Asianet Suvarna News Asianet Suvarna News

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಯಡಿಯೂರಪ್ಪ

ಇಷ್ಟು ದಿನ ಸಂಬಳವಿಲ್ಲ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ ನೀಡಿದ್ದಾರೆ.

BSY directs to Officers for  guest lecturers Salary Release soon rbj
Author
Bengaluru, First Published Sep 22, 2020, 7:05 PM IST

ಬೆಂಗಳೂರು, (ಸೆ.22): ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರಿಗೆ, ಬಾಕಿ ವೇತನವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

 ಮಾರ್ಚ್​ನಿಂದ ಅತಿಥಿ ಉಪನ್ಯಾಸಕರ ಗೌರವ ಧನ ಬಿಡುಗಡೆ ಮಾಡದೆ ಮೊಂಡುತನ ತೋರುತ್ತಿದ್ದ ರಾಜ್ಯ ಸರ್ಕಾರ, ಇದೀಗ ಸಂದನದಲ್ಲಿ ತನ್ನದೇ ಪಕ್ಷದ ಎಂಎಲ್ಸಿಯ ಪ್ರತಿಭಟನೆ ಬಳಿಕ ಎಚ್ಚೆತ್ತುಕೊಂಡಿದ್ದು,  ಏಪ್ರಿಲ್ ನಿಂದ ಆಗಸ್ಟ್ ವರೆಗೆ ವೇತನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದರು.

ಮಾಲ್ ಇದ್ಯಾ ಪ್ಲೀಸ್ ಎಂದ ದೀಪಿಕಾ, ಭಾರಿ ಮಳೆ ಭೀತಿಯಲ್ಲಿ ಕರ್ನಾಟಕ: ಸೆ.22ರ ಟಾಪ್ 10 ಸುದ್ದಿ!

ಕೊರೋನಾ ಸಂಕಷ್ಟಕ್ಕೆ ಸಿಲುಕಿರುವ ಅತಿಥಿ ಉಪನ್ಯಾಸಕರಿಗೆ ಸಂಬಳವೂ ಇಲ್ಲದೆ ಬದುಕು ದುಸ್ತರವಾಗಿದೆ. ಕೂಡಲೇ ವೇತನ ಬಿಡುಗಡೆ ಮಾಡಿ ಎಂದು ಬಿಜೆಪಿ ಎಂಎಲ್​ಸಿ ಆಯನೂರು ಮಂಜುನಾಥ್ ಆಗ್ರಹಿಸಿದ್ದರು. ಅಲ್ಲದೇ ಧರಣಿಗಿಳಿದರು.

ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 14,447 ಅತಿಥಿ ಉಪನ್ಯಾಸಕರಿಗೆ ಲಾಕ್ ಡೌನ್ ಕಾರಣದಿಂದ ಕಾಲೇಜು ಮುಚ್ಚಿ ಮಾರ್ಚ್ ತಿಂಗಳವರೆಗೆ ಮಾತ್ರವೇ ವೇತನ ನೀಡಲಾಗಿತ್ತು. ಇದೀಗ ಏಪ್ರಿಲ್ ನಿಂದ ಆಗಸ್ಟ್ ವರೆಗೆ ವೇತನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ಹೇಳಿದರು.

Follow Us:
Download App:
  • android
  • ios