PUC Exam Time Table: 2021-22ನೇ ಸಾಲಿನ ದ್ವೀತಿಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
* ದ್ವೀತಿಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
* 2021-22ನೇ ಸಾಲಿನ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ ಪದವಿ ಪೂರ್ವ ಶಿಕ್ಷಣ ಇಲಾಖೆ
* ಏಪ್ರಿಲ್ 16ರಿಂದ ಮೇ 4ರವರೆಗೆ ನಡೆಯಲಿರುವ ಪರೀಕ್ಷೆಗಳು
ಬೆಂಗಳೂರು, (ಜ.18): ಎಸ್‌ಎಸ್‌ಎಲ್‌ಸಿ(SSLC) ಬೆನ್ನಲ್ಲೇ ಇದೀಗ ದ್ವೀತಿಯ ಪಿಯುಸಿ ಪರೀಕ್ಷೆಯ(PUC Exams) ತಾತ್ಕಾಲಿಕ ವೇಳಾಪಟ್ಟಿ(Provisional Time Table) ಬಿಡುಗಡೆ ಮಾಡಲಾಗಿದೆ.
ಇಂದು(ಮಂಗಳವಾರ) ಪದವಿ ಪೂರ್ವ ಶಿಕ್ಷಣ ಇಲಾಖೆ (PUC Board) 2021-22ನೇ ಸಾಲಿನ ದ್ವೀತಿಯ ಪಿಯುಸಿಯ (Second PUC) ತಾತ್ಕಾಲಿಕ ವೇಳಾಪಟ್ಟಿ (Exam Timetable) ಬಿಡುಗಡೆ ಮಾಡಿದೆ.
SSLC Time Table ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಏಪ್ರಿಲ್ 16ರಿಂದ ಮೇ 4ರವರೆಗೆ ಪಿಯು ವಾರ್ಷಿಕ ಪರೀಕ್ಷೆ ನಡೆಯಲಿವೆ. ಇದು ತಾತ್ಕಾಲಿಕ ವೇಳಾಪಟ್ಟಿಯಾಗಿದ್ದು, ಇದರಲ್ಲಿ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಪತ್ರದ ಮೂಲಕ ತಿಳಿಸಬಹುದು. ಆ ಬಳಿಕ ಎಲ್ಲಾವುಗಳನ್ನ ಪರಿಶೀಲಿಸಿ ಅಂತಿಮವಾಗಿ ಫೈನಲ್ ವೇಳಾಪಟ್ಟಿ ರಿಲೀಸ್ ಮಾಡುತ್ತದೆ.
ಪಿಯುಸಿ ವೇಳಾಪಟ್ಟಿ ಇಂತಿದೆ
ಏಪ್ರಿಲ್ 14- ಗಣಿತ
ಏಪ್ರಿಲ್ 18- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏ.20- ಇತಿಹಾಸ, ಭೌತಶಾಸ್ತ್ರ
ಏಪ್ರಿಲ್ 22- ತರ್ಕಶಾಸ್ತ್ರ
ಏ.23- ಮನಃಶಾಸ್ತ್ರ, ರಸಾಯನಶಾಸ್ತ್ರ,
ಏ.25- ಅರ್ಥಶಾಸ್ತ್ರ
ಏ.26- ಹಿಂದಿ,
ಏಪ್ರಿಲ್ 28- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಏ.29- ಕನ್ನಡ
ಏ.30- ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್
ಮೇ 2- ಭೂಗೋಳ ಶಾಸ್ತ್ರ ಹಾಗೂ ಜೀವಶಾಸ್ತ್ರ
ಮೇ 4- ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.
ಇತ್ತೀಚೆಗೆ ಮುಕ್ತಾಯಗೊಂಡ ದ್ವಿತೀಯ ಪಿಯುಸಿ (Second PUC) ಮಧ್ಯ ವಾರ್ಷಿಕ ಪರೀಕ್ಷೆಯ ವಿವಿಧ ಪ್ರಶ್ನೆ ಪತ್ರಿಕೆಗಳಲ್ಲಿ ಅನೇಕ ಪ್ರಶ್ನೆಗಳನ್ನು ತಪ್ಪಾಗಿ ಕೇಳಿರುವುದಲ್ಲದೆ, ಪುರಾವರ್ತನೆ, ಸಾಕಷ್ಟು ಮುದ್ರಣದ ದೋಷದ ಸರಮಾಲೆಯೇ ಕಂಡುಬಂದಿದೆ.
