ಕೋವಿಡ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು 8 ರಾಜ್ಯಗಳಲ್ಲಿ 12ನೇ ತರಗತಿ ಪರೀಕ್ಷೆ ರದ್ದುಪಡಿಸಿ ಆದೇಶ ಕರ್ನಾಟಕದ ನಿರ್ಧಾರ ಇಂದು ಪ್ರಕಟ
ಲಖನೌ (ಜೂ.04): ಕೋವಿಡ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು ಮಾಡಿದ ಬೆನ್ನಲ್ಲೇ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಸರ್ಕಾರಗಳೂ ಗುರುವಾರ 12ನೇ ತರಗತಿ ಪರೀಕ್ಷೆ ರದ್ದು ಮಾಡಿ ಆದೇಶ ಹೊರಡಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅಸ್ಸಾಂನಲ್ಲಿಯೂ ಸಹ ಈ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಸಿಬಿಎಸ್‌ಇ, ಐಸಿಎಸ್‌ಇ ಪರೀಕ್ಷೆ ರದ್ದತಿಗೆ ಸುಪ್ರೀಂ ಸಂತಸ ...
ಇದರೊಂದಿಗೆ ಒಟ್ಟು 8 ರಾಜ್ಯಗಳು 12ನೇ ತರಗತಿ ಪರೀಕ್ಷೆ ರದ್ದುಪಡಿಸಿದಂತೆ ಆಗಿದೆ. ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ, ಹರ್ಯಾಣ, ಗೋವಾ, ರಾಜಸ್ಥಾನ ರದ್ದುಪಡಿಸಿದ ಇತರೆ ರಾಜ್ಯಗಳು.
ಕರ್ನಾಟಕದಲ್ಲಿ ಇಂದು ಅಧಿಕೃತ ನಿರ್ಧಾರ ಹೊರಬೀಳಲಿದೆ.
