ಕೊರೋನಾ 2ನೇ ಅಲೆ: 'ಎಸ್‌ಎಸ್‌ಎಲ್‌ಸಿ-ಪಿಯುಸಿ ಪರೀಕ್ಷೆ ರದ್ದುಗೊಳಿಸಿ'
* ಹಳ್ಳಿಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ
* ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು
* ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಪರೀಕ್ಷೆ ರದ್ದುಗೊಳಿಸಿದ ಕೇಂದ್ರ ಸರ್ಕಾರ
ಬಳ್ಳಾರಿ(ಜೂ.03): ಕೋವಿಡ್ ಎರಡನೇ ಅಲೆಯ ತೀವ್ರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಬೇಕು ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ (ಎಐಡಿಎಸ್‌ಒ) ಒತ್ತಾಯಿಸಿದೆ.
ಕೇಂದ್ರ ಸರ್ಕಾರ ಸಿಬಿಎಸ್‌ಇ ಹತ್ತನೇ ಮತ್ತು ಹನ್ನೆರಡನೇ ತರಗತಿ ಪರೀಕ್ಷೆ ರದ್ದುಗೊಳಿಸಿದ್ದು ರಾಜ್ಯ ಸರ್ಕಾರವೂ ಪರೀಕ್ಷೆ ರದ್ದುಗೊಳಿಸಬೇಕು ಎಂದು ಎಐಡಿಎಸ್‌ಒ ಆಗ್ರಹಿಸಿದೆ.
CBSE 12ನೇ ಕ್ಲಾಸ್ ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಆರೋಗ್ಯವೇ ಮುಖ್ಯ ಎಂದ ಪ್ರಧಾನಿ!
ಕೋವಿಡ್ ಸಾಂಕ್ರಾಮಿಕ ಹಳ್ಳಿಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಸಾವಿನ ಸಂಖ್ಯೆ ಸಹ ಹೆಚ್ಚುತ್ತಲೇ ಇದೆ. ಮೂರನೇ ಅಲೆಯ ಅಪಾಯ ಗಮನದಲ್ಲಿ ಇಟ್ಟುಕೊಂಡು, ತರಗತಿ ಅಥವಾ ಪರೀಕ್ಷೆ ನಡೆಸುವುದು ಕಷ್ಟಸಾಧ್ಯ. ಹೀಗಾಗಿ ಪರೀಕ್ಷೆ ರದ್ದುಗೊಳಿಸಿ, ಅನುಭವಿ ಶಿಕ್ಷಕರು ಹಾಗೂ ಶಿಕ್ಷಣ ತಜ್ಞರ ಸಲಹೆ ಮೇರೆಗೆ ಒಂದು ವೈಜ್ಞಾನಿಕ ಮೌಲ್ಯಮಾಪನ ಪದ್ಧತಿ ರಚಿಸಿ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಗುರಳ್ಳಿ ರಾಜ ಹಾಗೂ ಜಿಲ್ಲಾ ಕಾರ್ಯದರ್ಶಿ ಜೆ.ಪಿ.ರವಿಕಿರಣ್ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona