Asianet Suvarna News Asianet Suvarna News

ಒಂದೇ ವೆಬ್‌ಸೈಟ್‌ ಮೂಲಕ ಎಲ್ಲ ಸ್ಕಾಲರ್‌ಶಿಪ್‌ಗೆ ಅರ್ಜಿ, ಹಣ ಪಾವತಿ

ಈವರೆಗೆ ಅವೆಲ್ಲವನ್ನೂ ಬೇರೆ ಬೇರೆ ರೀತಿಯಲ್ಲಿ ಅರ್ಜಿ ಸಲ್ಲಿಸಿ, ಪಡೆಯುವ ವ್ಯವಸ್ಥೆಯಿತ್ತು. ಅದನ್ನು ಏಕರೂಪಗೊಳಿಸಲು ಸ್ಟೇಟ್‌ ಸ್ಕಾಲರ್‌ಶಿಪ್‌ ಪೋರ್ಟಲ್‌ನಲ್ಲಿಯೇ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅದರ ಜತೆಗೆ ಸ್ಟೇಟ್‌ ಸ್ಕಾಲರ್‌ಶಿಪ್‌ ಪೋರ್ಟಲ್‌ ಮೂಲಕವೇ ವಿದ್ಯಾರ್ಥಿಗಳ ಅಥವಾ ಪಾಲಕರ ಬ್ಯಾಂಕ್‌ ಖಾತೆಗೆ ಹಣ ಪಾವತಿಸುವುದು ಕಡ್ಡಾಯಗೊಳಿಸಲಾಗಿದೆ: ಎನ್‌.ಎಸ್. ಬೋಸರಾಜು 

Apply for All Scholarships through Single Website in Karnataka grg
Author
First Published Dec 5, 2023, 10:13 AM IST

ವಿಧಾನಪರಿಷತ್(ಡಿ.05) ಉನ್ನತ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳಿಂದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮತ್ತು ವಿದ್ಯಾರ್ಥಿ ವೇತನ ಪಾವತಿಗಾಗಿ ಸ್ಟೇಟ್‌ ಸ್ಕಾಲರ್‌ಶಿಪ್‌ ಪೋರ್ಟಲ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಸಭಾನಾಯಕ ಎನ್‌.ಎಸ್. ಬೋಸರಾಜು ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್‌ ಮಂಜುನಾಥ ಭಂಡಾರಿ ಕೇಳಿದ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವರ ಪರವಾಗಿ ಉತ್ತರಿಸಿದ ಬೋಸರಾಜು ಅವರು, ರಾಜ್ಯದ ವಿವಿಧ ಇಲಾಖೆಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ವಿದ್ಯಾರ್ಥಿ ವೇತನ ವಿತರಿಸಲಾಗುತ್ತಿದೆ. 

ರಾಜ್ಯದ 4 ಲಕ್ಷ ವಿದ್ಯಾರ್ಥಿಗಳಿಗೆ ಶಾಕ್‌: ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ರದ್ದುಗೊಳಿಸಿದ ಸರ್ಕಾರ

ಈವರೆಗೆ ಅವೆಲ್ಲವನ್ನೂ ಬೇರೆ ಬೇರೆ ರೀತಿಯಲ್ಲಿ ಅರ್ಜಿ ಸಲ್ಲಿಸಿ, ಪಡೆಯುವ ವ್ಯವಸ್ಥೆಯಿತ್ತು. ಅದನ್ನು ಏಕರೂಪಗೊಳಿಸಲು ಸ್ಟೇಟ್‌ ಸ್ಕಾಲರ್‌ಶಿಪ್‌ ಪೋರ್ಟಲ್‌ನಲ್ಲಿಯೇ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅದರ ಜತೆಗೆ ಸ್ಟೇಟ್‌ ಸ್ಕಾಲರ್‌ಶಿಪ್‌ ಪೋರ್ಟಲ್‌ ಮೂಲಕವೇ ವಿದ್ಯಾರ್ಥಿಗಳ ಅಥವಾ ಪಾಲಕರ ಬ್ಯಾಂಕ್‌ ಖಾತೆಗೆ ಹಣ ಪಾವತಿಸುವುದು ಕಡ್ಡಾಯಗೊಳಿಸಲಾಗಿದೆ ಎಂದರು.

Follow Us:
Download App:
  • android
  • ios