ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ 10 ಹೊಸ ಆನ್‌ಲೈನ್‌ ಕೋರ್ಸ್‌ ಆರಂಭ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2023-24ನೇ ಸಾಲಿನ ಪ್ರವೇಶಾತಿ ಪ್ರಾರಂಭವಾಗಿದ್ದು, ಪ್ರಸಕ್ತ ಸಾಲಿನಲ್ಲಿ ಬಹು ಬೇಡಿಕೆಯ ಕೋರ್ಸ್‌ಗಳಾದ ಬಿಎಸ್‌ಡಬ್ಲ್ಯೂ, ಎಂಎಸ್‌ಡಬ್ಲ್ಯೂ, ಎಂಸಿಎ, ಎಂಎಸ್‌ಸಿ ಸೇರಿದಂತೆ 10 ಆನ್‌ಲೈನ್‌ ಹೊಸ ಕೋರ್ಸ್‌ಗಳ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದೆ ಎಂದು ವಿವಿ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ ತಿಳಿಸಿದರು.

10 new online courses launched in Karnataka State Open University bengaluru rav

ಬೆಂಗಳೂರು (ಆ.3) :  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2023-24ನೇ ಸಾಲಿನ ಪ್ರವೇಶಾತಿ ಪ್ರಾರಂಭವಾಗಿದ್ದು, ಪ್ರಸಕ್ತ ಸಾಲಿನಲ್ಲಿ ಬಹು ಬೇಡಿಕೆಯ ಕೋರ್ಸ್‌ಗಳಾದ ಬಿಎಸ್‌ಡಬ್ಲ್ಯೂ, ಎಂಎಸ್‌ಡಬ್ಲ್ಯೂ, ಎಂಸಿಎ, ಎಂಎಸ್‌ಸಿ ಸೇರಿದಂತೆ 10 ಆನ್‌ಲೈನ್‌ ಹೊಸ ಕೋರ್ಸ್‌ಗಳ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದೆ ಎಂದು ವಿವಿ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾಲಯವು ನ್ಯಾಕ್‌ನಿಂದ ‘ಎ ಪ್ಲಸ್‌’ ಮಾನ್ಯತೆ ಪಡೆದಿದ್ದು, ದೂರ ಶಿಕ್ಷಣದ ಮೂಲಕ ‘ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ’ ಎಂಬ ಧ್ಯೇಯ ಘೋಷಣೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರ, ಪ್ರತಿ ತಾಲೂಕಿನಲ್ಲಿ ಅಧ್ಯಯನ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ. ದೃಶ್ಯವಾಹಿನಿ ಯೂಟ್ಯೂಬ್‌ ಚಾನೆಲ್‌, ಪ್ರಸಾರಾಂಗ ರೇಡಿಯೋ ಸ್ಥಾಪನೆ ಮಾಡಲಾಗುತ್ತಿದೆ ಎಂದರು.

 

ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಗೌರವ ಡಾಕ್ಟರೇಟ್‌

ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ, ದೃಷ್ಟಿದೋಷವುಳ್ಳ ಅಭ್ಯರ್ಥಿ ಹಾಗೂ ಕೋವಿಡ್‌ನಿಂದ ಮೃತಪಟ್ಟತಂದೆ-ತಾಯಿಯ ಮಕ್ಕಳಿಗೆ ಸಂಪೂರ್ಣ ಉಚಿತವಾಗಿ ಹಾಗೂ ಬಿಪಿಎಲ್‌ ಕಾರ್ಡ್‌ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಮಿಲಿಟರಿ ಸೇವೆಯಲ್ಲಿರುವ ಅಥವಾ ಮಾಜಿ ಸೈನಿಕರ ಮಕ್ಕಳಿಗೆ ಶೇ.15, ಸರ್ಕಾರಿ ಸಾರಿಗೆ ಚಾಲಕರು ಹಾಗೂ ಆಟೋ, ಕ್ಯಾಬ್‌ ಚಾಲಕರ ಮಕ್ಕಳಿಗೆ ಶೇ.25ರಷ್ಟುಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ ಎಂದು ತಿಳಿಸಿದರು.

ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅನುಕೂಲವಾಗಲೆಂದು ಬೆಂಗಳೂರಿನ ಬಾಪೂಜಿ ನಗರ, ಮಲ್ಲೇಶ್ವರಂ, ಯಲಹಂಕ, ಬೊಮ್ಮನಹಳ್ಳಿ ಹಾಗೂ ಕೆ.ಆರ್‌.ಪುರಂನಲ್ಲಿ ಪ್ರಾದೇಶಿಕ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಆಯಾ ಸಮೀಪದ ಪ್ರಾದೇಶಿಕ ಕಚೇರಿಗಳಿಗೆ ಭೇಟಿ ನೀಡಿ, ಸ್ಥಳದಲ್ಲಿಯೇ ಪ್ರವೇಶಾತಿ ಪಡೆದುಕೊಳ್ಳಬಹುದಾಗಿದೆ ಎಂದರು.

ಮುಕ್ತ ವಿವಿಯಿಂದ ಮನೆ ಬಾಗಿಲಿಗೆ ಉನ್ನತ ಶಿಕ್ಷಣ

Latest Videos
Follow Us:
Download App:
  • android
  • ios