ಬೆಂಗಳೂರು, (ಅ.21) : ರಾಜ್ಯದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆಗಾಗಿ ಒಂದೇ ವಾರದ ಒಳಗಾಗಿ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

 ಒಂದು ವಾರದ ಒಳಗಾಗಿ ಶಿಕ್ಷಣ ಇಲಾಖೆಯ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿ, ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಯಡಿಯೂಪ್ಪ ಇಂದು (ಬುಧವಾರ) ಆದೇಶಿಸಿದ್ದಾರೆ.

ಶೈಕ್ಷಣಿಕವಾಗಿ ರಾಜ್ಯ ಸರ್ಕಾರದಿಂದ ದಿಟ್ಟ ಹೆಜ್ಜೆ : ಡಿಸಿಎಂ 

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಲ್ಲಿಸಲಾಗಿದ್ದ ವರ್ಗಾವಣೆ ಸಂಬಂಧದ ಮನವಿ ಕುರಿತಂತೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ, ಸಾರ್ವಜನಿಕ ಇಲಾಖೆಯ ಆಯುಕ್ತರಿಗೆ ಪತ್ರದಲ್ಲಿ ಸೂಚಿಸಿದ್ದು, ಶಾಲಾ, ಕಾಲೇಜು ಶಿಕ್ಷಕರು, ಉಪನ್ಯಾಸಕರು ವರ್ಗಾವಣೆ ಸೌಲಭ್ಯಗಳಿಲ್ಲದೇ ಆತಂಕಕ್ಕೆ ಒಳಗಾಗಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.  ಅಲ್ಲದೇ ಶಿಕ್ಷಕರು, ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ವಿನಂತಿಸಿಕೊಂಡಿದ್ದರು.