ಬೆಂಗಳೂರು ವಿಶ್ವವಿದ್ಯಾಲಯ ಸಾಧನೆಗೆ ಮತ್ತೊಂದು ಗರಿ: NIRF ಶ್ರೇಯಾಂಕದಲ್ಲಿ 81ನೇ ಸ್ಥಾನ!
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮೇಲುಗೈ ಸಾಧಿಸಿರುವ ಬೆಂಗಳೂರು ವಿಶ್ವವಿದ್ಯಾಲಯ ಮತ್ತೊಂದು ಹಿರಿಮೆಗೆ ಪಾತ್ರವಾಗಿದೆ. ರಾಷ್ಟ್ರೀಯ ಸಂಸ್ಥೆ ಶ್ರೇಯಾಂಕ ಚೌಕಟ್ಟು National Institute Ranking Framework (NIRF) ಶ್ರೇಯಾಂಕದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಅಗ್ರ 81 ಸ್ಥಾನಕ್ಕೆ ಭಾಜನವಾಗಿದೆ.
ವರದಿ: ನಂದೀಶ್ ಮಲ್ಲೇನಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಬೆಂಗಳೂರು
ಬೆಂಗಳೂರು (ಆ.12): ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮೇಲುಗೈ ಸಾಧಿಸಿರುವ ಬೆಂಗಳೂರು ವಿಶ್ವವಿದ್ಯಾಲಯ ಮತ್ತೊಂದು ಹಿರಿಮೆಗೆ ಪಾತ್ರವಾಗಿದೆ. ರಾಷ್ಟ್ರೀಯ ಸಂಸ್ಥೆ ಶ್ರೇಯಾಂಕ ಚೌಕಟ್ಟು National Institute Ranking Framework (NIRF) ಶ್ರೇಯಾಂಕದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಅಗ್ರ 81 ಸ್ಥಾನಕ್ಕೆ ಭಾಜನವಾಗಿದೆ. ರಾಜ್ಯ ವಿಶ್ವವಿದ್ಯಾಲಯ ಶ್ರೇಯಾಂಕದಲ್ಲಿ 24 ನೇ ಸ್ಥಾನ ಪಡೆದಿದೆ. ಈ ಮೂಲಕ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬೆಂವಿವಿ ತನ್ನ ಸಾಧನೆ ಮುಂದುವರೆಸಿದೆ.
ವಿದ್ಯಾರ್ಥಿ ಸ್ನೇಹಿ ವಾತವರಣ, ಅನುಭವಿ ಶಿಕ್ಷಕ ವರ್ಗ, ಅತ್ಯುತ್ತಮ ಪಠ್ಯಧಾರಿತ ಶಿಕ್ಷಣ, ತಂತ್ರಜ್ಞಾನಕ್ಕೆ ಆದ್ಯತೆ, ಕ್ರಿಯಾಶೀಲತೆ, ನಾವೀನ್ಯತೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವಾತವರಣ ಒದಗಿಸಿರುವ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಈ ಶ್ರೇಯಾಂಕ ದಕ್ಕಿರುವುದು ವಿವಿ ಬದ್ದತೆ ಮತ್ತು ಪರಿಶ್ರಮಕ್ಕೆ ಸಾಕ್ಷಿಯಾಗಿದೆ.
ವಿಶ್ವದಲ್ಲೇ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಅತ್ಯುತ್ತಮ ವಿವಿ ಎಂದು ಗುರುತಿಸಿಕೊಂಡಿದ್ದು ಇತ್ತೀಚಿಗಷ್ಟೇ NAAC A++ ಮತ್ತು ಪಿಎಂ - ಉಷಾ ಯೋಜನೆಯಡಿ 100 ಕೋಟಿ ಅನುದಾನವನ್ನು ಪಡೆದುಕೊಂಡಿತ್ತು. ಮುಂದುವರೆದ ಭಾಗವಾಗಿ NIRF ಶ್ರೇಯಾಂಕದಲ್ಲಿ ಅಗ್ರ ಸ್ಥಾನ ಪಡೆಯುವ ಮೂಲಕ ಬೆಂಗಳೂರು ವಿವಿ ಶೈಕ್ಷಣಿಕ ಸಾಧನೆಯ ಪರಂಪರೆಯನ್ನು ಮುಂದುವರೆಸಿದೆ.
ನನ್ನ ಸಿನಿಮಾ ಗುರಿ ತಲುಪಿದ್ದೇನೆ ಎಂದು ಯಾವತ್ತೂ ಅನಿಸಿಲ್ಲ, ನಾನಿನ್ನೂ ಇಲ್ಲೇ ಇದ್ದೀನಿ: ಪ್ರಣಯರಾಜ ಶ್ರೀನಾಥ್
ಈ ಸಂದರ್ಭದಲ್ಲಿ ಕುಲಪತಿಗಳು ಕರ್ನಲ್ ಡಾ.ಜಯಕರ ಎಸ್ ಎಂ ಪ್ರತಿಕ್ರಿಯಿಸಿದ್ದು " NIRF ಶ್ರೇಯಾಂಕದಲ್ಲಿ ಸ್ಥಾನ ಪಡೆದಿರುವುದು ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ವಿಷಯ. ಶಿಕ್ಷಣ, ಸಂಶೋಧನೆ, ತಂತ್ರಜ್ಞಾನ, ಮೂಲಭೂತ ಸೌಕರ್ಯ ಮತ್ತು ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ಬಲ ಬಂದಿದೆ.ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ವಿಶ್ವವಿದ್ಯಾಲಯ ಮತ್ತಷ್ಟು ಶ್ರಮಿಸಲಿದೆ.ಈ ಸಾಧನೆಗೆ ಕಾರಣಕರ್ತರಾದ ಸರ್ವರಿಗೂ ಧನ್ಯವಾದ ಮತ್ತು ಅಭಿನಂದನೆ ಸಲ್ಲಿಸುವುದಾಗಿ" ತಿಳಿಸಿದರು.