Asianet Suvarna News Asianet Suvarna News

150 ಐಟಿಐಗಳು ಅಂತಾರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೆ

  • ರಾಜ್ಯದ 150 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಅನುಗುಣವಾಗಿ ಮೇಲ್ದರ್ಜೆಗೆ
  • ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಸಚಿವ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಮಾಹಿತಿ
150 IITs upgrade soon says Minister Ashwath Narayan snr
Author
Bengaluru, First Published Sep 14, 2021, 9:53 AM IST

 ವಿಧಾನ ಪರಿಷತ್‌ (ಸೆ.14): ರಾಜ್ಯದ 150 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಅನುಗುಣವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಸಚಿವ ಡಾ. ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಮೂಲಕ ಉದ್ಯಮಗಳ ಅಗತ್ಯತೆ ಹಾಗೂ ಬೇಡಿಕೆಗೆ ತಕ್ಕಂತೆ ಯುವ ಜನರಲ್ಲಿ ಕೌಶಲ್ಯ ಹೆಚ್ಚಿಸಲು ತರಬೇತಿ ನೀಡಲಾಗುತ್ತಿದೆ. ತಾಲ್ಲೂಕು ಮಟ್ಟದಲ್ಲಿ, ಸರ್ಕಾರಿ ಸಂಸ್ಥೆಗಳಲ್ಲಿ ಸಹ ತರಬೇತಿ ನೀಡಲಾಗುತ್ತಿದೆ. ಜೊತೆಗೆ ಕೆಟಿಟಿಯ, ಜಿಟಿಟಿಸಿ, ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಸಹ ಪ್ರಸ್ತುತ ಸಂದರ್ಭಕ್ಕೆ ತಕ್ಕಂತೆ ತರಬೇತಿ ಕೊಡಲಾಗುತ್ತದೆ ಎಂದು ಹೇಳಿದರು. ಕಾಂಗ್ರೆಸ್‌ ಸದಸ್ಯ ಯು.ಬಿ. ವೆಂಕಟೇಶ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈವರೆಗೆ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ 1,09,763 ಅಭ್ಯರ್ಥಿಗಳು, ಪ್ರಧಾನ ಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯಡಿ 2,0956 ಅಭ್ಯರ್ಥಿಗಳು ತರಬೇತಿ ಪಡೆದಿದ್ದಾರೆ. ಕೋವಿಡ್‌ ಕಾರಣಕ್ಕೆ ನಿರುದ್ಯೋಗಕ್ಕೆ ಒಳಗಾದ ಯುವ ಜನರಿಗೆ ವರ್ಚುವಲ್‌ ಉದ್ಯೋಗ ಮೇಳ, ಜಿಲ್ಲಾ ಮಟ್ಟದಲ್ಲಿ ಕಿರು ಉದ್ಯೋಗ ಮೇಳ ಏರ್ಪಡಿಸಲಾಗಿದ್ದು, 2020-21ನೇ ಸಾಲಿನಲ್ಲಿ 3776 ಅಭ್ಯರ್ಥಿಗಳಿಗೆ 2021-22ನೇ ಸಾಲಿನಲ್ಲಿ ಈವರೆಗೆ 8513 ಅಭ್ಯರ್ಥಿಗಳಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದರು.

ಐಟಿಐ ಪಾಸು ಮಾಡಿದ್ದೀರಾ? ಇಸಿಐಎಲ್‌ನಲ್ಲಿ 243 ಅಪ್ರೆಂಟಿಸ್‌ ಹುದ್ದಗೆಳಿಗೆ ನೇಮಕಾತಿ

ಕೆಎಸ್‌ಡಿಸಿಯಿಂದ 27 ಜಿಲ್ಲೆಗಳಲ್ಲಿ ಆನ್‌ಲೈನ್‌ ಮೂಲಕ ಉದ್ಯೋಗ ಮೇಳ ನಡೆಸಲಾಗಿ¨ಠæ. ಮೇಳದಲ್ಲಿ 522 ಕಂಪನಿಗಳು, 25,204 ಅಭ್ಯರ್ಥಿಗಳು ಭಾಗವಹಿಸಿದ್ದರು. ಈ ಪೈಕಿ 8513 ಜನರು ನೇಮಕಾತಿ ಪತ್ರ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರು, ನೆರೆ ರಾಜ್ಯದ ಹೈದರಾಬಾದ್‌, ಪುಣೆಗೆ ಹೋಲಿಸಿದರೆ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಕೇವಲ ಶೇ. 4ರಷ್ಟಿದೆ ಎಂದು ಅಧ್ಯಯನದ ವರದಿಯಲ್ಲಿ ತಿಳಿಸಲಾಗಿದೆ ಎಂದರು. ಈ ಮಾತನ್ನು ಒಪ್ಪದ ಸಚಿವ ಅಶ್ವತ್ಥನಾರಾಯಣ, ಉದ್ಯೋಗ ಸೃಷ್ಟಿ, ಆರ್ಥಿಕತೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಇಷ್ಟಕ್ಕೂ ತಮ್ಮ ಇಲಾಖೆ ಉದ್ಯೋಗ ಪಡೆಯಲು ತರಬೇತಿ ನೀಡುತ್ತದೆಯೇ ಹೊರತು ಉದ್ಯೋಗ ನೀಡುವುದಿಲ್ಲ ಎಂದು ಉತ್ತರಿಸಿದರು.

ಇದಕ್ಕೆ ಹರಿಪ್ರಸಾದ್‌ ಅವರು ಉದ್ಯೋಗ ನೀಡಲು ಆಗುವುದಿಲ್ಲ, ಪಕೋಡ ಮಾರಿ ಎಂದು ಪ್ರಧಾನಿಗಳೇ ಹೇಳಿದ್ದಾರೆ, ನೀವು ಕೊಡುವ ತರಬೇತಿಯಿಂದ ಉದ್ಯೋಗ ಪಡೆಯಲು ಆಗುವುದಿಲ್ಲ ಎಂದಾದ ಮೇಲೆ ತರಬೇತಿ ಯಾಕೆ ನೀಡುತ್ತೀರಿ ಎಂದು  ಪ್ರತಿಕ್ರಿಯಿಸಿದರು.

Follow Us:
Download App:
  • android
  • ios