ಮುಂದಿನ ವರ್ಷದೊಳಗೆ ಕರ್ನಾಟಕದಲ್ಲಿ 600 ಪಬ್ಲಿಕ್ ಶಾಲೆ ಆರಂಭ: ಸಚಿವ ಮಧು

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಸರ್ಕಾರ ಮೊದಲ ಆದ್ಯತೆ ನೀಡಿದ್ದು, ವಿದ್ಯಾರ್ಥಿಸ್ನೇಹಿ ಶೈಕ್ಷಣಿಕ ವಾತಾವರಣ ನಿರ್ಮಾಣದೊಂದಿಗೆ ಸಮಗ್ರ ವಿಕಾಸದ ಗುರಿ ಹೊಂದಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

600 public schools will open in Karnataka by next year says Minister Madhu bangarappa at bengaluru rav

ದೊಡ್ಡಬಳ್ಳಾಪುರ (ಅ.3) :  ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಸರ್ಕಾರ ಮೊದಲ ಆದ್ಯತೆ ನೀಡಿದ್ದು, ವಿದ್ಯಾರ್ಥಿಸ್ನೇಹಿ ಶೈಕ್ಷಣಿಕ ವಾತಾವರಣ ನಿರ್ಮಾಣದೊಂದಿಗೆ ಸಮಗ್ರ ವಿಕಾಸದ ಗುರಿ ಹೊಂದಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ವಿಶ್ವನಾಥಪುರದಲ್ಲಿ ಸೋಮವಾರ ನಡೆದ "ನನ್ನ ಶಾಲೆ ನನ್ನ ಕೊಡುಗೆ" ಯೋಜನೆಯಡಿಯಲ್ಲಿ ಸಿ.ಎಸ್‌.ಆರ್ ಅನುದಾನದಲ್ಲಿ ಮಾದರಿ ಸರ್ಕಾರಿ ಶಾಲೆ ಯೋಜನೆ ಉದ್ಘಾಟನೆ ಮತ್ತು ನೂತನ ಶಾಲಾ ಕೊಠಡಿಗಳು ಹಾಗೂ ವಿವೇಕ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

 

ಈ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ಮುಗಿಬಿದ್ದ ಜನ!

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಶ್ರಮಿಸುತ್ತಿದ್ದು, ಹಲವು ಯೋಜನೆಗಳನ್ನು ಜಾರಿಗೆ ತಂದಿದೆ, ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ವಾರಕ್ಕೆ 2 ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲಾಗುತ್ತಿದೆ. ಈ ವರ್ಷ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ 2 ಪೂರಕ ಪರೀಕ್ಷೆಗಳನ್ನು ನಡೆಸಿದ್ದೆವು. ಇದರ ಪ್ರತಿಫಲವಾಗಿ 4200 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಿದ್ಯಾರ್ಥಿಗಳು ಕಡಿಮೆ ಇರುವ ಶಾಲೆಗಳನ್ನು ಒಂದು ಕಡೆ ಸ್ಥಳಾಂತರಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರಿಂದ ಶಿಕ್ಷಕರ ಹೊರೆ ಕಡಿಮೆ ಮಾಡಬಹುದು ಎಂದರು.

5 ವರ್ಷದಲ್ಲಿ 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ

ಸಿ.ಎಸ್.ಆರ್ ಅನುದಾನದಡಿಯಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರದ ಪ್ರಯತ್ನ ಗಳು ಕಾರ್ಯರೂಪದಲ್ಲಿದೆ. 01 ರಿಂದ 12 ನೇ ತರಗತಿಯವರೆಗೆ ಒಂದೇ ಶಾಲೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲು ಹಾಗೂ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ 600 ಕೆ.ಪಿ.ಎಸ್ (ಕರ್ನಾಟಕ ಪಬ್ಲಿಕ್ ಶಾಲೆ)ಶಾಲೆಗಳನ್ನು ಮುಂದಿನ ವರ್ಷದ ವೇಳೆಗೆ ರಾಜ್ಯಾದ್ಯಂತ ಪ್ರಾರಂಭ ಮಾಡಲಾಗುವುದು. ಮುಂದಿನ 5 ವರ್ಷಗಳಲ್ಲಿ ಎರಡು ಗ್ರಾಮಗಳಿಗೆ ಒಂದರಂತೆ 2000 ಕೆ.ಪಿ.ಎಸ್ ಶಾಲೆಗಳನ್ನು ನಿರ್ಮಿಸಲು ಗುರಿ ಹೊಂದಲಾಗಿದೆ ಎಂದು ಹೇಳಿದರು......

ಶಾಲೆ ಮುಖ್ಯಸ್ಥರ ನಿರ್ಲಕ್ಷ್ಯ: ಹಾಲ್ ಟಿಕೆಟ್ ಸಿಗದೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರದಾಟ

ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯ: ಮುನಿಯಪ್ಪ

ಕೆ.ಹೆಚ್.ಮುನಿಯಪ್ಪಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಹೊಸ ವಾತಾವರಣ ಸೃಷ್ಟಿ ಮಾಡುವ ದೃಷ್ಟಿಯಿಂದ ಹಾಗೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸಿ.ಎಸ್.ಆರ್ ಅನುದಾನದಡಿ ಶಾಲೆಗಳನ್ನು ನವೀಕರಣ ಮಾಡಲಾಗುತ್ತದೆ. ಶಾಲಾ ಕೊಠಡಿ, ಆಟದ ಮೈದಾನ, ಕಂಪ್ಯೂಟರ್ ಸೌಲಭ್ಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಶಾಲೆಗೆ ಒದಗಿಸಿ, ಗುಣಮಟ್ಟದ ಶಿಕ್ಷಣ ನೀಡಲಾಗುವುದು. ಇದರಿಂದ ಮಕ್ಕಳ ಮುಂದಿನ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

-5 ವರ್ಷದಲ್ಲಿ 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆ ಗುರಿ

-ವಿಶ್ವನಾಥಪುರದಲ್ಲಿ ನನ್ನ ಶಾಲೆ-ನನ್ನ ಕೊಡುಗೆ ಯೋಜನೆಗೆ ಚಾಲನೆ

Latest Videos
Follow Us:
Download App:
  • android
  • ios