ಬೆಂಗಳೂರು, (ಅ.14): ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯನ್ನು ಅ.17ಕ್ಕೆ ನಿಗದಿ ಮಾಡಲಾಗಿದೆ. 

ಬಿ.ಕಾಂ 6ನೇ ಸೆಮಿಸ್ಟರ್'ನ ಪ್ರಿನ್ಸಿಪಲ್ಸ್ ಆ್ಯಂಡ್ ಪ್ರಾಕ್ಟೀಸ್ ಆಫ್ ಆಡಿಟಿಂಗ್ ವಿಷಯದ ಪರೀಕ್ಷೆಯನ್ನು ಅ.17ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ನಡೆಯಲಿದೆ ಎಂದು ವಿವಿ ಮಾಹಿತಿ ನೀಡಿದೆ.

ಬೆಂಗಳೂರು ವಿವಿ ಬಿಕಾಂ ಪ್ರಶ್ನೆ ಪತ್ರಿಕೆ ಲೀಕ್‌: ಪರೀಕ್ಷೆ ಮುಂದೂಡಿಕೆ 

ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌(ಎಬಿವಿಪಿ) ಮಂಗಳವಾರ (ಅ.13) ಬೆಂಗಳೂರು ವಿವಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ಮಾಡಿತ್ತು. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿತು.