ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು: ಹೈಕೋರ್ಟ್ ಮಹತ್ವದ ಆದೇಶ

ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಶಿಕ್ಷಕರಾಗುವ ಕನಸನ್ನು ಕಂಡಿದ್ದ ಆಕಾಂಕ್ಚಿಗಳಿಗೆ ಭಾರಿ ಹಿನ್ನಡೆ ಉಂಟಾಗಿದೆ.

Abolition of provisional selection list of primary teachers High Court landmark order sat

ಬೆಂಗಳೂರು (ಜ.30): ರಾಜ್ಯದ 13,363 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಶಿಕ್ಷಕರಾಗುವ ಕನಸನ್ನು ಕಂಡಿದ್ದ ಆಕಾಂಕ್ಚಿಗಳಿಗೆ ಭಾರಿ ಹಿನ್ನಡೆ ಉಂಟಾಗಿದೆ. ಜೊತೆಗೆ ಶಿಕ್ಷಣ ಇಲಾಖೆಯ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೂ ಹಿನ್ನಡೆ ಉಂಟಾಗಲಿದೆ.

ರಾಜ್ಯದಲ್ಲಿ ಶಿಕ್ಷಕರ ಇಲಾಖೆ ನೇಮಕಾತಿಯ ಕುರಿತು ಸರ್ಕಾರ ಬಿಡುಗಡೆ ಮಾಡಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಯ ವಿರುದ್ಧ ನೂರಾರು ಅಭ್ಯರ್ಥಿಗಳು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯಲ್ಲಿ ಶಿಕ್ಷಕ ಅಭ್ಯರ್ಥಿಗಳ ಪತಿಯ ಜಾತಿ, ಆದಾಯ ಪ್ರಮಾಣಪತ್ರ  ಪರಿಗಣನೆ ಪ್ರಶ್ನಿಸಲಾಗಿತ್ತು. ಆದರೆ, ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣಿಸಬೇಕು ಎಂದು ಮನವಿ ಮಾಡಲಾಗಿತ್ತು. ಈ ರಿಟ್‌ ಅರ್ಜಿಯನ್ನು ಪರಿಶೀಲಿಸಿ ವಿಚಾರಣೆ ಮಾಡಿದ್ದ ಹೈಕೋರ್ಟ್ ಏಕಸದಸ್ಯ ಪೀಠವು ಇಂದು ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿ ಮಹತ್ವದ ಆದೇಶವನ್ನು ಹೊರಡಿಸಿದೆ. 

13,000 ಶಿಕ್ಷಕರ ನೇಮಕ ಪಟ್ಟಿಗೆ ಹೈಕೋರ್ಟ್‌ ತಡೆ

ತಂದೆಯ ಜಾತಿ ಆದಾಯ ಪರಿಗಣಿಸಿ: ಇನ್ನು ಅಭ್ಯರ್ಥಿಗಳು ದಾಖಲಿಸಿದ್ದ ರಿಟ್‌ ಅರ್ಜಿಯ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರು, ಶಿಕ್ಷಣ ಇಲಾಖೆಯ ನಿಯಮ ಕಾನೂನುಬಾಹಿರವೆಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಜೊತೆಗೆ, ಈಗ ಸರ್ಕಾರ ಬಿಡುಗಡೆ ಮಾಡಿರುವ ತಾತ್ಕಾಲಿಕ ಆಯ್ಕೆಪಟ್ಟಿ ಕಾನೂನು ಬಾಹಿರವಾಗಿದೆ ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಈ ವಾದವನ್ನು ಆಲಿಸಿದ ಏಕಸದಸ್ಯ ಪೀಠವು ಶಿಕ್ಷಣ ಇಲಾಖೆಯ ಆಯ್ಕೆಪಟ್ಟಿ ರದ್ದುಪಡಿಸಿ ಆದೇಶ ನೀಡಿದೆ.  ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳ ತಂದೆಯ ಜಾತಿ, ಆದಾಯ ಪ್ರಮಾಣಪತ್ರವನ್ನು ಉದ್ಯೋಗಕ್ಕೆ ಪರಿಗಣಿಸಲು ಸೂಚನೆಯನ್ನು ನೀಡಿದೆ. ಜೊತೆಗೆ, ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ‌ ಇಲಾಖೆಗೆ ಸೂಚನೆ ನೀಡಿದೆ. ನ್ಯಾ.ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದ್ದು, ರಿಟ್‌ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ನ್ಯಾಯ ದೊರಕಿದಂತಾಗಿದೆ. 

ಬೆಂಗಳೂರು (ಡಿ.01):  ರಾಜ್ಯದ 13,363 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ತಾತ್ಕಾಲಿಕ ಆಯ್ಕೆಪಟ್ಟಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ‘ಅರ್ಹತೆ ಇದ್ದರೂ ನಮ್ಮನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಹೀಗಾಗಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರದ್ದುಪಡಿಸಿ’ ಎಂದು ಕೋರಿ ಉಡುಪಿಯ ಯಡತಾಡಿ ಗ್ರಾಮದ ಅನಿತಾ ಸೇರಿ 40ಕ್ಕೂ ಅಧಿಕ ಮಹಿಳಾ ಹುದ್ದೆ ಆಕಾಂಕ್ಷಿಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2022ರ ನ.18ರಂದು ಹೊರಡಿಸಿದ ತಾತ್ಕಾಲಿಕ ಪಟ್ಟಿಗೆ ಡಿ.9ರವರೆಗೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿತ್ತು.

Teacher Recruitment: ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ತಾತ್ಕಾಲಿಕ ಪಟ್ಟಿಗೆ ತಕರಾರು ಏಕೆ?:
ತಕರಾರು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಹಿಂದೆ ಪದವೀಧರರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ನೇಮಕಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಲಿಖಿತ ಪರೀಕ್ಷೆಗೆ ಹಾಜರಾಗಿ ಉತ್ತಮ ರಾರ‍ಯಂಕ್‌ ಗಳಿಸಿದ್ದರು. ಅಲ್ಲದೆ, 1:2 ಅನುಪಾತದ ತಾತ್ಕಾಲಿಕ ಪಟ್ಟಿಯಲ್ಲಿ ದಾಖಲೆಗಳ ಪರಿಶೀಲನೆಗೆ ಅರ್ಹರಾಗಿದ್ದರು. ಆದರೆ, ದಾಖಲೆಗಳನ್ನು ಪರಿಶೀಲಿಸಿದ್ದ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. 2022ರ ನ.18ರಂದು 1:1 ತಾತ್ಕಾಲಿಕ ಆಯ್ಕೆ ಪಟ್ಟಿಪ್ರಕಟಿಸಿದ್ದು, ಅರ್ಜಿದಾರರು ಅದರಲ್ಲಿ ಸ್ಥಾನ ಪಡೆದಿರಲಿಲ್ಲ. ಇದರಿಂದ ಅರ್ಜಿದಾರರು ತಾತ್ಕಾಲಿಕ ಪಟ್ಟಿಯನ್ನು ಪ್ರಶ್ನಿಸಿದ್ದರು.

Latest Videos
Follow Us:
Download App:
  • android
  • ios