Asianet Suvarna News Asianet Suvarna News

ಪಾಲಿಟೆಕ್ನಿಕ್ ಪ್ರವೇಶಾರ್ಥಿಗಳಿಗೆ ಗುಡ್ ನ್ಯೂಸ್, ದಿನಾಂಕ ವಿಸ್ತರಣೆ

* ಪಾಲಿಟೆಕ್ನಿಕ್ ಪ್ರವೇಶ; ಸೆ.20ರವರೆಗೆ ಕಾಲಾವಕಾಶ
* 2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶ
* ಎಲ್ಲ ಕಾಲೇಜಿನ ಮನವಿ ಮೇರೆಗೆ ಅವಕಾಶ
* ಕೊರೋನಾ ಕಾರಣಕ್ಕೆ ಅರ್ಧದಲ್ಲೇ ನಿಂತಿದ್ದ ಶೈಕ್ಷಣಿಕ ಚಟುವಟಿಕೆಗಳು

Admission date for polytechnic diploma first semester extended till Sep 20 mah
Author
Bengaluru, First Published Sep 2, 2021, 11:52 PM IST

ಬೆಂಗಳೂರು(ಸೆ. 02) 2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಮೊದಲ ಬಂದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಈ ತಿಂಗಳ 20ರವರೆಗೆ ಪ್ರವೇಶಾವಕಾಶ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಶುಲ್ಕ ಏರಿಕೆ ಕೇಳಿ ಪೋಷಕರು ಕಂಗಾಲು

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ರಾಜ್ಯದ 62 ಸರ್ಕಾರಿ, 34 ಅನುದಾನಿತ ಪಾಲಿಟೆಕ್ನಿಕ್ʼಗಳಲ್ಲಿ ಪ್ರವೇಶಾವಕಾಶವನ್ನು ಸೆ. 20ರ ಸಂಜೆ ಕಚೇರಿ ಅವಧಿವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶ ಪಡೆದುಕೊಂಡು ದಾಖಲಾಗಬೇಕು ಎಂದು ಸಚಿವರು ತಿಳಿಸಿದ್ದಾರೆ.

ಪ್ರವೇಶಾವಧಿಯನ್ನಿ ವಿಸ್ತರಣೆ ಮಾಡುವಂತೆ ಎಲ್ಲ ಪಾಲಿಟೆಕ್ನಿಕ್ʼಗಳ ಪ್ರಾಂಶುಪಾಲರು ಕೋರಿಕೆ ಸಲ್ಲಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Follow Us:
Download App:
  • android
  • ios