ಬೆಂಗಳೂರು(ಅ.13): ಬೆಂಗಳೂರು ವಿಶ್ವವಿದ್ಯಾಲಯದ ಅಧೀನದ ಕಾಲೇಜುಗಳಲ್ಲಿ ಸೋಮವಾರ ನಡೆಯಬೇಕಿದ್ದ ಬಿ.ಕಾಂ. 6ನೇ ಸೆಮಿಸ್ಟರ್‌ನ ‘ಪ್ರಿನ್ಸಿಪಲ್ಸ್‌ ಆ್ಯಂಡ್‌ ಪ್ರಾಕ್ಟೀಸ್‌ ಆಫ್‌ ಆಡಿಟಿಂಗ್‌’ ವಿಷಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಸೋಮವಾರ ಮಧ್ಯಾಹ್ನ 2ಕ್ಕೆ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆಗೆ ಹಾಜರಾಗಿದ್ದರು. ಅಷ್ಟರಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಬೆಳಕಿಗೆ ಬಂದಿದ್ದರಿಂದ ಪರೀಕ್ಷೆಯನ್ನು ರದ್ದು ಮಾಡಿ ಮುಂದೂಡಲಾಗಿದೆ. ಶೀಘ್ರದಲ್ಲೇ ದಿನಾಂಕ ಗೊತ್ತು ಮಾಡಿ ವಿದ್ಯಾರ್ಥಿಗಳಿಗೆ ತಿಳಿಸುವುದಾಗಿ ಬೆಂಗಳೂರು ವಿಶ್ವವಿದ್ಯಾಲಯ ತಿಳಿಸಿದೆ.

ಠಾಣೆ ಮೆಟ್ಟಿಲೇರಿದ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ-ಕುಲಸಚಿವರ ತಿಕ್ಕಾಟ

ಇಂದು ಎಬಿವಿಪಿ ಪ್ರತಿಭಟನೆ: 

ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌(ಎಬಿವಿಪಿ) ಮಂಗಳವಾರ (ಅ.13) ಬೆಂಗಳೂರು ವಿವಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಲಿದೆ.