ಕಲಬುರಗಿ, (ಅ.25): 2020-21ನೇ ಸಾಲಿನಲ್ಲಿ ಬಿ.ಇ., ಬಿ.ಟೆಕ್, ಬಿ.ಬಿ.ಎ., ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಎಸ್ಸಿ. ನರ್ಸಿಂಗ್ ಹಾಗೂ ಇನ್ನಿತರ ವೃತ್ತಿಪರ ಕೋರ್ಸ್‍ಗಳಲ್ಲಿ ಮೊದಲನೇ ವರ್ಷಕ್ಕೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳಿಂದ ಪ್ರಧಾನಮಂತ್ರಿ ಶಿಷ್ಯವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬಗ್ಗೆ ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇನ್ಮುಂದೆ ವಾರದಲ್ಲಿ 5 ದಿನ ಮಾತ್ರವೇ ಕೆಲಸ

ಅರ್ಹ ವಿದ್ಯಾರ್ಥಿಗಳು www.ksb.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ 2020ರ ಡಿಸೆಂಬರ್ 31ರೊಳಗಾಗಿ ಅರ್ಜಿ ಸಲ್ಲಿಸಿದ ನಂತರ ಕಲಬುರಗಿ, ಬೀದರ, ರಾಯಚೂರ, ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಮಾಜಿ ಸೈನಿಕ ಮಕ್ಕಳು ಮೂಲ ದಾಖಲೆಗಳೊಂದಿಗೆ ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರಿಗೆ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನ ಸೌಧದ ಆವರಣದಲ್ಲಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-225003ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.