Asianet Suvarna News Asianet Suvarna News

‘ಶಾಹೀನ್‌’ನಿಂದ 5 ಕೋಟಿ ರು. ವಿದ್ಯಾರ್ಥಿ ವೇತನ

ವಿದ್ಯಾರ್ಥಿಗಳ ಅನುಕೂಲತೆ ದೃಷ್ಟಿಯಿಂದ ಶಾಹೀನ್‌ನಿಂದ 5 ಕೋಟಿ ರು. ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

5 Crore Scholarship From Shaheen group snr
Author
Bengaluru, First Published Oct 21, 2020, 7:21 AM IST

ಬೀದರ್‌ (ಅ.21):  ಶಾಹೀನ್‌ ಶಿಕ್ಷಣ ಸಂಸ್ಥೆಯು ಪ್ರಸಕ್ತ ಸಾಲಿನ ನೀಟ್‌ ದೀರ್ಘ ಕಾಲದ ರಿಪೀಟರ್‌ ತರಬೇತಿ ಹಾಗೂ ಇತರ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ 5 ಕೋಟಿ ರು. ವಿದ್ಯಾರ್ಥಿ ವೇತನ ಪ್ರಕಟಿಸಿದೆ.

ಕೊರೋನಾ ಹಾಗೂ ಅತಿವೃಷ್ಟಿಯಿಂದಾಗಿ ಪಾಲಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ನೀಟ್‌ನಲ್ಲಿ ಅಖಿಲ ಭಾರತ ಮಟ್ಟದಲ್ಲಿ 9ನೇ ಹಾಗೂ ಕರ್ನಾಟಕಕ್ಕೆ ಮೊದಲ ರಾರ‍ಯಂಕ್‌ ಗಳಿಸಿದ ಸಂಭ್ರಮದಲ್ಲಿರುವ ಸಂಸ್ಥೆಯು, ವಿದ್ಯಾರ್ಥಿ ವೇತನದ ಮೂಲಕ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗಲು ನಿರ್ಧರಿಸಿದೆ. ಸಂಸ್ಥೆಯ ದೇಶದ ಎಲ್ಲ ಶಾಖೆಗಳಲ್ಲೂ ವಿದ್ಯಾರ್ಥಿ ವೇತನ ನೀಡಲಾಗುವುದು. ಕಲ್ಯಾಣ ಕರ್ನಾಟಕದ ಗ್ರಾಮೀಣ ಭಾಗದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ಕೊಡಲಾಗುವುದು ಎಂದು ಶಾಹೀನ್‌ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಅಬ್ದುಲ್‌ ಖದೀರ್‌ ತಿಳಿಸಿದ್ದಾರೆ.

ಇವಿಷ್ಟು ತಿಳ್ಕೊಂಡ್ರೆ ನೀವು ಜೀವನದಲ್ಲಿ ಏನು ಬೇಕಾದರೂ ಎದುರಿಸಬಹುದು ಖಂಡಿತಾ...

ನೀಟ್‌ ದೀರ್ಘಕಾಲದ ರಿಪೀಟರ್‌ಗಳಿಗೆ ಅಂಕಗಳನ್ನು ಆಧರಿಸಿ ವಿದ್ಯಾರ್ಥಿ ವೇತನ ಕಲ್ಪಿಸಲಾಗುವುದು. ಸಂಸ್ಥೆಯ ಬೀದರ್‌ ಶಾಖೆಗೆ ಮಾತ್ರ ಅನ್ವಯಿಸುವಂತೆ ಪಿಯುಸಿ ಕಲಾ, ವಾಣಿಜ್ಯ, ಬಿಎ, ಬಿಎಸ್ಸಿ, ಬಿಕಾಂ ಪ್ರವೇಶ ಹಾಗೂ ಕೇಂದ್ರ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ಕೊಡಲಾಗುವುದು. ವಿದ್ಯಾರ್ಥಿ ವೇತನದಿಂದ ಮೂರು ಸಾವಿರ ವಿದ್ಯಾರ್ಥಿಗಳಿಗೆ ಪ್ರಯೋಜನ ಆಗುವ ನಿರೀಕ್ಷೆ ಇದೆ. ಕೊರೋನಾ ಕಾರಣದಿಂದ ಪಾಲಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ನೀಟ್‌ ತರಬೇತಿ ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ವೆಬ್‌ಸೈಟ್‌ www.shaheengroup.org ನಲ್ಲಿ ಉಚಿತವಾಗಿ ಹೆಸರು ನೋಂದಾಯಿಸಿ ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಬಹುದು. ನೀಟ್‌ ದೀರ್ಘ ಕಾಲದ ರಿಪೀಟರ್‌ ತರಬೇತಿ ಪ್ರವೇಶಕ್ಕೆ ನ.1 ಕಡೆ ದಿನ. ಹೆಚ್ಚಿನ ಮಾಹಿತಿಗೆ ಟೋಲ್‌ ಫ್ರೀ ಸಂಖ್ಯೆ 18001216235ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

32 ವರ್ಷಗಳ ಹಿಂದೆ 16 ಮಕ್ಕಳಿಂದ ಆರಂಭವಾಗಿರುವ ಶಾಹೀನ್‌ ಶಿಕ್ಷಣ ಸಂಸ್ಥೆಯಲ್ಲಿ ಇಂದು 17 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಒಟ್ಟು 42 ಶಾಖೆಗಳನ್ನು ಹೊಂದಿದೆ. ಗುಣಮಟ್ಟದ ಶಿಕ್ಷಣದ ಮೂಲಕ ದ್ವಿತೀಯ ಪಿಯುಸಿ, ಸಿಇಟಿ, ನೀಟ್‌ ಫಲಿತಾಂಶದಲ್ಲಿ ರಾಜ್ಯ, ರಾಷ್ಟ್ರದ ಗಮನ ಸೆಳೆದಿದೆ ಎಂದು ತಿಳಿಸಿದ್ದಾರೆ.

Follow Us:
Download App:
  • android
  • ios