Teacher Recruitment: ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಮುಂದಿನ ತಿಂಗಳು  ಫೆಬ್ರವರಿಯಲ್ಲಿ ಸುಮಾರು 2,500 ಪ್ರೌಢ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

2500 high school teacher Recruitment next month Education minister BC Nagesh sat

ಶಿವಮೊಗ್ಗ (ಜ.07): ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಇರುವಾಗ ಸುಮಾರು 3 ಸಾವಿರಕ್ಕೂ ಅಧಿಕವಾಗಿ ಶಿಕ್ಷಕರ ನೇಮಕಾತಿ ಮಾಡಲಾಗಿತ್ತು. ಈಗ ಸುಮಾರು 13,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಇನ್ನು ಫೆಬ್ರವರಿಯಲ್ಲಿ ಸುಮಾರು 2,500 ಪ್ರೌಢ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಎಲ್ಲೆಲ್ಲಿ ಶಿಕ್ಷಕರ ಕೊರತೆ ಇದೆಯೋ ಅಂತಹ ಎಲ್ಲ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಹಾಲಿ ಅತಿಥಿ ಶಿಕ್ಷಕರನ್ನು ತೆಗೆದು ಹಾಕಿರುವ ಕುರಿತು ನನಗೆ ಮಾಹಿತಿ ಇಲ್ಲ. ಎಲ್ಲ ಶಾಲೆಗಳಲ್ಲಿ ಹೆಚ್ಚು ವರ್ಷಗಳ ಕಾಲ ಅನುಭವ ಇರುವಂತಹ ಶಿಕ್ಷಕರನ್ನು ಅತಿಥಿ ಶಿಕ್ಷಕರಾಗಿ ನಿಯೋಜನೆ ಮಾಡಿಕೊಳ್ಳಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

2015ರವರೆಗಿನ ಖಾಲಿ ಬೋಧಕ ಹುದ್ದೆಗೆ ಶೀಘ್ರವೇ ನೇಮಕಾತಿ: ಸಚಿವ ಬಿ ಸಿ ನಾಗೇಶ್‌

ಜ.16 ರಂದು ಕೋರ್ಟ್‌ ವಿಚಾರಣೆ: ಶಿಕ್ಷಕರ ನೇಮಕಾತಿ ಕುರಿತ ವಿಚಾರಣೆ ಕೋರ್ಟ್ ನಲ್ಲಿದೆ. ಜನವರಿ 16 ರಂದು ಕೋರ್ಟ್‌ನಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕುರಿತು ವಿಚಾರಣೆ ನಡೆಯಲಿದೆ. ನ್ಯಾಯಾಲಯದಲ್ಲಿ ಏನು ತೀರ್ಪು ಬರುತ್ತದೆ ಎಂಬುದನ್ನು ನೋಡಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.  ನಮ್ಮ ಬಿಜೆಪಿ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದೆ. ವಾಜಪೇಯಿ ಅವರು ಪ್ರಧಾನಮಂತ್ರಿ ಆಗಿದ್ದಾಗ ಸರ್ವ ಶಿಕ್ಷಣ ಅಭಿಯಾನ ಜಾರಿಗೆ ತಂದರು. ಈ ಯೋಜನೆಯಡಿ ಎಲ್ಲಾ ಗ್ರಾಮದಲ್ಲೂ ಶಾಲೆ ಇರಬೇಕು ಎಂದು ಪ್ರತಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ನೆರವು ನೀಡಲಾಗಿದೆ ಎಂದು ತಿಳಿಸಿದರು.

ನಮ್ಮ ಸರ್ಕಾರದಲ್ಲಿ 36,117 ಕೊಠಡಿ ನಿರ್ಮಾಣ : ಕಾಂಗ್ರೆಸ್ ಸರ್ಕಾರ ಶಿಕ್ಷಕರ ನೇಮಕಾತಿ ಹಾಗೂ ಕೊಠಡಿಗಳ ನಿರ್ಮಾಣವನ್ನು ಮಾಡಿಲ್ಲ. ಕಾಂಗ್ರೆಸ್‌ ಅವಧಿಯಲ್ಲಿ ಕೇವಲ 3,617 ಶಾಲಾ ಕೊಠಡಿ ನಿರ್ಮಾಣ ಮಾಡಿದ್ದು,  ಕೊನೆ ವರ್ಷದಲ್ಲಿ 5 ಸಾವಿರ ಕೊಠಡಿಗಳ ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ ಅದು ಪೂರ್ಣಗೊಂಡಿರಲಿಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿಯವರು ಕೊಠಡಿ ನಿರ್ಮಾಣದಲ್ಲಿ ಆಸಕ್ತಿ ತೋರಿಸಿದ್ದರು. ಈಗ ನಮ್ಮ ಸರ್ಕಾರ ಬಂದ ಮೇಲೆ 8 ಸಾವಿರ ಕೊಠಡಿಗಳ ನಿರ್ಮಾಣ ಮಾಡಲಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ 36,117 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ. ಜೊತೆಗೆ 18,618 ಕೊಠಡಿಗಳನ್ನು ದುರಸ್ತಿ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇತ್ತೀಚೆಗೆ ನಡೆದ ಬೆಳಗಾವಿ ಅಧಿವೇಶನದಲ್ಲಿ ತಿಳಿಸಿದ್ದರು. 

 

ಮಾತೃಭಾಷೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಿ: ನಾಗೇಶ್‌

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ: ಕಳೆದ ವರ್ಷ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದ್ದರು. ನೇಮಕಾತಿ ಸಂಬಂಧ ಮಾತನಾಡಿದ್ದ ಅವರು, 15 ಸಾವಿರ ಶಿಕ್ಷಕರ ನೇಮಕಾತಿಗೆ ಪರೀಕ್ಷೆ ಮಾಡಿದ್ದೆವು. 1:1 ಆಧಾರದಲ್ಲಿ 13,363 ಅಭ್ಯರ್ಥಿಗಳು ಪಟ್ಟಿಯಲ್ಲಿ ಇದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ 5 ಸಾವಿರ ಹುದ್ದೆ ಇಟ್ಟಿದ್ದೇವೆ. ಆದರೆ ಅಲ್ಲಿ ಸ್ವಲ್ಪ ಕೊರತೆ ಆಗಿದೆ. 5 ಸಾವಿರ ಹುದ್ದೆ ಪೈಕಿ 4,187 ಜನರ ಪಟ್ಟಿ ಬಿಡುಗಡೆ ಆಗಿದೆ. ಉಳಿದ ಭಾಗದಲ್ಲಿ 9,176 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದ್ದರು.

Latest Videos
Follow Us:
Download App:
  • android
  • ios