Asianet Suvarna News Asianet Suvarna News

ಆಳ್ವಾಸ್‌ ಸಂಸ್ಥೆಯಿಂದ 10 ಕೋಟಿ ಮೊತ್ತದ ವಿದ್ಯಾರ್ಥಿ ವೇತನ ಘೋಷಣೆ, ಮಾ.31, ಏ.14ರಂದು ಪ್ರವೇಶ ಪರೀಕ್ಷೆ

ತಿಭಾನ್ವಿತ ವಿದ್ಯಾರ್ಥಿಗಳನ್ನು ಪೋತ್ಸಾಹಿಸುತ್ತಿರುವ ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ಈ ಬಾರಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿ ರು.ಗೂ ಅಧಿಕ ಮೊತ್ತದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ.

Alvas' Education Foundation to hold scholarship entrance exam gow
Author
First Published Mar 17, 2024, 11:38 AM IST

ಮಂಗಳೂರು (ಮಾ.17): ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪೋತ್ಸಾಹಿಸುತ್ತಿರುವ ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ಈ ಬಾರಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿ ರು.ಗೂ ಅಧಿಕ ಮೊತ್ತದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ. ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಮೋಹನ್‌ ಆಳ್ವ ಈ ಕುರಿತು ವಿವರ ನೀಡಿದ್ದಾರೆ.

10ನೇ ತರಗತಿಯಲ್ಲಿ ಸಿಬಿಎಸ್‌ಇ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ) ಐಸಿಎಸ್‌ಇ (ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆಯನ್ನು ಬರೆಯಬಹುದು. ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮರ್ಥ್ಯ ಕುರಿತು 100 ನಿಮಿಷಗಳ ಪರೀಕ್ಷೆ ಮಾ. 31ರಂದು ಸಿಬಿಎಸ್‌ಇ ಮತ್ತು ಐಸಿಎಸ್‌ಇ ಹಾಗೂ ಏ. 14ರಂದು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಮೂಡುಬಿದಿರೆಯ ವಿದ್ಯಾಗಿರಿ ಸುಂದರಿ ಆಳ್ವ ಆವರಣದಲ್ಲಿನ ಆಳ್ವಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಇಂಗ್ಲಿಷ್‌ ಮಾಧ್ಯಮದಲ್ಲಿ ಪರೀಕ್ಷಾ ಪತ್ರಿಕೆ ಇರಲಿದೆ.

ಕೆಪಿಎಸ್‌ಸಿಯಿಂದ ನೇಮಕಾತಿ ಸುಗ್ಗಿ, 247 ಪಿಡಿಒ, 400ಕ್ಕೂ ಹೆಚ್ಚು ಗ್ರೂಪ್ ಸಿ ಹುದ್ದೆ ಅರ್ಜಿ ಆಹ್ವಾನ

ಸಿಬಿಎಸ್‌ಇ ಮತ್ತು ಐಸಿಎಸ್‌ಇ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾ. 28 ಕೊನೆಯ ದಿನವಾಗಿದ್ದು, ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಏ. 10 ರ ವರೆಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಆಳ್ವಾಸ್‌ ವೆಬ್‌ಸೈಟ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಎಂದು ಡಾ. ಮೋಹನ್‌ ಆಳ್ವ ಹೇಳಿದ್ದಾರೆ.

ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದ ವಿದ್ಯಾರ್ಥಿಗಳು ದೇಶದಲ್ಲೇ ಅತ್ಯುತ್ತಮ ಹಾಗೂ ಅನನ್ಯ ಮಾದರಿಯ ಶಿಕ್ಷಣ ನೀಡುತ್ತಿರುವ ಆಳ್ವಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗಿರುತ್ತಾರೆ ಎಂದು ಅವರು ಹೇಳಿದರು.

ಸ್ಟಾಫ್ ಸೆಲೆಕ್ಷನ್ ಕಮಿಷನ್ ಪೊಲೀಸ್‌ ಇನ್‌ಸ್ಪೆಕ್ಟರ್ ಹುದ್ದೆ, ಮಾರ್ಚ್‌ 28 ಅರ್ಜಿ ಸಲ್ಲಿಸಲು ಕೊನೆಯ ದಿನ

3000 ಮಕ್ಕಳಿಗೆ ಪ್ರಯೋಜನ: ಪ್ರತಿ ವರ್ಷ ಸುಮಾರು 3,000ದಷ್ಟು ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನದ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಡಾ. ಮೋಹನ್‌ ಆಳ್ವ ಹೇಳಿದ್ದಾರೆ.ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಆಯ್ಕೆಯ ಜತೆಯಲ್ಲಿ ಪ್ರತ್ಯೇಕವಾಗಿ ಪ್ರತಿ ವರ್ಷದಂತೆ ಎಸ್ಸೆಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೂ ಆಯ್ಕೆಗಳು ನಡೆಯುತ್ತವೆ ಎಂದರು.  ಹೆಚ್ಚಿನ ಮಾಹಿತಿಗೆ ಮೊಬೈಲ್‌ ಸಂಖ್ಯೆ:8884477588, 6366377827 ಅಥವಾ 6366377823 ಸಂಪರ್ಕಿಸಬಹುದು. 

Follow Us:
Download App:
  • android
  • ios