18 ಲಕ್ಷ ರೈತರ ಮಕ್ಕಳಿಗೆ ಪಿಯುಸಿಯಿಂದ ಪಿಜಿಯವರೆಗೆ ವಿಶೇಷ ಶಿಷ್ಯವೇತನ

  • 18 ಲಕ್ಷ ರೈತರ ಮಕ್ಕಳಿಗೆ ಪಿಯುಸಿಯಿಂದ ಪಿಜಿಯವರೆಗೆ ವಿಶೇಷ ಶಿಷ್ಯವೇತನ 
  • ಸೆ.5ರಂದು ಈ ಯೋಜನೆಗೆ ಸಾಂಕೇತಿಕ ಚಾಲನೆ 
18 lakh students to get scholarship from karnataka govt snr

ವಿಜಯಪುರ (ಆ.22): 18 ಲಕ್ಷ ರೈತರ ಮಕ್ಕಳಿಗೆ ಪಿಯುಸಿಯಿಂದ ಪಿಜಿಯವರೆಗೆ ವಿಶೇಷ ಶಿಷ್ಯವೇತನ ನೀಡುವ ಗುರಿ ಇದೆ. ಸೆ.5ರಂದು ಈ ಯೋಜನೆಗೆ ಸಾಂಕೇತಿಕ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಯೋಜನೆಗೆ 1 ಸಾವಿರ ಕೋಟಿ ರು. ಮೀಸಲಿರಿಸಲಾಗಿದೆ. ಬಡವರಿಗಾಗಿ ಸಾಮಾಜಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ಸಂಧ್ಯಾ ಸುರಕ್ಷಾ, ಅಂಗವಿಕಲರ ಮಾಸಾಶನ ಏರಿಕೆ ಮಾಡಲಾಗಿದೆ ಎಂದರು.

ರೈತರ ಮಕ್ಕಳಿಗೆ ಸಿಹಿ ಸುದ್ದಿ: ಬೊಮ್ಮಾಯಿ ಘೋಷಿಸಿದ್ದ ಯೋಜನೆ ಜಾರಿಗೆ
 
ರೈತರ ಮಕ್ಕಳು ಕರ್ನಾಟಕ ರಾಜ್ಯದ ಅನುದಾನದಿಂದ ಪಾವತಿಸುವಂತಹ ಒಂದು ವಿದ್ಯಾರ್ಥಿ ವೇತನಕ್ಕೆ ಮಾತ್ರ ಅರ್ಹರಿರುತ್ತಾರೆ. ಆದಾಗ್ಯೂ ಮೆರಿಟ್‌, ಅರ್ಹತಾ ಪರೀಕ್ಷೆ, ಶೈಕ್ಷಣಿಕ ಪರೀಕ್ಷೆಗಳಲ್ಲಿ ರ‍್ಯಾಂಕ್ ಇತ್ಯಾದಿಗಳ ಆಧಾರದ ಮೇಲೆ ಪಡೆಯುವ ವಿದ್ಯಾರ್ಥಿವೇತನ, ಪ್ರಶಸ್ತಿ ಹಣಗಳನ್ನು (ರಿವಾರ್ಡ್‌) ರೈತರ ಮಕ್ಕಳು ಪಡೆದಿದ್ದರೂ ಈ ವಿದ್ಯಾರ್ಥಿವೇತನ ಪಡೆಯಲೂ ಅರ್ಹರಿರುತ್ತಾರೆ.

ಶಿಷ್ಯವೇತನವು ಶಿಕ್ಷಣದ ಯಾವುದೇ ಕೋರ್ಸ್‌ನ ಸೆಮಿಸ್ಟರ್‌, ಶೈಕ್ಷಣಿಕ ವರ್ಷಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಒಂದು ಸೆಮಿಸ್ಟರ್‌ನಲ್ಲಿ ಫೇಲ್‌ ಆಗಿ ಮತ್ತೆ ಪುನರಾವರ್ತನೆಯಾಗುವ ಸಮಯದಲ್ಲಿ ವಿದ್ಯಾರ್ಥಿ ವೇತನ ಸಿಗುವುದಿಲ್ಲ. ವಿದ್ಯಾರ್ಥಿ ವೇತನವನ್ನು ಯಾವುದಾದರೂ ಒಂದು ವಿಧದ ಕೋರ್ಸ್‌ಗೆ ಮಾತ್ರ ನೀಡಲಾಗುವುದು. ಉದಾ: ಒಂದು ಸ್ನಾತಕೋತ್ತರ ಪದವಿ ಪೂರೈಸಿ ಬಳಿಕ ಮತ್ತೊಂದು ಸ್ನಾತಕೋತ್ತರ ಪದವಿ ತೆಗೆದುಕೊಂಡರೆ ಎರಡನೇ ಬಾರಿ ವಿದ್ಯಾರ್ಥಿ ವೇತನ ನೀಡಲಾಗುವುದಿಲ್ಲ ಎಂದು ಕೃಷಿ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

Latest Videos
Follow Us:
Download App:
  • android
  • ios