ಶಾಲಾ ಮಕ್ಕಳಿಗೆ ಖಾಸಗಿ ಸಹಭಾಗಿತ್ವದಲ್ಲಿ ಬಸ್ ಸೌಲಭ್ಯ, ನನ್ನ ಕ್ಷೇತ್ರದಿಂದಲೇ ಆರಂಭಿಸುವ ಉದ್ದೇಶ: ಸಿಎಂ ಬೊಮ್ಮಾಯಿ

ಖಾಸಗೀ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳಿಗಾಗಿ ಬಸ್ಗಳನ್ನು ನಡೆಸುವ  ಯೋಜನೆಯನ್ನು ರಾಜ್ಯಾದ್ಯಂತ ಪ್ರಾರಂಭಿಸುವ ಗುರಿ ಇದ್ದು ನನ್ನ ಕ್ಷೇತ್ರದಿಂದಲೇ ಇದನ್ನು ಪ್ರಾರಂಭಿಸಬೇಕೆಂಬ ಉದ್ದೇಶ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

Bus facility for school children in private partnership says CM Basavaraj Bommai gow

ಹಾವೇರಿ (ಡಿ.4): ಶಾಲಾ ಮಕ್ಕಳಿಗೆ ವಿಶೇಷ ಯೋಜನೆ ರೂಪಿಸಿ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅವರು ವಾಯುವ್ಯ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ಶಿಗ್ಗಾಂವ್ ನೂತನ ಬಸ್ ಘಟಕ ಮತ್ತು ಚಾಲನಾ ಹಾಗೂ ತಾಂತ್ರಿಕ ತರಬೇತಿ ಕೇಂದ್ರದ ಶಂಕುಸ್ಥಾಪನಾ ಕಾರ್ಯವನ್ನು ನೆರವೇರಿಸಿ ಮಾತನಾಡಿದರು. ಖಾಸಗೀ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳಿಗಾಗಿ ಬಸ್ಗಳನ್ನು ನಡೆಸುವ ಈ ಯೋಜನೆಯನ್ನು ರಾಜ್ಯಾದ್ಯಂತ ಪ್ರಾರಂಭಿಸುವ ಗುರಿ ಇದ್ದು ನನ್ನ ಕ್ಷೇತ್ರದಿಂದಲೇ ಇದನ್ನು ಪ್ರಾರಂಭಿಸಬೇಕೆಂಬ ಉದ್ದೇಶ ಇದೆ. ಈ ಮ‌ೂಲಕ ಶಾಲಾ ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಮಾಡುವ ಪೈಲಟ್ ಯೋಜನೆ ನಮ್ಮ ಕ್ಷೇತ್ರದಲ್ಲಿ ಪ್ರಾರಂಭವಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾರ್ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಸಂಕನೂರ, ವಾಯುವ್ಯ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಬಸವರಾಜ ಕೆಲಗಾರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಶಿಗ್ಗಾವಿಯಲ್ಲಿ ಬಸ್ ಡಿಪೋ ಆಗಬೇಕು ಎನ್ನೋದು ಬಹಳ ದಿನದ ಬೇಡಿಕೆ ಇತ್ತು. 28 ಕೋಟಿ ವೆಚ್ಚದಲ್ಲಿ ಡಿಪೋ ಮತ್ತು ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ಮಾಡಿದ್ದೇವೆ. ಈ ಭಾಗದ ಯುವಕರಿಗೆ ತರಬೇತಿ ಕೇಂದ್ರದಿಂದ ಸೌಲಭ್ಯ ಸಿಗಲಿದೆ. ತಾಂತ್ರಿಕ ತರಬೇತಿ ಪಡೆಯಲು ಅನುಕೂಲವಾಗಲಿದೆ. ಸ್ಕೀಲ್ ಡೆವಲಪ್ಮೆಂಟ್ ದೊಡ್ಡ ಪ್ರಮಾಣದಲ್ಲಿ ಮಾಡುವಂತದ್ದು ನಮ್ಮ ಉದ್ದೇಶ. ಜೆಸಿಬಿ ಕಂಪನಿಯ ತರಬೇತಿ ಕೇಂದ್ರ ಶಿಗ್ಗಾವಿಗೆ ತರಲು ಪ್ರಯತ್ನ ಮಾಡುತ್ತಿದ್ದೇನೆ. ಆಟೋಮೊಬೈಲ್ ಕ್ಷೇತ್ರದಲ್ಲಿ ಇನ್ನಷ್ಟು ಉದ್ಯಮ ತರಲು ಮಾತುಕತೆ ನಡೆಸಿದ್ದೇನೆ. ಡಿಸೆಂಬರ್ 18 ಕ್ಕೆ ಶಿವರಾಮ ಹೆಬ್ಬಾರ್ ಅವರ ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್ ಘಟಕ ಶಿಗ್ಗಾವಿಯಲ್ಲಿ ಆರಂಭವಾಗ್ತಿದೆ. ಟೆಕ್ಸ್ ಟೈಲ್ ಪಾಕ್೯ ಬರುತ್ತಿದೆ, ಐದು ಸಾವಿರ ಜನರಿಗೆ ಉದ್ಯೋಗ ನೀಡುತ್ತೇವೆ ಎಂದು ಇದೇ ವೇಳೆ ಹೇಳಿದರು.

