Asianet Suvarna News Asianet Suvarna News

ಪಠ್ಯಪುಸ್ತಕ ಪರಿಷ್ಕರಣೆಗೆ ಬಿಜೆಪಿ ತೀವ್ರ ವಿರೋಧ

ಕೆಲವು ಮಹನೀಯರ ಪಾಠವನ್ನು ಕೈಬಿಡಬೇಕು ಎಂಬ ಹೇಳಿಕೆ ಕುರಿತು ಸಮಗ್ರವಾಗಿ ಚರ್ಚಿಸಲಾಗಿದೆ. ಶಿಕ್ಷಣ ಕ್ಷೇತ್ರವು ಪೂರ್ವಾಗ್ರಹಪೀಡಿತ ಮನಸ್ಥಿತಿಯಿಂದ ಹೊರಬರಬೇಕು. ಉತ್ತಮ ನಾಗರಿಕರನ್ನು ಶಿಕ್ಷಣ ತಯಾರು ಮಾಡಬೇಕು. ಸಮಾನ ಮನಸ್ಕರ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗುವುದು. ಅದರ ಬಳಿಕ ಮುಂದಿನ ರೂಪರೇಷೆ ನಿರ್ಧರಿಸಲಾಗುತ್ತದೆ ಎಂದ ಸಿ.ಟಿ.ರವಿ 

BJP Strongly Opposes Textbook Revision in Karnataka grg
Author
First Published Jun 15, 2023, 8:30 AM IST

ಬೆಂಗಳೂರು(ಜೂ.15):  ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರವಾಗಿ ಅವಲೋಕನ ಮಾಡದೆ, ಸಾಧಕ ಬಾಧಕ ಅಧ್ಯಯನ ಮಾಡದೆ, ರಾಜಕೀಯ ಕಾರಣಕ್ಕಾಗಿ ಪೂರ್ವಾಗ್ರಹಪೀಡಿತರಾಗಿ ನೀಡಿರುವ ಪಠ್ಯ ಪರಿಷ್ಕರಣೆ ಕುರಿತ ಹೇಳಿಕೆ ಅಸಹಿಷ್ಣು ಭಾವನೆಯಿಂದ ಕೂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಬುಧವಾರ ಪಕ್ಷದ ಕಚೇರಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರಗಳ ಅವಧಿಯ ಎಲ್ಲ ಮಾಜಿ ಶಿಕ್ಷಣ ಸಚಿವರು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮೇಲ್ಮನೆ ಸದಸ್ಯರಾಗಿ ಕೆಲಸ ಮಾಡುತ್ತಿರುವ ಸದಸ್ಯರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಾಯಿತು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರವಿ ಅವರು, ಕೆಲವು ಮಹನೀಯರ ಪಾಠವನ್ನು ಕೈಬಿಡಬೇಕು ಎಂಬ ಹೇಳಿಕೆ ಕುರಿತು ಸಮಗ್ರವಾಗಿ ಚರ್ಚಿಸಲಾಗಿದೆ. ಶಿಕ್ಷಣ ಕ್ಷೇತ್ರವು ಪೂರ್ವಾಗ್ರಹಪೀಡಿತ ಮನಸ್ಥಿತಿಯಿಂದ ಹೊರಬರಬೇಕು. ಉತ್ತಮ ನಾಗರಿಕರನ್ನು ಶಿಕ್ಷಣ ತಯಾರು ಮಾಡಬೇಕು. ಸಮಾನ ಮನಸ್ಕರ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗುವುದು. ಅದರ ಬಳಿಕ ಮುಂದಿನ ರೂಪರೇಷೆ ನಿರ್ಧರಿಸಲಾಗುತ್ತದೆ ಎಂದರು.

ಶಾಲಾ ಪಠ್ಯಗಳ ಸಮಗ್ರ ಪರಿಷ್ಕರಣೆ ಈ ವರ್ಷ ಇಲ್ಲ

ಮಾಜಿ ಸಚಿವ ಬಿ.ಸಿ.ನಾಗೇಶ್‌ ಮಾತನಾಡಿ, ದ್ವೇಷದಿಂದ ವರ್ತಿಸುತ್ತಿರುವುದು ಸರಿಯಲ್ಲ. ಎನ್‌ಸಿಇಆರ್‌ಟಿ ಸೂಚನೆ ಮೇರೆಗೆ ನಾವು ಹಿಂದೆ ಬದಲಾವಣೆ ಮಾಡಿದ್ದೆವು. ತಪ್ಪುಗಳನ್ನು ಸರಿಪಡಿಸುವ ಉದ್ದೇಶ ನಮ್ಮದಾಗಿತ್ತು. ಈಗ ದ್ವೇಷದಿಂದ ಬದಲಾವಣೆ ಮಾಡಿದರೆ ಅದರಿಂದ ಮಕ್ಕಳು, ಪೋಷಕರ ಮೇಲೆ ದುಷ್ಪರಿಣಾಮ ಬೀರಲಿದೆ. ಬದಲಾವಣೆ ಮಾಡುವುದಿದ್ದರೆ ಪೋಷಕರ ಗಮನಕ್ಕೆ ತಂದು ಮಾಡಬೇಕು ಎಂದು ಒತ್ತಾಯಿಸಿದರು.

Follow Us:
Download App:
  • android
  • ios