ಮತ್ತೆ ಪಠ್ಯಪುಸ್ತಕ ಪರಿಷ್ಕರಣೆ, ಕಾಂಗ್ರೆಸ್ ಸರ್ಕಾರದ ಹೊಸ ಪಠ್ಯಪುಸ್ತಕ ಮುದ್ರಣ!

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಶೇ.95 ರಷ್ಟು ಪಠ್ಯ ಪರಿಷ್ಕರಣೆಯನ್ನು ಇದೀಗ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ತೆಗೆದು ಹಾಕಿ ಪಠ್ಯಪುಸ್ತಕ ‌ಮುದ್ರಣ ‌ಮಾಡಲಾಗಿದೆ ಅನ್ನೋ‌ ಮಾಹಿತಿ ಶಿಕ್ಷಣ ಇಲಾಖೆ ಮೂಲಗಳಿಂದ ಧೃಡಪಟ್ಟಿದೆ.

again textbook revision  in Karnataka after  siddaramaiah government gow

ವರದಿ: ನಂದೀಶ್ ಮಲ್ಲೇನಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್  

ಬೆಂಗಳೂರು (ಮೇ.23): 2023-24 ನೇ ಶೈಕ್ಷಣಿಕ ವರ್ಷ ಪ್ರಾರಂಭಕ್ಕೆ ಇನ್ನೂ ಕೇಲವೇ ದಿನ ಬಾಕಿ ಉಳಿದಿದೆ. ಇದರ ಮಧ್ಯೆ ಈಗ ಪಠ್ಯ ಪರಿಷ್ಕರಣೆ ಗುಮ್ಮ ಶುರುವಾಗಿದೆ.   ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಶೇ.95 ರಷ್ಟು ಪಠ್ಯ ಪರಿಷ್ಕರಣೆಯನ್ನು ಇದೀಗ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರದ್ದು ಮಾಡತ್ತಾ ಅನ್ನೋ ಪ್ರಶ್ನೆ ಈಗ ಎಲ್ಲರಲ್ಲೂ ಕಾಡುತ್ತಿದೆ. ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ಪಠ್ಯ ಪರಿಷ್ಕರಣೆ ಮಾಡುವುದಾಗಿ ಘೋಷಣೆ ಮಾಡಿತ್ತು. ಅಲ್ಲದೆ ತನ್ನ ಪ್ರಣಾಳಿಕೆಯಲ್ಲೂ ಕೂಡ ಪಠ್ಯ ಪರಿಷ್ಕರಣೆ ಮಾಡುವುದಾಗಿ ಹೇಳಿದೆ. ಹೀಗಾಗಿ ಶಿಕ್ಷಕರಿಗೆ ಗೊಂದಲ ಶುರುವಾಗಿದೆ. 1ನೇ ತರಗತಿಯಿಂದ ರಿಂದ 10 ನೇ ತರಗತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಪಠ್ಯ ಪರಿಷ್ಕರಣೆ ಮಾಡಿ ಶಿಕ್ಷಣ ಇಲಾಖೆ ಈಗಾಗಲೇ ಪಠ್ಯಪುಸ್ತಕ ‌ಮುದ್ರಣ ‌ಮಾಡಲಾಗಿದೆ ಅನ್ನೋ‌ ಮಾಹಿತಿ ಶಿಕ್ಷಣ ಇಲಾಖೆ ಮೂಲಗಳಿಂದ ಧೃಡಪಟ್ಟಿದೆ.

ಪಠ್ಯ ಪರಿಷ್ಕರಣೆ ವಿಚಾರವಾಗಿ ಈಗಾಗಲೇ ಸರ್ಕಾರಕ್ಕೆ ಖಾಸಗಿ ಶಾಲಾ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪಠ್ಯ ಮರು ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಲ ಪಠ್ಯವನ್ನ ಕೈಬಿಡಲಾಗಿತ್ತು. ಹಿಂದಿನ ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಸಮಿತಿ ನಡೆಸಿದ್ದ ಪಠ್ಯ ಪರಿಷ್ಕರಣೆ ವಿವಾದವಾಗಿತ್ತು. ಕೆಲ ಪಠ್ಯಗಳನ್ನ ಕೈಬಿಡಲಾಗಿತ್ತು. ಆದ್ರೆ ಇದೀಗ ಕೈ ಬಿಟ್ಟ ಪಠ್ಯ ಮತ್ತೆ ಸೇರ್ಪಡೆ ಮಾಡುವಂತೆ ಅವರು ಒತ್ತಾಯಿಸಿದ್ದಾರೆ.