ಈ ಬಾರಿ ಪದವಿ ಪೂರ್ವ ಶಿಕ್ಷಣ ಇಲಾಖೆಯೇ (PU Board) ಸಿದ್ಧಪಡಿಸಿ ನೀಡಿರುವ ಪ್ರಶ್ನೆ ಪತ್ರಿಕೆಗಳಲ್ಲಿ ಲೋಪಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಂದಲೇ ಆರೋಪಗಳು ಕೇಳಿಬರುತ್ತಿವೆ. ಲೆಕ್ಕಶಾಸ್ತ್ರ, ಇಂಗ್ಲಿಷ್ (english) , ಗಣಿತ, ರಸಾಯನಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳ ಪ್ರಶ್ನೆ ಪತ್ರಿಕೆಗಳಲ್ಲಿ ಈ ರೀತಿಯ ಹಲವು ಲೋಪಗಳು ಕಂಡು ಬಂದಿವೆ. ಪ್ರಶ್ನೆ ಪತ್ರಿಕೆ ( Question Paper ) ಸಿದ್ಧಪಡಿಸುವಲ್ಲಿ ಪಿಯು ಇಲಾಖೆ ನಿರ್ಲಕ್ಷ್ಯದಿಂದ ಈ ರೀತಿ ಆಗಿದೆ ಎಂದು ವಿದ್ಯಾರ್ಥಿ (Students) , ಉಪನ್ಯಾಸಕರು ಕಿಡಿಕಾರಿದ್ದಾರೆ.
ಅಲ್ಲದೆ, ತಪ್ಪಾಗಿ ಕೇಳಿರುವ ಪ್ರಶ್ನೆಗಳು ಹಾಗೂ ಮುದ್ರಣ ದೋಷಗಳನ್ನು ಗುರುತಿಸಿರುವ ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ (Social Media) ಹರಿದಾಡುತ್ತಿವೆ.
ತಪ್ಪುಗಳೇನು? ರಾಜ್ಯದ ವಿವಿಧ ಕಾಲೇಜುಗಳ ಉಪನ್ಯಾಸಕರು ನೀಡಿದ ಮಾಹಿತಿ ಪ್ರಕಾರ, ಇಂಗ್ಲಿಷ್ ಪ್ರಶ್ನೆ ಪತ್ರಿಕೆಯ ಪ್ರಶ್ನೆ 8ರಲ್ಲಿ ಪದ್ಯದ ಹೆಸರನ್ನೇ ಬದಲಿಸಲಾಗಿದೆ. ‘ವೆನ್ ಯು ಆರ್ ಓಲ್ಡ್’ ಎನ್ನುವ ಹೆಸರಿನ ಬದಲು ‘ಆನ್ ಚಿಲ್ಡ್ರನ್’ ಎಂದು ನೀಡಲಾಗಿದೆ.
ಅಲ್ಲದೆ ಈ ಬಾರಿಯ ಮಧ್ಯವಾರ್ಷಿಕ ಪರೀಕ್ಷೆಗೆ ನಿಗದಿಪಡಿಸಿರುವ ಪಠ್ಯದಲ್ಲಿ ಡೈಲಾಗ್ ಡೆಲಿವರಿಯೇ ಇರಲಿಲ್ಲ. ಆದರೆ, ಪ್ರಶ್ನೆ ಪತ್ರಿಕೆಯಲ್ಲಿ ಅದನ್ನೂ ಕೇಳಲಾಗಿದೆ ಎಂದು ಆರೋಪಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(Karnataka Secondary Education Examination Board) ಇಂದು (ಜ.06) 2021-22ನೇ ಸಾಲಿನ 10ನೇ ತರಗತಿ (SSLC)ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಪರೀಕ್ಷೆಗಳು ನಡೆಯಲಿವೆ.
ಮಾರ್ಚ್ 28 - ಕನ್ನಡ
ಮಾರ್ಚ್ 30 - ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ
ಏಪ್ರಿಲ್ 1 - ಅರ್ಥಶಾಸ್ತ್ರ
ಏಪ್ರಿಲ್ 4 - ಗಣಿತ, ಸಮಾಜ ಶಾಸ್ತ್ರ
ಏಪ್ರಿಲ್ 6 - ಸಮಾಜ ವಿಜ್ಞಾನ
ಏಪ್ರಿಲ್ 8 - ತೃತೀಯ ಭಾಷೆ ಹಿಂದಿ
ಏಪ್ರಿಲ್ 11 - ವಿಜ್ಞಾನ