40 ಸಾವಿರಕ್ಕೂ ಅಧಿಕ ಶಿಕ್ಷಕರು ಕೆಲಸ ಕಳೆದುಕೊಂಡಿದ್ದು, ಸಾಲ ಮಾಡಿ ಅವರಿಗೆ ವೇತನ ನೀಡಬೇಕೆಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.

ಬೆಂಗಳೂರು (ಸೆ.06): ಬಿಜೆಪಿ ಸರ್ಕಾರದ ಅವಧಿಯಲ್ಲಿ ಖಾಸಗಿ ಶಾಲೆಗಳ 40 ಸಾವಿರಕ್ಕೂ ಅಧಿಕ ಶಿಕ್ಷಕರು ಕೆಲಸ ಕಳೆದುಕೊಂಡಿದ್ದಾರೆ. ಶಿಕ್ಷಕರಿಗೆ ಸಂಬಳ ನೀಡಲು ಸಹ ಸರ್ಕಾರ ಹಣಕಾಸು ಕೊರತೆಯ ನೆಪ ಹೇಳುತ್ತಿದೆ. ಸಾಲ ಮಾಡಿಯೇ ಸರ್ಕಾರ ನಡೆಸುತ್ತಿರುವ ಬಿ.ಎಸ್‌. ಯಡಿಯೂರಪ್ಪ ಅವರು ಶಿಕ್ಷಕರ ವೇತನಕ್ಕೂ ಸಾಲ ಮಾಡಲಿ ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.

ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸರ್ಕಾರದ ವೈಫಲ್ಯಗಳ ಬಗ್ಗೆ ಸರಣಿ ಟ್ವೀಟ್‌ಗಳ ಮೂಲಕ ಕಿಡಿ ಕಾರಿದ್ದಾರೆ.

1558 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ .

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಸುಮಾರು 20,000 ಅತಿಥಿ ಶಿಕ್ಷಕರಿಗೆ ಸಂಬಳವನ್ನೇ ನೀಡಿಲ್ಲ. ಖಾಸಗಿ ಶಾಲಾ ಶಿಕ್ಷಕರನ್ನು ಕೇಳುವವರೇ ಇಲ್ಲ. ಮೊದಲು ಈ ಶಿಕ್ಷಕರಿಗೆ ‘ಧನಾಗಮ’ದ ಕರಣೆ ತೋರಿ. ಆಮೇಲೆ ವಿದ್ಯಾಗಮದ ಪ್ರಚಾರ ನಡೆಯಲಿ ಎಂದು ಒತ್ತಾಯಿಸಿದ್ದಾರೆ.

ಅಂಚೆ ಇಲಾಖೆಯಲ್ಲಿ ನೇಮಕಾತಿ: ವಿದ್ಯಾರ್ಹತೆ 10ನೇ ತರಗತಿ .

ಡಿ.ಕೆ. ಶಿವಕುಮಾರ್‌ ಟ್ವೀಟ್‌ ಮಾಡಿ, ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಖಾಸಗಿ ಶಾಲೆಗಳ 40 ಸಾವಿರಕ್ಕೂ ಅಧಿಕ ಶಿಕ್ಷಕರು ಕೆಲಸ ಕಳೆದುಕೊಂಡಿದ್ದಾರೆ. 2 ಲಕ್ಷಕ್ಕೂ ಅಧಿಕ ಶಿಕ್ಷಕರಿಗೆ ಸಂಬಳವಿಲ್ಲದೆ ಒದ್ದಾಡುತ್ತಿದ್ದಾರೆ. ಮಕ್ಕಳ ಭವಿಷ್ಯ ರೂಪಿಸುವವರು ತಳ್ಳುಗಾಡಿ ವ್ಯಾಪಾರ, ಗಾರೆ ಕೆಲಸ ಮಾಡುತ್ತಿರುವಾಗ ಶಿಕ್ಷಣ ಕ್ಷೇತ್ರವನ್ನು ಸರಿ ದಾರಿಗೆ ತರಲು ಸರ್ಕಾರದ ಯೋಜನೆ ಏನು ಎಂದು ಪ್ರಶ್ನಿಸಿದರು.

ರಾಜ್ಯದ 80 ಲಕ್ಷ ವಿದ್ಯಾರ್ಥಿಗಳ ಪೈಕಿ ಶೇ.62.5ರಷ್ಟುಮಕ್ಕಳಿಗೆ ಮಾತ್ರ ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಲಭ್ಯತೆ ಇದೆ. ಶೇ.53.75 ರಷ್ಟುಮಕ್ಕಳಿಗೆ ಮಾತ್ರ ಇಂಟರ್ನೆಟ್‌ ಸಂಪರ್ಕವಿದೆ. ತಂತ್ರಜ್ಞಾನದ ಲಭ್ಯತೆ ಇಲ್ಲದ ಮಕ್ಕಳು ಆನ್‌ಲೈನ್‌ ಶಿಕ್ಷಣ ಪಡೆಯುವುದು ಹೇಗೆ? ಸರ್ಕಾರ ಈ ಕೂಡಲೇ ನಿದ್ದೆಯಿಂದ ಎದ್ದು ಹಳಿ ತಪ್ಪಿರುವ ಶಿಕ್ಷಣ ವ್ಯವಸ್ಥೆಯನ್ನು ಸರಿ ದಾರಿಗೆ ತರಬೇಕು. ಶಿಕ್ಷಕರಿಗೆ ನೆರವಾಗಲು ಅವರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.