ತೆಲಂಗಾಣದಲ್ಲಿ ಪರೀಕ್ಷೆ ಇಲ್ಲದೇ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್
* ಪರೀಕ್ಷೆ ಇಲ್ಲದೇ 10ನೇ ತರಗತಿ ಎಲ್ಲಾ ವಿದ್ಯಾರ್ಥಿಗಳು ಪಾಸ್
* 5,21,393 ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೇ ಪಾಸ್ ಮಾಡಿ ಸರ್ಕಾರ ಆದೇಶ
* ಕೊರೋನಾ ಸೋಂಕು ಹೆಚ್ಚಳವಾಗುತ್ತಿರೋ ಹಿನ್ನೆಲೆಯಲ್ಲಿ ಈ ಕ್ರಮ
ಹೈದರಾಬಾದ್, (ಮೇ.21): ದೇಶದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚಳವಾಗುತ್ತಿರುವುದಿರಿಂದ ಪರೀಕ್ಷೆ ಇಲ್ಲದೇ 10ನೇ ತರಗತಿ ವಿದ್ಯಾರ್ಥಿಗಳನ್ನ ಪಾಸ್ ಮಾಡುವಂತೆ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.
ಈ ಬಾರೀ ಪರೀಕ್ಷೆ ಬರೆಯಬೇಕಿದ್ದ 5,21,393 ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೇ ಪಾಸ್ ಮಾಡಿ ಇಂದು (ಶುಕ್ರವಾರ) ಸರ್ಕಾರ ಆದೇಶಿಸಿದೆ
10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್ ಎಂದ ಛತ್ತೀಸ್ಗಢ ಸರ್ಕಾರ
ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದ್ರ ರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಸದ್ಯ ಪಾಸ್ ಮಾಡಿರುವ ವಿದ್ಯಾರ್ಥಿಗಳಲ್ಲಿ ಶಾಲೆಗಳಲ್ಲಿ ಈಗಾಗಲೇ ನಡೆಸಿರುವ ಪರೀಕ್ಷೆಗಳಲ್ಲಿ 10 ಜಿಪಿಎ ಅಂಕಗಳನ್ನು ಪಡೆದ ಅನ್ವಯ ವಿದ್ಯಾರ್ಥಿಗಳಿಗೆ ಎಫ್ ಎ 1 ಅಂಕ ನೀಡಿದ್ದು, 535 ಶಾಲೆಗಳು ಉತ್ತಮ ಫಲಿತಾಂಶ ಪಡೆದಿದೆ ಎಂದರು.
ಸಿಎಂ ಕೆ ಚಂದ್ರಶೇಖರ್ ರಾವ್ ಅವರ ತೀರ್ಮಾನದ ಮೇರೆಗೆ ಪರೀಕ್ಷೆಗಳಿಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ. ಫಲಿತಾಂಶ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನವನ್ನು ಆಧರಿಸಿದೆ ಎಂದು ತಿಳಿಸಿದ್ದಾರೆ.
ಇನ್ನು ಛತ್ತೀಸ್‌ಗಡನಲ್ಲೂ ಸಹ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನ ಪಾಸ್ ಮಾಡಲಾಗಿದ್ದು, ಕರ್ನಾಟಕದಲ್ಲಿ ಪರೀಕ್ಷೆಗಳನ್ನು ಸದ್ಯಕ್ಕೆ ಮುಂದೂಡಲಾಗಿದೆ.