ಹಾವೇರಿಯವರೆಗೆ ಬಸ್‌ ಪಾಸ್‌ ವಿಸ್ತರಿಸಲು ಆಗ್ರಹಿಸಿ ಪ್ರತಿಭಟನೆ
ಹಾವೇರಿ ತಾಲೂಕಿನ ಗಾಂಧಿಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ವಿದ್ಯಾರ್ಥಿಗಳ ಬಸ್‌ ಪಾಸ್‌ ಹಾವೇರಿ ನಗರದವರೆಗೂ ವಿಸ್ತರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿಂದು ಗಾಂಧಿಪುರ ಕಾಲೇಜ್‌ ಎದುರು ಪ್ರತಿಭಟಿಸಿದರು.

ಬಳಿಕ ಆರ್‌ಟಿಒ ಕಚೇರಿ ಹತ್ತಿರ ಇರುವ ಕೆಎಸ್‌ಆರ್‌ಟಿಸಿ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ. ವಿ. ಜಗದೀಶ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ ಮಾತನಾಡಿ, ಹಾವೇರಿ ಜಿಲ್ಲಾ ಕೇಂದ್ರದಿಂದ ದೂರವಿರುವ ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಾಮೀಣ ಭಾಗದ 2890 ಜನ ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿದ್ದಾರೆ. 2021-22 ಸಾಲಿನವರೆಗೂ ವಿದ್ಯಾರ್ಥಿಯ ತನ್ನ ಹಳ್ಳಿಯಿಂದ ಹಾವೇರಿವರೆಗೆ ಮಾರ್ಗ ಬದಲಾವಣೆ ಕಾಲೇಜಿನ ಹೆಸರು ಹಾಕಿ ಬಸ್‌ ಪಾಸ್‌ ವಿತರಣೆ ಮಾಡುವ ಪದ್ಧತಿ ಇತ್ತು. ಆದರೆ 2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಕೇವಲ ವಿದ್ಯಾರ್ಥಿಯ ಹಳ್ಳಿಯಿಂದ ಕಾಲೇಜಿನವರೆಗೆ ಮಾತ್ರ ಬಸ್‌ ಪಾಸ್‌ ವಿತರಣೆ ಮಾಡಿದ್ದು ನಗರಕ್ಕೆ ಹೋಗಲು ಟಿಕೆಟ್‌ ತೆಗೆದುಕೊಂಡೆ ಹೋಗಬೇಕು ಎಂದು ಹೇಳುತ್ತಾರೆ. ನಗರ ಅಂದಮೇಲೆ ಪ್ರತಿ ಕೆಲಸಗಳಿಗೂ ಹೋಗುವ ಅವಶ್ಯಕತೆ ಇರುತ್ತೆ ಕೇವಲ ಬಸ್‌ ಪಾಸ್‌ ಪಡೆಯಲು ಕೂಡ ನಗರದಲ್ಲಿರುವ ಕಂಪ್ಯೂಟರ್‌ ಸೆಂಟರ್‌ಗೆ ಹೋಗಲೇಬೇಕು. ಇನ್ನೂ ಹಾಸ್ಟೆಲ್, ಸ್ಕಾಲರ್‌ಶಿಪ್‌, ಪುಸ್ತಕ ಖರೀದಿ, ಟ್ಯೂಶನ್‌ ಕ್ಲಾಸ್‌, ಕಂಪ್ಯೂಟರ್‌ ಕ್ಲಾಸ್‌ ಸೇರಿದಂತೆ ಇನ್ನಿತರ ಕೆಲಸಗಳಿಗೆ ಹೋಗುವ ಅನಿವಾರ್ಯತೆ ಇದ್ದೆ ಇರುತ್ತದೆ. ಆದ್ದರಿಂದ ಈ ನೀತಿಯನ್ನು ಹಿಂಪಡೆದು ಹಾವೇರಿ ನಗರದವರೆಗೂ ಬಸ್‌ ಪಾಸ್‌ ವಿತರಣೆ ಮಾಡಬೇಕು, ಒಂದು ವೇಳೆ ಈ ಬೇಡಿಕೆ ಈಡೇರಿಸದಿದ್ದರೆ ಕೆಎಸ್‌ಆರ್‌ಟಿಸಿ ಡಿಪೋಗೆ ಮುತ್ತಿಗೆ ಹಾಕಿ ಬೃಹತ್‌ ಹೋರಾಟ ಮಾಡಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿ ಮುಖಂಡ ವಿವೇಕ್‌ ಫನಾಸೆ ಮಾತನಾಡಿ, ನಮ್ಮ ಹಳ್ಳಿಯಿಂದ ಗಾಂಧಿಪುರದವರಿಗೆ ಮಾತ್ರ ಬಸ್‌ ಪಾಸ್‌ ಕೊಟ್ಟಿದ್ದಾರೆ. ಯಾವುದೇ ಒಂದು ಸಣ್ಣ ವಸ್ತು ತೆಗೆದುಕೊಳ್ಳಬೇಕಾದರೂ ಅರ್ಜಿಗಳನ್ನು ಸಲ್ಲಿಸಬೇಕೆಂದರೆ, ಯಾವುದೇ ಮೇಲಧಿಕಾರಿಗಳನ್ನು ಭೇಟಿ ಮಾಡಬೇಕೆಂದರು. ಹಾವೇರಿಗೆ ಹೋಗಲು . 13 ಬಸ್‌ ಚಾಜ್‌ರ್‍ ಕೊಡಬೇಕು. ಹಾಗಾಗಿ ನಮ್ಮ ಬಸ್‌ ಪಾಸ್‌ ಅನ್ನು ಹಾವೇರಿವರೆಗೆ ವಿಸ್ತರಣೆ ಮಾಡಲೇಬೇಕು. ಹಳ್ಳಿಗಳಿಗೆ ಹೋಗಲು ಸರಿಯಾಗಿ ಬಸ್‌ ವ್ಯವಸ್ಥೆ ಇಲ್ಲ. ಸರಿಯಾದ ಸಮಯಕ್ಕೆ ಬಸ್‌ ಬರುವುದಿಲ್ಲ, ಆದ್ದರಿಂದ ಸರಿಯಾಗಿ ತರಗತಿಗಳನ್ನು ಕೇಳಲಾಗುತ್ತಿಲ್ಲ ಎಂದು ಆರೋಪಿಸಿದರು.