ಈಗಾಗಲೇ ಶಿಕ್ಷಣ ಇಲಾಖೆ ಪಠ್ಯ ಪರಿಷ್ಕರಣೆ ‌ಮಾಡಿ ಪಠ್ಯಪುಸ್ತಕ ಮುದ್ರಣಗೊಂಡಿದೆ. ಅಲ್ಲದೆ ಶಾಲೆಗಳಿಗೂ ಸರಬರಾಜು ಮಾಡಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ ಎಂದು ತಿಳಿದು ಬಂದಿದೆ.  ರಾಜ್ಯದಲ್ಲಿ 72 ಸಾವಿರಕ್ಕೂ ಹೆಚ್ಚು ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಶಾಲೆಗಳಿವೆ.1 ಕೋಟಿಗೂ ಹೆಚ್ಚು ಮಕ್ಕಳು ಇದ್ದಾರೆ. ಈಗಾಗಲೇ ಶಿಕ್ಷಣ ಇಲಾಖೆ ಪಠ್ಯಪುಸ್ತಕ ಮುದ್ರಣಕ್ಕೆ 262 ಕೋಟಿ ರೂಪಾಯಿ ಖರ್ಚು ಮಾಡಿದೆ. ಆದ್ರೆ ಇಷ್ಟು ಹಣ ಖರ್ಚು ಮಾಡಿ ಪಠ್ಯ ಮತ್ತೆ ಪರಿಷ್ಕರಣೆ ಮಾಡೋದು ಕಷ್ಟ ಸಾಧ್ಯ? ಹಿಂದಿನ ಸರ್ಕಾರ ಪಠ್ಯ ಪರಿಷ್ಕರಣೆ ಸಂದರ್ಭದಲ್ಲಿ ಸೇರಿಸಲಾಗಿದ್ದ ಕೆಲ ಪಾಠಗಳನ್ನು ತೆಗೆಯುವಂತೆ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗ್ತಿದ್ದಂತೆ ಬಿಜೆಪಿ ಸರಕಾರದ ಪಠ್ಯಕ್ರಮ ತೆಗೆದು ಹಾಕುವಂತೆ ಶಿಕ್ಷಣ ತಜ್ಞರ

ಬಿಜೆಪಿ ಸರಕಾರದ ಶಿಕ್ಷಣ ನೀತಿ ಬದಲಾವಣೆಗೂ ಒತ್ತಾಯ: ಇವೆಲ್ಲದರ ನಡುವೆ ರಾಜ್ಯದಲ್ಲಿ ಕೇಂದ್ರದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ಯನ್ನು (ಎನ್‌ಇಪಿ) ಸಾರಾಸಗಟಾಗಿ ತಿರಸ್ಕರಿಸಬೇಕು, ಶಾಲಾ ಪಠ್ಯ ಪರಿಷ್ಕರಣೆ ಸೇರಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಾದ ಬದಲಾವಣೆಗಳನ್ನು ಕೈಬಿಟ್ಟು ಸಂವಿಧಾನದ ಆಶಯದಂತೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಜಾರಿಗೆ ‘ರಾಜ್ಯ ಶಿಕ್ಷಣ ನೀತಿ’ ರೂಪಿಸಿ ಜಾರಿಗೊಳಿಸಬೇಕೆಂದು ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಮನ್ವಯ ವೇದಿಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ಕಾರ್ಮಿಕರ ಮಕ್ಕಳೇ ಹೆಚ್ಚಿರುವ ರಾಜ್ಯದ ಸರ್ಕಾರಿ ಶಾಲೆಗೆ ಕಟ್ಟಡ ಕುಸಿತದ ಭೀತಿ, ಶಿಕ್ಷಕರ ಕೊರತೆ!

ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವ ವೇದಿಕೆಯ ಸಂಸ್ಥಾಪಕ ಪೋಷಕ, ಶಿಕ್ಷಣ ತಜ್ಞ ವಿ.ಪಿ.ನಿರಂಜನರಾಧ್ಯ, ಹಿಂದಿನ ಬಿಜೆಪಿ ಸರ್ಕಾರ ರಾಜಕೀಯಕ್ಕಾಗಿ ಶಿಕ್ಷಣ ಕ್ಷೇತ್ರವನ್ನು ಬಳಸಿಕೊಂಡಿದೆ. ಹಾಗಾಗಿ ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ರೂಪಿಸಿ ಜಾರಿಗೊಳಿಸುವವರೆಗೆ ಬಿಜೆಪಿ ಸರ್ಕಾರದಲ್ಲಿ ಆಗಿದ್ದ ಪಠ್ಯಪರಿಷ್ಕರಣೆ ಕೈಬಿಟ್ಟು 2017-18ರಲ್ಲಿ ಜಾರಿಯಲ್ಲಿದ್ದ ಪಠ್ಯಕ್ರಮ, ಪಠ್ಯವಸ್ತು ಮತ್ತು ಪಠ್ಯಪುಸ್ತಕಗಳನ್ನೇ ಮುಂದುವರೆಸಬೇಕು. ಹಿಂದಿನ ಪಠ್ಯಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಮತ್ತು ಸದಸ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Latest Videos
Follow Us:
Download App:
  • android
  • ios