ಬೀದರ್‌, ಹಾವೇರಿ, ಹಾಸನ ಸೇರಿ ರಾಜ್ಯಕ್ಕೆ 7 ಹೊಸ ವಿವಿ

  • ಬೀದರ್‌, ಹಾವೇರಿ, ಹಾಸನ ಸೇರಿ ರಾಜ್ಯಕ್ಕೆ 7 ಹೊಸ ವಿವಿ
  •  7 ಜಿಲ್ಲಾ ಕೇಂದ್ರದ ಸ್ನಾತಕೋತ್ತರ ಕೇಂದ್ರಗಳು ವಿವಿ ಆಗಿ ಅಭಿವೃದ್ಧಿ
  •  ಪ್ರತಿ ಹೊಸ ವಿವಿಗೆ 2 ಕೋಟಿ ರು. ಆರಂಭಿಕ ಅನುದಾನ: ಸಂಪುಟ
  • ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಕುರಿತು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು.
7 new universities in the state including Bidar, Haveri, Hassan

ಬೆಂಗಳೂರು (ಆ.26) : ಬಜೆಟ್‌ನಲ್ಲಿ ಘೋಷಿಸಿದಂತೆ ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆ-2000ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಏಳು ಜಿಲ್ಲಾ ಕೇಂದ್ರದಲ್ಲಿನ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಗೆ ತೀರ್ಮಾನಿಸಲಾಗಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommai) ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ(Cabinet meeting)ಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ(J.C. Madhuswamy), ಜಿಲ್ಲಾ ಕೇಂದ್ರದಲ್ಲಿನ ಸ್ನಾತಕೋತ್ತರ ಕೇಂದ್ರದಲ್ಲಿ ನೂತನ ವಿಶ್ವವಿದ್ಯಾಲಯಗಳನ್ನು ಆರಂಭಿಸಲಾಗುವುದು. ಚಾಮರಾಜನಗರ(Chamarajanagar), ಬೀದರ್‌(Bidar), ಹಾವೇರಿ(Haveri), ಹಾಸನ(Hasan), ಕೊಪ್ಪಳ(Koppala), ಬಾಗಲಕೋಟೆ(Bagalakote) ಮತ್ತು ಹಾವೇರಿ(Haveri) ಜಿಲ್ಲೆಯಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು. ಇನ್ನು, ಈಗಾಗಲೇ ಮಂಡ್ಯ ವಿಶ್ವವಿದ್ಯಾಲಯ(Mandya University) ಇದ್ದು, ಅದರ ವ್ಯಾಪ್ತಿಯನ್ನು ವಿಸ್ತರಿಸಲಾಗುವುದು ಎಂದು ಹೇಳಿದರು.

ವಿವಿ ಕಾಯ್ದೆ ತಿದ್ದುಪಡಿಗೆ ಸಂಪುಟ ಅಸ್ತು, 8 ನೂತನ ವಿವಿಗಳ ಸ್ಥಾಪನೆ ಇನ್ನು ಸುಲಭ

ನೂತನವಾಗಿ ಸ್ಥಾಪಿಸುವ ಹೊಸ ವಿಶ್ವವಿದ್ಯಾಲಯಗಳ ಪೈಕಿ ಕ್ರಮವಾಗಿ ಚಾಮರಾಜನಗರ ವಿಶ್ವವಿದ್ಯಾಲಯದಲ್ಲಿ 18, ಹಾಸನ ವಿಶ್ವವಿದ್ಯಾಲಯದಲ್ಲಿ 36, ಹಾವೇರಿ ವಿಶ್ವವಿದ್ಯಾಲಯದಲ್ಲಿ 40, ಬೀದರ್‌ ವಿಶ್ವವಿದ್ಯಾಲಯದಲ್ಲಿ 140, ಕೊಡಗು ವಿಶ್ವವಿದ್ಯಾಲಯದಲ್ಲಿ 24, ಕೊಪ್ಪಳ ವಿಶ್ವವಿದ್ಯಾಲಯದಲ್ಲಿ 40 ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯದಲ್ಲಿ 71 ಕಾಲೇಜುಗಳು ಬರಲಿವೆ. ಅಲ್ಲದೇ, ಮಂಡ್ಯ ವಿಶ್ವವಿದ್ಯಾಲಯ ವ್ಯಾಪ್ತಿಗೆ ಆ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳು ಬರಲಿವೆ ಎಂದರು.

ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಕುರಿತು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಇದಕ್ಕಾಗಿ ತಲಾ ಎರಡು ಕೋಟಿ ರು.ಗಳಂತೆ ಒಟ್ಟು 14 ಕೋಟಿ ರು. ಒದಗಿಸಲಾಗಿದೆ. ಜಿಲ್ಲೆಗೊಂದು ವಿಶ್ವವಿದ್ಯಾಲಯ ಇರಬೇಕು ಎನ್ನುವುದು ಸರ್ಕಾರದ ತೀರ್ಮಾನವಾಗಿದೆ. ಈ ಮೂಲಕ ಶೈಕ್ಷಣಿಕ ಅಸಮತೋಲ ಶೈಕ್ಷಣಿಕ ಅಸಮತೋಲನ ನಿವಾರಣೆ ಮಾಡಲಾಗುವುದು. ಜತೆಗೆ ಯುವಜನಾಂಗಕ್ಕೆ ಮನೆ ಬಾಗಿಲಲ್ಲೇ ಗುಣಮಟ್ಟದ ಶಿಕ್ಷಣ ನೀಡುವ ಸದಾಶಯವನ್ನು ಸರ್ಕಾರ ಹೊಂದಿದೆ. ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಆರ್ಥಿಕ ಮತ್ತು ಯೋಜನಾ ಇಲಾಖೆಗಳು ಒಪ್ಪಿಗೆ ನೀಡಿವೆ. ಇವು ಕಡಿಮೆ ಸ್ಥಳ, ಕಡಿಮೆ ಸಿಬ್ಬಂದಿ ಮತ್ತು ಕಡಿಮೆ ವೆಚ್ಚದೊಂದಿಗೆ ಕಾರ್ಯ ಚಟುವಟಿಕೆ ನಡೆಸಲಿವೆ ಎಂದು ತಿಳಿಸಿದರು. ಯುಜಿಸಿ ಹೊಸ ಪೋರ್ಟಲ್‌ನಲ್ಲಿ ಹೊಸ ಕೋರ್ಸು: ಉಚಿತವಾಗಿಯೇ ಲಭ್ಯ

Latest Videos
Follow Us:
Download App:
  • android
  • ios