ್‌ ಕುಮಾರ್‌

ರಾಜ್ಯದಲ್ಲಿ ಮತ್ತೆ 1 ರಿಂದ 5ನೇ ತರಗತಿವರೆಗೆ ತರಗತಿಗಳು ಮತ್ತೆ ಆರಂಭವಾಗಲಿದೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕೃತವಾಗಿ ತಿಳಿಸಿದ್ದಾರೆ. 

1 to 5th standard will reopen soon Says Minister Suresh kumar snr
Author
Bengaluru, First Published Mar 3, 2021, 9:21 AM IST

ಹುಬ್ಬಳ್ಳಿ (ಮಾ.03): 1ರಿಂದ 5ನೇ ತರಗತಿ ವರೆಗಿನ ಶಾಲೆ ಪ್ರಾರಂಭಕ್ಕೆ ಸಂಬಂಧಿಸಿದಂತೆ ಸರ್ಕಾರ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆರೋಗ್ಯ ಇಲಾಖೆಯ ವರದಿ ಆಧರಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ ತೆರೆಯುವ ವಿಶ್ವಾಸ ಸರ್ಕಾರಕ್ಕಿತ್ತು. 

ಆದರೆ, ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ದೇಶದ ಆರು ರಾಜ್ಯಗಳಲ್ಲಿ ಕೋವಿಡ್‌ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಕೇಂದ್ರ ತಿಳಿಸಿದೆ. ಅದರಲ್ಲಿ ಕರ್ನಾಟಕವೂ ಒಂದಾಗಿದೆ. ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೋನಾ ಎರಡನೆಯ ಅಲೆ ಜೋರಾಗಿದೆ. ಈ ಕಾರಣಕ್ಕಾಗಿ ಆರೋಗ್ಯ ಇಲಾಖೆಯ ವರದಿ ಕೇಳಲಾಗಿದೆ. ತಜ್ಞರು ವರದಿ ಕೊಟ್ಟಬಳಿಕ ಸರ್ಕಾರ 1ರಿಂದ 5ನೇ ತರಗತಿವರೆಗಿನ ಶಾಲೆ ಪ್ರಾರಂಭಕ್ಕೆ ಸಂಬಂಧಪಟ್ಟಂತೆ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿ​ಸಿ​ದ​ರು.

SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಕೆಲ ಖಾಸಗಿ ಶಾಲೆಗಳು ಆರಂಭಿಸುತ್ತಿವೆಯಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಕ್ಕಳ ಆರೋಗ್ಯ ಕಾಳಜಿ ನಮಗೆ ಮುಖ್ಯ. ಖಾಸಗಿ ಶಾಲೆಗಳು ಅನುಮತಿ ಇಲ್ಲದೇ 1ರಿಂದ 5ನೇ ತರಗತಿ ಪ್ರಾರಂಭಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿ ಮಾಡಲು ಸಚಿವ ಸಂಪುಟದಲ್ಲಿ ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದರು.

Follow Us:
Download App:
  • android
  • ios