ಶಿಕ್ಷಕರಿಗೊಂದು ಸಂತಸದ ಸುದ್ದಿ..!

* 2 ಲಕ್ಷ ಶಿಕ್ಷಕರ ಖಾತೆಗೆ 5000 ವರ್ಗಕ್ಕೆ ಸೂಚನೆ
* ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಶಿಕ್ಷಕರು
* ಅರ್ಹ ಫಲಾನುಭವಿಗಳಿಗೆ ಪರಿಹಾರ ಮೊತ್ತ ವರ್ಗಾಯಿಸಲು ತುರ್ತು ಕ್ರಮ
 

5000 Rs Transfer to Teachers Bank Account grg

ಬೆಂಗಳೂರು(ಆ.02):  ರಾಜ್ಯದ ಖಾಸಗಿ ಅನುದಾನರಹಿತ ಶಾಲೆಗಳಲ್ಲಿನ 2 ಲಕ್ಷಕ್ಕೂ ಹೆಚ್ಚು ಶಿಕ್ಷಕರಿಗೆ ಬಿಡುಗಡೆ ಮಾಡಿರುವ ತಲಾ 5000 ರು. ಆರ್ಥಿಕ ನೆರವನ್ನು ಅರ್ಹ ಶಿಕ್ಷಕರ ಬ್ಯಾಂಕ್‌ ಖಾತೆಗಳಿಗೆ ನೇರ ವರ್ಗಾವಣೆ ಮಾಡಲು ತುರ್ತು ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. 

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್‌ ಅವರು, ಕೋವಿಡ್‌ ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಅನುದಾನರಹಿತ ಶಾಲೆಗಳ 1,72,945 ಶಿಕ್ಷಕರು ಮತ್ತು 34,00 ಸಿಬ್ಬಂದಿಗೆ ತಲಾ 5 ಸಾವಿರ ರು. ಆರ್ಥಿಕ ಪ್ಯಾಕೇಜ್‌ ನೀಡಲು ಸರ್ಕಾರ ಒಟ್ಟಾರೆಯಾಗಿ 103.47 ಕೋಟಿ ರು. ಅನುದಾನವನ್ನು ಜು.2ರಂದು ಬಿಡುಗಡೆ ಮಾಡಿದೆ. ಅರ್ಹ ಫಲಾನುಭವಿಗಳಿಗೆ ಪರಿಹಾರ ಮೊತ್ತ ವರ್ಗಾಯಿಸಲು ತುರ್ತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೋವಿಡ್‌ ಪರಿಣಾಮ: ಶಾಲೆಗಳ ಆದಾಯ ಶೇ.20-50 ಕುಸಿತ!

ಶಿಕ್ಷಕರು, ಸಿಬ್ಬಂದಿಗಳ ಮಾಹಿತಿಯನ್ನು ಸ್ಟೂಡೆಂಟ್ಸ್‌ ಅಚೀವ್‌ಮೆಂಟ್‌ ಟ್ರ್ಯಾಕಿಂಗ್‌ ಸಿಸ್ಟಮ್‌ (ಎಸ್‌ಎಟಿಎಸ್‌) ನಲ್ಲಿ ದಾಖಲಿಸುವ ಜವಾಬ್ದಾರಿಯನ್ನು ಆಯಾ ಶಾಲಾ ಮುಖ್ಯ ಶಿಕ್ಷಕರಿಗೆ ನೀಡಿದ್ದು, ಈ ಕಾರ್ಯವನ್ನು ಆ.3ರೊಳಗೆ ಮುಕ್ತಾಯಗೊಳಿಸಬೇಕಿದೆ. ಅದೇ ರೀತಿ ಮುಖ್ಯ ಶಿಕ್ಷಕರು ದಾಖಲಿಸಿದ ಶಿಕ್ಷಕರ ಮತ್ತು ಸಿಬ್ಬಂದಿಗಳ ವಿವರಗಳನ್ನು ಬಿಇಒಗಳು ಆ.6ರೊಳಗೆ ಪರಿಶೀಲಿಸಿ ಅನುಮೋದಿಸಬೇಕು. ಶಿಕ್ಷಕರ ಡೇಟಾ ಮಾಹಿತಿಯನ್ನು ಪರಿಶೀಲಿಸದೆ ಅನುಮೋದನೆ ನೀಡಿ, ಮುಂದೆ ಸಮಸ್ಯೆಗಳು ಉದ್ಭವಿಸಿದಲ್ಲಿ ಮುಂದಿನ ಆಗು-ಹೋಗುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನೇ ನೇರ ಜವಾಬ್ದಾರಿಯನ್ನಾಗಿ ಮಾಡಲಾಗುವುದು ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
 

Latest Videos
Follow Us:
Download App:
  • android
  • ios