ರಾಜ್ಯದ 2 ಇಂಜಿನಿಯರಿಂಗ್ ಕಾಲೇಜಲ್ಲಿ ಕನ್ನಡದಲ್ಲಿ ಬಿಇ!

2022-23ನೇ ಸಾಲಿನಲ್ಲಿ ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್‌ ಶಿಕ್ಷಣ ನೀಡಲು ರಾಜ್ಯದ ಎರಡು ಕಾಲೇಜುಗಳು ಮುಂದೆ ಬಂದಿವೆ. ಚಿಕ್ಕಬಳ್ಳಾಪುರದ ಎಸ್‌ಜೆಸಿ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಮತ್ತು ಭಾಲ್ಕಿಯ ಭೀಮಣ್ಣ ಖಂಡ್ರೆ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್‌ ಶಿಕ್ಷಣ ನೀಡಲು ಎಐಸಿಟಿಇಯಿಂದ ಅನುಮತಿ ಪಡೆದಿವೆ.

2 engineering colleges of the state give education in Kannada language akb

ಕನ್ನಡಪ್ರಭ ವಾರ್ತೆ ಬೆಂಗಳೂರು

ಬೆಂಗಳೂರು: 2022-23ನೇ ಸಾಲಿನಲ್ಲಿ ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್‌ ಶಿಕ್ಷಣ ನೀಡಲು ರಾಜ್ಯದ ಎರಡು ಕಾಲೇಜುಗಳು ಮುಂದೆ ಬಂದಿವೆ. ಚಿಕ್ಕಬಳ್ಳಾಪುರದ ಎಸ್‌ಜೆಸಿ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಮತ್ತು ಭಾಲ್ಕಿಯ ಭೀಮಣ್ಣ ಖಂಡ್ರೆ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್‌ ಶಿಕ್ಷಣ ನೀಡಲು ಎಐಸಿಟಿಇಯಿಂದ ಅನುಮತಿ ಪಡೆದಿವೆ ಎಂದು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 2021-22ನೇ ಸಾಲಿನಿಂದ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು (ಎಐಸಿಟಿಇ) ಪ್ರಾದೇಶಿಕ ಭಾಷೆ ಅಥವಾ ಮಾಧ್ಯಮದಲ್ಲಿ ಬಿಇ ಶಿಕ್ಷಣಕ್ಕೆ ಅವಕಾಶ ನೀಡಿದೆ. ಸದ್ಯದ ಮಟ್ಟಿಗೆ ಈ ಅವಕಾಶ ಸಿವಿಲ್‌ ಮತ್ತು ಮೆಕಾನಿಕಲ್‌ ಎಂಜಿನಿಯರಿಂಗ್‌ ಕೋರ್ಸುಗಳಿಗೆ ಮಾತ್ರ ಇದೆ.

2021-22ನೇ ಶೈಕ್ಷಣಿಕ ವರ್ಷದಲ್ಲಿ ಐದು ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ಕನ್ನಡ ಮಾಧ್ಯಮದಲ್ಲಿ ಬಿಇ ಶಿಕ್ಷಣ ನೀಡಲು ನಿರ್ಧರಿಸಿದ್ದವು. ಸಿಇಟಿ ಕೌನ್ಸೆಲಿಂಗ್‌ ಸಂದರ್ಭದಲ್ಲಿ ಕೆಲ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದ ಕಾಲೇಜುಗಳನ್ನು ಆಯ್ಕೆ ಮಾಡಿದ್ದರಾದರೂ ಕೊನೆಗೆ ಆ ಸೀಟಿಗೆ ಪ್ರವೇಶ ಪಡೆಯದೆ ಸೀಟುಗಳನ್ನು ರದ್ದುಪಡಿಸಿಕೊಂಡಿದ್ದರು. ಇದರಿಂದ ಕಳೆದ ವರ್ಷ ಒಬ್ಬ ವಿದ್ಯಾರ್ಥಿಯೂ ಕನ್ನಡ ಮಾಧ್ಯಮವನ್ನು ಆಯ್ಕೆ ಮಾಡಿಕೊಂಡಿರಲಿಲ್ಲ ಎಂದು ವಿಟಿಯು ಅಧಿಕಾರಿಗಳು ತಿಳಿಸಿದ್ದರು. ಕನ್ನಡ ಮಾಧ್ಯಮದಲ್ಲಿ ಬಿಇ ಓದಿದರೆ ಉದ್ಯೋಗಾವಕಾಶಗಳು ಸಿಗುತ್ತವೋ ಇಲ್ಲವೋ ಎಂಬ ಆತಂಕ, ಗೊಂದಲ ವಿದ್ಯಾರ್ಥಿಗಳಲ್ಲಿದೆ. ಇದು ದೂರವಾಗಬೇಕು. ತಾಂತ್ರಿಕ ಶಿಕ್ಷಣಕ್ಕೆ ಭಾಷೆ ಮುಖ್ಯವಲ್ಲ. ಕೌಶಲ್ಯ ಮುಖ್ಯ. ಭಾಷೆ ಸಂವಹನಕ್ಕೆ ಸೀಮಿತವಾಗಿದ್ದರೂ ಸಾಕು ಎನ್ನುತ್ತಾರೆ ತಜ್ಞರು.

ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್, ಇನ್ಮುಂದೆ ಸ್ಪೋಕನ್ ಇಂಗ್ಲೀಷ್ ಕ್ಲಾಸ್

ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್‌ ಮಾಡಲು ವಿದ್ಯಾರ್ಥಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಉದ್ಯೋಗ ಮೀಸಲಾತಿ ಒದಗಿಸುವಂತೆ ರಾಜ್ಯ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳಿಗೆ ಸಲಹೆ ನೀಡಿ ಪತ್ರ ಬರೆದಿತ್ತು.

Mangalore ಕಾಸರಗೋಡು ಕನ್ನಡ ಶಾಲೆಗೆ ಮತ್ತೆ ಮಲಯಾಳಂ ಕಂಟಕ!

Latest Videos
Follow Us:
Download App:
  • android
  • ios