ಬೆಂಗಳೂರು ವಿವಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ, ನಿಗದಿತ ನಡೆಯಲಿದೆ ಪರೀಕ್ಷೆ
* ಬೆಂಗಳೂರು ವಿವಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ
* ನಿಗದಿತ ವೇಳಾಪಟ್ಟಿಯಂತೆ ನಾಳೆ ಪರೀಕ್ಷೆ ನಡೆಯಲಿದೆ
* ಬೆಂಗಳೂರು ವಿವಿ ಮೌಲ್ಯಮಾಪನ ಕುಲಸಚಿವ ದೇವರಾಜ್ ಮಾಹಿತಿ
ಬೆಂಗಳೂರು, (ಅ.29): ಬೆಂಗಳೂರು ವಿಶ್ವವಿದ್ಯಾಯಲದ (Bengaluru University) ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ, ವೇಳಾಪಟ್ಟಿಯಂತೆ ನಾಳೆ (ಅ.30) ಪರೀಕ್ಷೆ (Exam) ನಡೆಯಲಿವೆ.
ವೇಳಾಪಟ್ಟಿಯಂತೆ ನಾಳೆ (ಶನಿವಾರ) ಪದವಿ 4ನೇ ಸೆಮಿಸ್ಟರ್ ನ (Degree 4th Semister Exam) ಕೊನೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯ ಎಲ್ಲ ಕಾಲೇಜುಗಳು ತೆರೆದಿರುತ್ತೆ ಎಂದು ಮೌಲ್ಯಮಾಪನ ಕುಲಸಚಿವ ದೇವರಾಜ್ ಮಾಹಿತಿ ನೀಡಿದ್ದಾರೆ.
ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth rajkumar) ನಿಧನ ಹಿನ್ನೆಲೆಯಲ್ಲಿ ನಾಳೆ (ಅ.30) ನಡೆಯಬೇಕಿದ್ದ ಬೆಂಗಳೂರು ಸಿಟಿ ವಿಶ್ವವಿದ್ಯಾಲದ ಎಂಬಿಎ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಪರೀಕ್ಷೆ ಮುಂದೂಡಿಕೆ ಕುರಿತು ಬೆಂಗಳೂರು ಸಿಟಿ ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.
ಎಂಬಿಎ (MBA) ಅಂತಿಮ ವರ್ಷದ ಪರೀಕ್ಷೆಗಳನ್ನು ಮಂಗಳವಾರಕ್ಕೆ ಮುಂಡೂಡಲಾಗಿದೆ ಎಂದು ಬೆಂಗಳೂರು ಸಿಟಿ ವಿವಿ ಕುಲಪತಿ ಲಿಂಗರಾಜು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ 4ನೇ ಸೆಮಿಸ್ಟರ್‌ನ ಕೊನೆ ಪರೀಕ್ಷೆ ನಡೆಯುತ್ತೋ, ಇಲ್ಲ ಎಂದು ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಇದರಿಂದ ಕುಲಸಚಿವ ದೇವರಾಜ್ ಈ ಸ್ಪಷ್ಟನೆ ನೀಡುವ ಮೂಲಕ ವಿದ್ಯಾರ್ಥಿಗಳ ಗೊಂದಗಳಿಗೆ ತೆರೆ ಎಳೆದಿದ್ದಾರೆ.
ಖಾಸಗಿ ಶಾಲೆಗಳಿಗೆ ರಜೆ
ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth rajkumar) ನಿಧನ ಹಿನ್ನೆಲೆಯಲ್ಲಿ ನಾಳೆ (ಅ.30) ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ (School) ರಜೆ (Holiday) ಘೋಷಿಸಲಾಗಿದೆ.
ಈ ಕುರಿತು ಖಾಸಗಿ ಶಾಲೆಗಳ (Private School) ಒಕ್ಕೂಟ ರೂಪ್ಸಾ (Rupsa) ಇಂದು (ಅ.29) ಪ್ರಕಟಣೆ ಹೊರಡಿಸಿದ್ದು, ಪುನೀತ್ ರಾಜ್‌ಕುಮಾರ್ ಅಗಲಿಕ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ನಾಳೆ (ಶನಿವಾರ) ರಜೆ ಘೋಷಿಸಲಾಗಿದೆ ಎಂದು ರುಪ್ಸಾ ಒಕ್ಕೂಟ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮಾಹಿತಿ ನೀಡಿದ್ದಾರೆ.
ನಗರಾದ್ಯಂತ ಫುಲ್ ಸೆಕ್ಯೂರಿಟಿ
ಬೆಂಗಳೂರು ನಗರಾದ್ಯಂತ 6 ಸಾವಿರ ಪೊಲೀಸರು, ಕೆಎಸ್ಆರ್‌ಪಿ KSRP ಪ್ಲಟೂನ್ ನಿಯೋಜನೆ ಮಾಡಲಾಗಿದ್ದು, ಭಾನುವಾರ ಮಧ್ಯ ರಾತ್ರಿ ವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. ಎಷ್ಟೇ ಜನ ಬಂದ್ರೂ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗುತ್ತೆ. ಈ ಸಂದರ್ಭದಲ್ಲಿ ಕುಚೇಷ್ಟೇ ಮಾಡಿದ್ರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಕಮಿಷನರ್ ಕಮಲ್ ಪಂಥ್ ಎಚ್ಚರಿಕೆ ಕೊಟ್ಟಿದ್ದಾರೆ.
ಭಾನುವಾರ ಅಪ್ಪು ಅಂತ್ಯಸಂಸ್ಕಾರ
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅಂತ್ಯಸಂಸ್ಕಾರವನ್ನು ಅವರ ತಂದೆ ಸಮಾಧಿಯ ಪಕ್ಕದಲ್ಲಿಯೇ ಮಾಡಲು ರಾಜ್ಯ ಸರ್ಕಾರ ಹಾಗೂ ಕುಟುಂಬಸ್ಥರು ತೀರ್ಮಾನಿಸಿದೆ.
ಪುನೀತ್ ರಾಜ್‌ಕುಮಾರ್ ಅಂತ್ಯಸಂಸ್ಕಾರವನ್ನು (Last Rite) ಭಾನುವಾರ(ಅ.31) ಕಂಠೀರವ ಸ್ಟುಡಿಯೋ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಂಠೀರವ ಸ್ಡುಡಿಯೋ ಆವರಣದಲ್ಲಿರುವ ಡಾ ರಾಜ್ ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದು, ನಾಳೆ (ಅ.30) ಇಡೀ ದಿನ ಕಂಠೀರವ ಸ್ಟುಡಿಯೋದಲ್ಲಿ (Kanteerava Studio)ಸಾರ್ವಜನಿಕರ ಅಂತಿಮ ದರ್ಶನ ಇರಲಿದೆ.