ಮಾ.31ರಿಂದ ನಡೆಯಲಿರುವ SSLC ವಿದ್ಯಾರ್ಥಿಗಳು ಬೆಂಗಳೂರು ವ್ಯಾಪ್ತಿಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಅನುಕೂಲ ಆಗುವಂತೆ ಬಿಎಂಟಿಸಿ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ.

ಬೆಂಗಳೂರು (ಮಾ.25): ರಾಜ್ಯದಲ್ಲಿ ಮಾ.31ರಿಂದ SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಲಿದ್ದು, ರಾಜ್ಯ ರಾಜಧಾನಿ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯು ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. 

ಈಗಾಗಲೇ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಎ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಅನುಕೂಲ ಆಗುವಂತೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಈ ಬಗ್ಗೆ ಆದೇಶ ಹೊರಡಿಸಲಸಾಗಿತ್ತು. ಆದರೆ, ಬೆಂಗಳೂರಿನ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಈಗ ಬಿಎಂಟಿಸಿ ಕೂಡ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲ ಆಗುವಂತೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಅನುಕೂಲ ಆಗಲಿದೆ.

SSLC Exam: ಬೆಂಗಳೂರು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ: ಸೈಬರ್‌ ಕೇಂದ್ರಕ್ಕೂ ಅವಕಾಶವಿಲ್ಲ

ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿದರೆ ಸಾಕು: ಕೆಲವು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ತಾವು ಅಭ್ಯಾಸ ಮಾಡುವ ಶಾಲೆಯಲ್ಲಿಯೇ ಪರೀಕ್ಷಾ ಕೇಂದ್ರಳು ಇರುವುದಿಲ್ಲ. ಆದ್ದರಿಂದ ಬೇರೆ ಸ್ಥಳದಲ್ಲಿ ಇರುವ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಸಮಸ್ಯೆ ಆಗಲಿದೆ. ಆದ್ದರಿಂದ ಅಂತಹ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹೋಗಲು ಅನುಕೂಲ ಆಗುವಂತೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ. ಇನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಹೋಗುವ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ (Exam hall Ticket) ತೋರಿಸಿದರೆ ಉಚಿತವಾಗಿ ಪ್ರಯಾಣ ಮಾಡಬಹುದು.

ಪರೀಕ್ಷೆಯಿಂದ ಹಿಂದಿರುಗುವಾಗಲೂ ಉಚಿತ ಪ್ರಯಾಣ: 

  • ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಅಂದರೆ ದಿನಾಂಕ 31.03.2023 ರಿಂದ 15.04.2023 ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲಾ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
  • ಎಸ್.ಎಸ್.ಎಲ್.ಸಿ ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆ ಗೊಳಿಸಲಾಗುವುದು.
  • ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು.
  • ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಕೆಎಸ್‌ಆರ್‌ಟಿಸಿಯಲ್ಲೂ ಉಚಿತ ಪ್ರಯಾಣ: ಪರೀಕ್ಷೆ ಸಮಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. 10 ನೇ ತರಗತಿ ಪರೀಕ್ಷೆ ಬರೆಯಲು ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳು ಉಚಿತವಾಗಿ ಕೆಎಸ್ಆರ್‌ಟಿಸಿ ಪರೀಕ್ಷಾ ಕೇಂದ್ರಗಳವರೆಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಮಾರ್ಚ್ 31ರಿಂದ ಏಪ್ರಿಲ್ 15 ರವರೆಗೆ 10ನೇ ತರಗತಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ನಡೆಯುವ ದಿನಾಂಕದಂದು ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಸಂಚರಿಸಲು ಸೂಚನೆ ನೀಡಿದೆ. ಬಸ್ ಡ್ರೈವರ್ ಗಳಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳ ಮುಂದೆ ಸ್ಟಾಪ್ ಕೊಡುವಂತೆ ನಿಗಮ ಸೂಚಿಸಿದೆ. ಪರೀಕ್ಷಾ ಕೇಂದ್ರಗಳ ಮುಂದೆ ವಿದ್ಯಾರ್ಥಿಗಳ ಕೋರಿಗೆ ಮೇರೆಗೆ ಇಳಿಯಲು ಮತ್ತು ಹತ್ತಲು ಕೋರಿಕೆ ನಿಲುಗಡೆ ನೀಡಲು ಸೂಚನೆ ನೀಡಿದೆ.

ಬೇಸಿಗೆಯ ಅಗ್ನಿ ಪರೀಕ್ಷೆ... ಮಕ್ಕಳ ಒತ್ತಡ ನಿವಾರಿಸುವುದು ಹೇಗೆ..?

ವಿದ್ಯಾರ್ಥಿಗಳಿಗಾಗಿ ಸಹಾಯವಾಣೆ: ಇದೇ ಮಾ.31ರಿಂದ ಏಪ್ರಿಲ್‌ 15ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಮೂಡುವ ಯಾವುದೇ ಸಂದೇಹ, ಆತಂಕ, ಗೊಂದಲಗಳನ್ನು ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯನಿರ್ಣಯ ಮಂಡಳಿ ಸಹಾಯವಾಣಿ 080- 23310075 , 080- 23310076 ಆರಂಭಿಸಿದೆ.