ಬೆಂಗಳೂರು, (ಏ.06): ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ, ಈಗಾಗಲೇ ರಾಜ್ಯ ಸರ್ಕಾರ ಬೆಂಗಳೂರು ನಗರದಲ್ಲಿ 1 ರಿಂದ 9ನೇ ತರಗತಿ ಶಾಲೆಗಳನ್ನು ಬಂದ್ ಮಾಡಿದೆ. 

ಇತ್ತ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯವು, ವಿದ್ಯಾರ್ಥಿಗಳ ಹಿತದೃಷ್ಠಿಯಿಂದ 15 ದಿನಗಳ ಕಾಲ ಬೆಂಗಳೂರು ವಿವಿ ವ್ಯಾಪ್ತಿಗೆ ಬರುವ ಕಾಲೇಜುಗಳಿಗೆ ರಜೆ ಘೋಷಿಸಿದೆ.

1ರಿಂದ 9ನೇ ಕ್ಲಾಸ್ ಪರೀಕ್ಷೆ ಗೊಂದಲಕ್ಕೆ ಸುರೇಶ್ ಕುಮಾರ್ ಸ್ಪಷ್ಟನೆ 

ಈ ಕುರಿತಂತೆ ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟಾರ್ ಜ್ಯೋತಿ ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ, ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವಂತ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ಏಪ್ರಿಲ್ 20ರವರೆಗೆ ರಜೆ ಘೋಷಿಸಲಾಗಿದೆ.

ಪದವಿ, ಸ್ನಾತಕೋತ್ತರ ಪದವಿ ತರಗತಿ ಬಂದ್ ಆದ್ರೂ ಶೈಕ್ಷಣಿಕ ಚಟುವಟಿಕೆ ಆನ್ ಲೈನ್ ಮೂಲಕ ಮುಂದುವರೆಸಲು ಸೂಚಿಸಿರುವ ಅವರು, ಹಾಸ್ಟೆಲ್ ನಲ್ಲಿ ವಾಸವಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಸೂಚಿಸಿದ್ದಾರೆ. ಅಲ್ಲದೇ ಪ್ರಾಯೋಗಿಕ ತರಗತಿಗಳು ಮಾತ್ರ ಎಂದಿನಂತೆ ನಡೆಯಲಿವೆ ಎಂದು ತಿಳಿಸಿದ್ದಾರೆ.