Asianet Suvarna News Asianet Suvarna News

ಕೃಷಿ ಕೋಟಾದಡಿ ಅರ್ಹತೆ ಪಡೆಯಲು ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ

ಕೃಷಿ ಕೋಟಾದಡಿ ಅರ್ಹತೆ ಪಡೆಯಲು ಮೂಲ ದಾಖಲೆಗಳನ್ನು ಅಪ್ಲೋಡ್ ಮಾಡದೇ ಇರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಿದ್ದು ದಿನಾಂಕ ವಿಸ್ತರಿಸಿ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ.

Agriculture & Horticulture  VV  extends PG admission date Till Sept 29 rbj
Author
Bengaluru, First Published Sep 24, 2020, 8:31 PM IST

ಬೆಂಗಳೂರು,(ಸೆ.24): ರಾಜ್ಯ ಕೃಷಿ,ತೋಟಗಾರಿಕೆ, ಪಶುಸಂಗೋಪಾನೆ ವಿಶ್ವವಿದ್ಯಾಲಯಗಳಿಗೆ 2020-21ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಗಳಿಗೆ ಆನ್ಲೈನ್ ಮೂಲಕ ಕೃಷಿಕರ ಕೋಟಾದಡಿಯಲ್ಲಿ ಪ್ರವೇಶಾತಿ ಮೂಲ ದಾಖಲಾತಿಗಳನ್ನು ಅಪ್ಲೋಡ್ ಮಾಡಲು ಸರ್ಕಾರ ಮತ್ತೊಂದು ನೀಡಲಾಗಿದೆ.

ಸಿಇಟಿ 2020 ರಲ್ಲಿ ರ್ಯಾಂಕ್ ಪಡೆದು ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಸೆ.29 ರೊಳಗೆ ಮೂಲ ದಾಖಲೆಗಳನ್ನು ಅಪ್ಲೋಡ್ ಮಾಡಲು ಕೊನೆಯ ದಿನ ನಿಗದಿಪಡಿಸಲಾಗಿತ್ತು.

ಶಿಕ್ಷಣಕ್ಕೆ ಸಂಬಂಧಿದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದೀಗ ಕೃಷಿ ಕೋಟಾದಡಿ ಅರ್ಹತೆ ಪಡೆಯಲು ಮೂಲ ದಾಖಲೆಗಳನ್ನು ಅಪ್ಲೋಡ್ ಮಾಡದೇ ಇರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಿದ್ದು ದಿನಾಂಕ ವಿಸ್ತರಿಸಿ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ.

ಮೂಲ ದಾಖಲೆಗಳನ್ನು ಇಲ್ಲಿಯವರೆಗೆ ಅಪ್ಲೋಡ್ ಮಾಡದೇ ಇರುವ ಅಭ್ಯರ್ಥಿಗಳು ಸೆ.25 ರಿಂದ 29 ರೊಳಗೆ ಸಂಬಂಧಪಟ್ಟ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ವಿಶ್ವವಿದ್ಯಾಲಯಗಳಲ್ಲಿ ದಾಖಲಾತಿಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಬಹುದಾಗಿದ್ದು, ಕೃಷಿ ಕೋಟಾದಡಿ ಪ್ರವೇಶಾತಿಗೆ ಸಂಬಂಧಿಸಿದ ದಾಖಲೆಗಳನ್ನು ಅಪ್ಲೊಡ್ ಮಾಡಲು ಈಗ ಸೆ.29 ಕೊನೆಯ ದಿನವಾಗಿರುತ್ತದೆ.

ವಿದ್ಯಾರ್ಥಿಗಳು ಆದಷ್ಟುಬೇಗ ಅಂತಿಮ‌ ದಿನದೊಳಗೆ ದಾಖಲೆಗಳನ್ನು ಅಪ್ಲೋಡ್ ಮಾಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.

Follow Us:
Download App:
  • android
  • ios