Karnataka 2nd PUC Exam 2023: ಪಿಯು ಪರೀಕ್ಷೆಗೆ ಉಚಿತ ಬಸ್‌ ಪ್ರಯಾಣ: ಕೆಎಸ್‌ಆರ್‌ಟಿಸಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಮಾರ್ಚ್‌ 9ರಿಂದ 29ರವರೆಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಿದೆ. 

2nd puc exam students can travel free in ksrtc bus to exam venue by showing hal ticket gvd

ಬೆಂಗಳೂರು (ಮಾ.04): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಮಾರ್ಚ್‌ 9ರಿಂದ 29ರವರೆಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಿದೆ. ಮಾರ್ಚ್‌ 9ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. 

ಆದ್ದರಿಂದ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರು ಕೋರಿದ್ದ ಹಿನ್ನೆಲೆಯಲ್ಲಿ ಈ ಅವಕಾಶ ಕಲ್ಪಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಎಲ್ಲೆಲ್ಲೋ ನಡೆಯುತ್ತಿರುವ ಭ್ರಷ್ಟಾಚಾರ ಪ್ರಕರಣ ನಮಗೇಕೆ? ಜಿಲ್ಲೆಯಲ್ಲೇ ಸಾಕಷ್ಟು ಹಗರಣಗಳಿವೆ: ಸುಮಲತಾ

ಕೆಎಸ್‌ಆರ್‌ಟಿಸಿ ಬಸ್‌ಗಳ ಎಲ್ಲ ಚಾಲಕರು, ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಚನೆ ನೀಡಲಾಗಿದೆ. ಪ್ರವೇಶ ಪತ್ರದ ಆಧಾರದ ಮೇಲೆ ಬಸ್‌ಗಳ ಕಾರ್ಯಾಚರಣೆ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್‌ ಹತ್ತುವವರಿದ್ದಲ್ಲಿ ಹಾಗೂ ಕಾರ್ಯಾಚರಣೆ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳು ಇದ್ದಲ್ಲಿ ವಿದ್ಯಾರ್ಥಿಗಳು ಬಸ್‌ ಹತ್ತಲು ಮತ್ತು ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸೂಚನೆ ನೀಡಿದ್ದಾರೆ.

Latest Videos
Follow Us:
Download App:
  • android
  • ios