ಶಾಲಾ ಬಾಲಕಿಯರಿಗೆ ಸ್ಯಾನಿಟರಿ ಪ್ಯಾಡ್: ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ವಿದ್ಯಾರ್ಥಿನಿ ರಂಜಿತಾ ಮಾತನಾಡಿದರು. ಮನವಿ ಪತ್ರ ಸ್ವೀಕರಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ವಿ. ಜಗದೀಶ್‌ ಮಾತನಾಡಿ, ನಮ್ಮ ಹಂತದಲ್ಲಿ ಬದಲಾವಣೆ ಮಾಡುವುದಕ್ಕೆ ಬರುವುದಿಲ್ಲ. ನೀವು ನೀಡಿದ ಮನವಿಯನ್ನು ಮೇಲಧಿಕಾರಿಗಳಿಗೆ ಪತ್ರ ಬರೆದು ಬದಲಾವಣೆ ಅವಕಾಶ ಸಿಕ್ಕರೆ ಖಂಡಿತ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲಾಗುವುದು ಎಂದರು.

TAMIL NADU: ಮಕ್ಕಳಿಗೆ ವೈಜ್ಞಾನಿಕ ಆಸಕ್ತಿ ಬೆಳೆಸಲು ರೈನ್‌ಬೋ ಫೋರ್ಮ್

ಎಸ್‌ಎಫ್‌ಐ ಜಿಲ್ಲಾ ಮುಖಂಡರಾದ ಗುಡ್ಡಪ್ಪ ಮಡಿವಾಳರ, ಯುವರಾಜ ಹಂಚಿನಮನಿ, ಅರುಣ್‌ ಆರೇರ, ಶ್ರೇಯಸ್‌ ಕೊರವರ, ಸುದೀಪ್‌ ಭಜಂತ್ರಿ, ಪಲ್ವೆಜ್‌ ಖಾನ್‌, ಕೇಶವ್‌ ಬಡಿಗೇರ, ಅಭಿಷೇಕ ಎಂ., ಕಿರಣ್‌ ಹಿರೇಮಠ, ರಂಜಿತ್‌ ಎಚ್‌., ಶೃತಿ ಕಳಸದ, ತೇಜು ಬ್ಯಾಡಗಿ, ಅಕ್ಷತಾ ಪಾಲ್ಗೊಂಡಿದ್ದರು.

Latest Videos
Follow Us:
Download App:
  • android
  • ios