ಮಕ್ಕಳಿಗೆ ಈ ವರ್ಷವೇ ಶೂ, ಸೈಕಲ್ ವಿತರಣೆ: Basavaraj Bommai ಸ್ಪಷ್ಟನೆ
ಶಾಲಾ ಮಕ್ಕಳಿಗೆ ಶೂ ಮತ್ತು ಸೈಕಲ್ ಈ ವರ್ಷವೇ ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಮೈಸೂರು (ಜು.7): ಶಾಲಾ ಮಕ್ಕಳಿಗೆ ಶೂ ಮತ್ತು ಸೈಕಲ್ ಈ ವರ್ಷವೇ ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ವಿತರಣೆ ಮಾಡುವಲ್ಲಿ ಸ್ವಲ್ಪ ವಿಳಂಬವಾಗಿದೆ. ಶಿಕ್ಷಣ ಸಚಿವ ನಾಗೇಶ್ ಇದನ್ನ ನೋಡಿಕೊಳ್ಳುತ್ತಿದ್ದಾರೆ. ಈ ವರ್ಷವೇ ಶೂ ಮತ್ತು ಸೈಕಲ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಶಾಲಾಮಕ್ಕಳಿಗೆ ಶೂ ಮತ್ತು ಸೈಕಲ್ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಅನೇಕ ಮುಖಂಡರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಈ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದರು. ಅದರ ಬೆನ್ನಲ್ಲೇ ಮುಖ್ಯಮಂತ್ರಿಗಳೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
KARNATAKA 2ND PUC ; ಉತ್ತರ ಪತ್ರಿಕೆ ಪ್ರತಿ ಡೌನ್ಲೋಡ್ ಆಗದೆ ವಿದ್ಯಾರ್ಥಿಗಳ ಪರದಾಟ
ಸಿದ್ದರಾಮಯ್ಯ ಆಕ್ರೋಶ: ಕಳೆದೆರಡು ವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಸೈಕಲ್, ಶೂ ಮತ್ತು ಸಾಕ್ಸ್‌ಗಳನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ. ಕನಿಷ್ಠ ಪಠ್ಯ ಪುಸ್ತಕ ವಿತರಿಸಲೂ ಆಗದ ಗತಿಗೇಡಿನ ಸ್ಥಿತಿಗೆ ತಲುಪಿದೆ. ಹಿಂದಿನ ವರ್ಷಗಳಲ್ಲಿ ಕೊರೋನಾ ಕಾರಣ ನೀಡಿದ್ದ ಸರ್ಕಾರ ಈಗ 40 ಪರ್ಸೆಂಟ್ ಕಮಿಷನ್‌ನಿಂದ ಖಜಾನೆ ಖಾಲಿ ಎಂದು ತೋರಿಸುತ್ತಿದೆಯೇ? ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಂದೆಡೆ ರಾಜ್ಯ ಸಚಿವರು, ಅಡಳಿತ ಪಕ್ಷದ ನಾಯಕರು ಹಾಗೂ ಅಧಿಕಾರಿಗಳ ದುಷ್ಟಕೂಟ ಕಮಿಷನ್ ದಂಧೆಯಲ್ಲಿ ತೊಡಗಿಸಿಕೊಂಡು ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದ್ದಾರೆ. ಮತ್ತೊಂದೆಡೆ ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ, ಸೈಕಲ್, ಶೂ, ಸಾಕ್ಸ್ ನೀಡದೆ ಅವರ ಭವಿಷ್ಯದ ಜತೆ ಚೆಲ್ಲಾಟ ಆಡುತ್ತಿದ್ದಾರೆ.
ಕೋವಿಡ್ ವೇಳೆ ಸರ್ಕಾರಿ ಶಾಲೆ, ಕಾಲೇಜು ಪ್ರವೇಶ ಏರಿಕೆ
ಇಂದಿನ ದಿನದವರೆಗೆ ಶಾಲಾ ಮಕ್ಕಳಿಗೆ ನೀಡಬೇಕಾಗಿದ್ದ ಪಠ್ಯಪುಸ್ತಕಗಳ ಬಗ್ಗೆ ಖಚಿತ ತೀರ್ಮಾನವನ್ನು ಕೈಗೊಳ್ಳಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕೆಲವು ಶಾಲೆಗಳಿಗೆ ಹಳೆಯ ಪಠ್ಯ, ಇನ್ನು ಕೆಲವು ಶಾಲೆಗಳಿಗೆ ಹೊಸ ಪಠ್ಯ, ಉಳಿದ ಶಾಲೆಗಳಿಗೆ ಪಠ್ಯವೇ ಇಲ್ಲದಂತಹ ದುಸ್ಥಿತಿ ಇದೆ ಎಂದು ಟೀಕಿಸಿದ್ದಾರೆ.
Textbook Row; ಸರ್ಕಾರದ ವಿರುದ್ಧ ನಾರಾಯಣ ಗುರು ವಿಚಾರ ವೇದಿಕೆ ಪ್ರತಿಭಟನೆ
ಬಿಎಸ್‌ವೈ ವಿರುದ್ಧ ಸೇಡು: ವಿದ್ಯಾರ್ಥಿನಿಯರಿಗೆ ಸೈಕಲ್‌ಗಳನ್ನು ನೀಡುವ ಯೋಜನೆ ಯಡಿಯೂರಪ್ಪನವರದ್ದು. ಆ ಯೋಜನೆಯನ್ನು ಕೂಡ ಸ್ಥಗಿತಗೊಳಿಸುವ ಮೂಲಕ ಮುಖ್ಯಮಂತ್ರಿ ಬೊಮ್ಮಾಯಿ ಅವರು ಯಡಿಯೂರಪ್ಪನವರ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊರಟಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.