ಇಂದು 5, 8, 9ನೇ ಕ್ಲಾಸ್‌ ಬೋರ್ಡ್‌ ಪರೀಕ್ಷೆ ಫಲಿತಾಂಶ: ಶಾಲಾ ಪರೀಕ್ಷಾ ಮಂಡಳಿ

ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗಿದ್ದ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶವನ್ನು ಆಯಾ ಶಾಲೆಗಳಲ್ಲಿ ಸೋಮವಾರ (ಏ.8) ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೂಚಿಸಿದೆ.

5th 8th 9th class karnataka board exam result on apr 8th gvd

ಬೆಂಗಳೂರು (ಏ.08): ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗಿದ್ದ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶವನ್ನು ಆಯಾ ಶಾಲೆಗಳಲ್ಲಿ ಸೋಮವಾರ (ಏ.8) ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೂಚಿಸಿದೆ. 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ಕಳೆದ ಮಾರ್ಚ್‌ನಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸಲಾಗಿತ್ತು. 

ಬ್ಲಾಕ್ ಹಂತದಲ್ಲಿ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಉತ್ತರ ಪತ್ರಿಕೆಗಳ ಸಹಿತ ಶಾಲಾವಾರು ವಿದ್ಯಾರ್ಥಿಗಳ ಅಂಕಗಳನ್ನು ದಾಖಲಿಸಿರುವ ಪ್ರತಿಯನ್ನು ಆಯಾ ಶಾಲೆಗಳಿಗೆ ರವಾನಿಸಲಾಗಿದೆ. ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಸೋಮವಾರ ಶಾಲಾ ಹಂತದಲ್ಲಿ ಫಲಿತಾಂಶ ಪ್ರಕಟಿಸಬೇಕು. ಫಲಿತಾಂಶ ಪ್ರಕಟಿಸಿರುವ ಬಗ್ಗೆ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಂಡಳಿಗೆ ಹಾಗೂ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಗಳು ತಮ್ಮ ಕಚೇರಿಗೆ ಮಾಹಿತಿ ನೀಡಬೇಕೆಂದು ಮಂಡಳಿಯ ಅಧ್ಯಕ್ಷರು ಸೂಚಿಸಿದ್ದಾರೆ.

ಉಚಿತ ವಿದ್ಯುತ್‌ನಿಂದ ಸಾಲದಲ್ಲಿ ಸಿಲುಕುತ್ತೀರಿ: ರಾಜ್ಯಗಳಿಗೆ ಕೇಂದ್ರ ಸರ್ಕಾರದ ಎಚ್ಚರಿಕೆ

ಮೌಲ್ಯಮಾಪನ ಲೋಪ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 5, 8 ಮತ್ತು 9ನೇ ತರಗತಿ ಬೋರ್ಡ್‌ ಪರೀಕ್ಷಾ ಮೌಲ್ಯಾಂಕನದ ಫಲಿತಾಂಶವನ್ನು ಆಯಾ ಶಾಲೆಗಳಿಗೆ ಕಳುಹಿಸಿದ್ದು ಇದರಲ್ಲಿ ಅನೇಕ ಲೋಪದೋಷಗಳು ಕಂಡುಬಂದಿವೆ ಎಂದು ಖಾಸಗಿ ಶಾಲಾ ಸಂಘಟನೆ ಕ್ಯಾಮ್ಸ್‌ ಆರೋಪಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಕ್ಯಾಮ್ಸ್‌ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌, ಮೌಲ್ಯಾಂಕನ ಸಂಬಂಧ ಶಾಲಾವಾರು ಫಲಿತಾಂಶ ಹಾಗೂ ಉತ್ತರ ಪತ್ರಿಕೆಗಳನ್ನು ಮಂಡಳಿಯು ಕಳಹಿಸಿದೆ. 

ಈ ಮೌಲ್ಯಾಂಕನದಲ್ಲಿ ಅನೇಕ ಲೋಪದೋಷಗಳಿರುವುದಾಗಿ ವಿವಿಧ ಶಾಲಾ ಆಡಳಿತ ಮಂಡಳಿಗಳು ವಾಟ್ಸ್‌ಅಪ್‌, ಇಮೇಲ್‌ ಮೂಲಕ ಮಾಹಿತಿ ನೀಡಿವೆ. ವಿದ್ಯಾರ್ಥಿಗಳು ಸರಿಯಾದ ಉತ್ತರ ಬರೆದಿದ್ದರೂ ಸೂಕ್ತ ಅಂಕ ನೀಡದಿವುದು, ಉತ್ತಮವಾಗಿ ಓದುವ ಮಕ್ಕಳಿಗೆ ಕಡಿಮೆ ಅಂಕ ನೀಡಿರುವುದು, ಫಲಿತಾಂಶದ ಅಂಕಿ, ಅಂಶಗಳ ಲೆಕ್ಕವನ್ನೇ ತಪ್ಪಾಗಿ ಮಾಡಿರುವುದು, ಕೆಲ ವಿಷಯಗಳಲ್ಲಿ ಗರಿಷ್ಠ ಅಂಕಗಳಿಗಿಂತ ಹೆಚ್ಚು ಅಂಕ ನೀಡಿರುವಂತಹ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ದೂರಿದ್ದಾರೆ.

370 ರದ್ದು: ಖರ್ಗೆ ಅವರದ್ದು ತುಕ್ಡೆ ತುಕ್ಡೆ ಗ್ಯಾಂಗ್‌ನ ಮನಸ್ಥಿತಿ: ಪ್ರಧಾನಿ ಮೋದಿ ವಾಗ್ದಾಳಿ

ಇದಕ್ಕೆ ಕಾರಣ, ಅರ್ಹ ಶಿಕ್ಷಕರಿಂದ ಮೌಲ್ಯಾಂಕನ ಮಾಡದೆ ಮೌಲ್ಯಮಾಪಕರ ಕೊರತೆಯಿಂದಾಗಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರನ್ನೂ ಮೌಲ್ಯಾಂಕನಕ್ಕೆ ಬಳಸಿಕೊಂಡಿರುವುದು ಕಾರಣ ಎನ್ನಲಾಗುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆಗೂ ಸೂಕ್ತ ದಾಖಲೆಗಳೊಂದಿಗೆ ದೂರು ನೀಡುತ್ತೇವೆ. ಇಲಾಖೆಯು ಆಗಿರುವ ಲೋಪಗಳನ್ನು ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

Latest Videos
Follow Us:
Download App:
  • android
  • ios