ಇದೇ ಏಪ್ರಿಲ್ 25ರಂದು ನಡೆಯಬೇಕಿದ್ದ  ಕೆ ಸೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ.  ಕೊರೋನಾ ಹಿನ್ನೆಲೆಯಲ್ಲಿ ಮತ್ತೆ ಪರೀಕ್ಷೆ ಮುಂದೂಡಲಾಗಿದೆ. 

ಮೈಸೂರು (ಏ.22): ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅರ್ಹತೆಗಾಗಿ (ಕೆ-ಸೆಟ್‌) ನಡೆಸುವ ಪರೀಕ್ಷೆಯನ್ನು ಮತ್ತೆ ಮುಂದೂಡಿದೆ. 

ಈ ಹಿಂದೆ ಸಾರಿಗೆ ಸಂಸ್ಥೆಯ ಬಸ್‌ಗಳ ಮುಷ್ಕರದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಕೋವಿಡ್‌-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ. 

ಕೋವಿಡ್ ಆತಂಕದ ಮಧ್ಯೆ ಪರೀಕ್ಷೆ ನಡೆಸಲು ಮುಂದಾಗಿರುವ ವಿಟಿಯು, ವಿದ್ಯಾರ್ಥಿಗಳ ಅಸಮಾಧಾನ ..

ಈ ಹಿಂದೆ ಪರೀಕ್ಷೆಯನ್ನು ಏ.25ರಂದು ನಿಗದಿಪಡಿಸಲಾಗಿತ್ತು. ಆದರೆ ಇದೀಗ ಕೊರೋನಾ ವ್ಯಾಪಕತೆ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸಂಯೋಜಕ ಪ್ರೊ.ಎಚ್‌.ರಾಜಶೇಖರ್‌ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಬ್ಬರ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಪ್ರಕರಣಗಳು ಅಧಿಕ ಪ್ರಮಾಣದಲ್ಲಿ ದಾಖಲಾಗುತ್ತಿವೆ. ಈಗಾಗಲೇ ಲಕ್ಷಾಂತರ ಸೋಂಕಿತರಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ.