Asianet Suvarna News Asianet Suvarna News

ಶುಲ್ಕ ವಿನಾಯಿತಿ, ವಿದ್ಯಾಸಿರಿ, ಸ್ಕಾಲರ್ಶಿಪ್ ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡುವ ಶುಲ್ಕ ವಿನಾಯಿತಿ, ವಿದ್ಯಾಸಿರಿ, ಸ್ಕಾಲರ್ಶಿಪ್ ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ

Application date extended of scholarship For Obc Students rbj
Author
Bengaluru, First Published Apr 10, 2021, 10:10 PM IST

ಬೆಂಗಳೂರು, (ಏ.10) : ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2020-21 ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ , ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು  ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ  ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಇದೀಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ 20/04/2021 ರವರೆಗೆ ವಿಸ್ತರಿಸಲಾಗಿದೆ.

ಪರೀಕ್ಷೆ ಮುಗಿದ ಬಳಿಕ ಬೇಸಿಗೆ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಡಿಸಿಎಂ ‌ಅಶ್ವತ್ಥನಾರಾಯಣ

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ. ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಅರ್ಹ ವಿದ್ಯಾರ್ಥಿಗಳು ದಿನಾಂಕ 20:04:2021 ರೊಳಗಾಗಿ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಇಲಾಖೆ ಪ್ರಕಟಣೆ ಹೊರಡಿಸಿದೆ. ವಿದ್ಯಾರ್ಥಿಗಳು www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

Follow Us:
Download App:
  • android
  • ios