Asianet Suvarna News Asianet Suvarna News

1ರಿಂದ 5ನೇ ತರಗತಿ ಓಪನ್ ಮಾಡಿದ ಶಾಲೆಗಳಿಗೆ ಶಾಕ್ ಕೊಟ್ಟ ಸುರೇಶ್ ಕುಮಾರ್

1 ರಿಂದ 5 ನೇ ತರಗತಿಗಳನ್ನ ನಡೆಸುತ್ತಿರುವ ಶಾಲೆಗಳ ಮೇಲೆ ಕಠಿಣ ಕ್ರಮಕ್ಕೆ ಸೂಚನೆ/ ಸರ್ಕಾರ ಅನುಮತಿ ನೀಡದೆ ಇದ್ರು ಕೆಲ ಶಾಲೆಗಳು ಅನಧಿಕೃತವಾಗಿ ಶಾಲೆ ಓಪನ್/ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಯುಕ್ತರಿಗೆ ಸೂಚನೆ/  ಈ ಕೂಡಲೇ ಸುತ್ತೋಲೆ ಹೊರಡಿಸುವಂತೆ ಆದೇಶ ನೀಡಿದ ಸಚಿವ ಸುರೇಶ್ ಕುಮಾರ್

Action Against Schools which reopened 1st to 5th standard classes minister suresh kumar mah
Author
Bengaluru, First Published Mar 15, 2021, 7:14 PM IST

ಬೆಂಗಳೂರು( ಮಾ. 15)  1 ರಿಂದ 5 ನೇ ತರಗತಿಗಳನ್ನ ನಡೆಸುತ್ತಿರುವ ಶಾಲೆಗಳ ಮೇಲೆ ಕಠಿಣ ಕ್ರಮಕ್ಕೆ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. ಸರ್ಕಾರ ಅನುಮತಿ ನೀಡದೆ ಇದ್ದರೂ ಕೆಲ ಶಾಲೆಗಳು ಅನಧಿಕೃತವಾಗಿ ನಡೆಯುತ್ತಿವೆ.  ಹಾಗಾಗಿ ಇಂಥ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಯುಕ್ತರಿಗೆ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಗೆ ಸೂಚನೆ ನೀಡಲಾಗಿದ್ದು  ಈ ಕೂಡಲೇ ಸುತ್ತೋಲೆ ಹೊರಡಿಸುವಂತೆ ಆದೇಶ  ನೀಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆ ಇಲ್ಲದೇ ಹೋದರೂ 1 ರಿಂದ 5ನೇ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟ ಶಿಕ್ಷಣ ಸಂಸ್ಥೆಗಳು

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ  ಅನುಮತಿಯೊಂದಿಗೆ 6ನೇ ತರಗತಿಯಿಂದ ಮೇಲ್ಪಟ್ಟ ತರಗತಿಗಳನ್ನು ಮಾತ್ರವೇ ಆರಂಭಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.

ಆದರೆ ರಾಜ್ಯದ ಹಲವೆಡೆ ಕೆಲವು ಖಾಸಗಿ ಶಾಲೆಗಳು 1 ರಿಂದ 5ನೇ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಕುರಿತು ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಇಂತಹ ಶಾಲೆಗಳ ಕುರಿತು ಕ್ರಮ ಕೈಗೊಳ್ಳಬೇಕೆಂದು ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ತಾಲೂಕು ಮಟ್ಟದಲ್ಲಿ ಪರಿಶೀಲನಾ ತಂಡಗಳನ್ನು ರಚಿಸಿ, ಈ ರೀತಿ ಅನಧಿಕೃತವಾಗಿ 1 ರಿಂದ 5ನೇ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳ / ಶಿಕ್ಷಣ  ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ಕೂಡಲೇ ಸುತ್ತೋಲೆ ಹೊರಡಿಸಬೇಕೆಂದು ಸುರೇಶ್ ಕುಮಾರ್ ಇಲಾಖೆಯ ಆಯಕ್ತರು ಮತ್ತು ಅಪರ ಆಯುಕ್ತರುಗಳಿಗೆ ಸೂಚನೆ ನೀಡಿದ್ದಾರೆ.#

 

Follow Us:
Download App:
  • android
  • ios