ಪ್ರೌಢಶಾಲಾ ಶಿಕ್ಷಕರ ಸಂಘದ ಬಿಗಿಪಟ್ಟಿಗೆ SSLC ವಿಶೇಷ ತರಗತಿ ಆದೇಶ ರದ್ದು: ಸಿಎಂ ಸಿದ್ದರಾಮಯ್ಯ!
ಪ್ರೌಢಶಾಲಾ ಶಿಕ್ಷಕರ ಸಂಘದ ಬಿಗಿಪಟ್ಟಿಗೆ SSLC ವಿಶೇಷ ತರಗತಿ ಆದೇಶ ರದ್ದು ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು (ಮೇ.17): ಪ್ರೌಢಶಾಲಾ ಶಿಕ್ಷಕರ ಸಂಘದ ಬಿಗಿಪಟ್ಟಿಗೆ SSLC ವಿಶೇಷ ತರಗತಿ ಆದೇಶ ರದ್ದು ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, 2024ರ ಮಾರ್ಚ್-ಏಪ್ರಿಲ್ ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಹಾಗೂ C ಮತ್ತು C+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು 15.05.2024 ರಿಂದ 05.06.2024ರವರೆಗೆ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. ಸದರಿ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಸರ್ಕಾರದ ಸೂಚನೆಗಳನ್ವಯ ಮುಂದೂಡಲಾಗಿದ್ದು, ಇವುಗಳನ್ನು 29/05/2024 ರಿಂದ 13/06/2024 ರವರೆಗೆ ನಡೆಸಲು ತಿಳಿಸಿದೆ. ಇನ್ನು 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-02ನ್ನು14/06/2024 ರಿಂದ ಪ್ರಾರಂಭಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಶೇಷ ತರಗತಿ ರದ್ದಿಗಾಗಿ ನಡೆದ ಕಸರತ್ತು: 2023 24 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ-1ರಲ್ಲಿ ಅನುತ್ತೀರ್ಣವಾಗಿರುವ ವಿದ್ಯಾರ್ಥಿಗಳಿಗೆ ದಿನಾಂಕ 15 5 2024 ರಿಂದ ವಿಶೇಷ ತರಗತಿಗಳನ್ನು ನಡೆಸುವಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ವಿಡಿಯೋ ಕಾನ್ಫರೆನ್ಸ್ ನಲ್ಲಿ ತಿಳಿಸಿರುವಂತೆ ನಿರ್ದೇಶಕರು ಪ್ರೌಢ ಶಿಕ್ಷಣ ರವರು ಸುತ್ತೋಲೆ ಹೊರಡಿಸಿರುತ್ತಾರೆ. ಶಿಕ್ಷಕರಿಗೆ ದಿನಾಂಕ 28.05.2023ರ ವರೆಗೆ ಬೇಸಿಗೆ ರಜೆ ಇರುವುದರಿಂದ ಹಾಗೂ ರಜಾ ಅವಧಿಯಲ್ಲಿಯೇ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಮೌಲ್ಯಮಾಪನ ಕಾರ್ಯಗಳು ಹಾಗೂ ಲೋಕಸಭಾ ಚುನಾವಣೆಯ ಕಾರ್ಯಗಳನ್ನು ಮುಗಿಸಿರುತ್ತಾರೆ.
ಲೋಕಸಭೆಯಲ್ಲಿ ಬಿಜೆಪಿ 28 ಸ್ಥಾನ ಗೆದ್ರೆ, ರಾಜೀನಾಮೆ ಕೊಡುವೆ: ಶಾಸಕ ಬೇಳೂರು ಗೋಪಾಲಕೃಷ್ಣ
ದಿನಾಂಕ 15 5 2024 ರಿಂದ ವಿಶೇಷ ತರಗತಿಗಳನ್ನು ನಡೆಸಲು ಮಾಡಿರುವ ಆದೇಶವನ್ನು ರದ್ದುಪಡಿಸುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪ್ರೌಢ ಶಾಲೆಗಳ ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿ ನನಗೆ ದೂರವಾಣಿ ಮೂಲಕ ಮಾತನಾಡಿದ್ದರು. ದಿನಾಂಕ 16.05.2024ರಂದು ನಾನು ಮತ್ತು ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೀ ರಾಮೋಜಿಗೌಡರವರು ಈಶಾನ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೀ ಡಿ.ಟಿ ಶ್ರೀನಿವಾಸ್ ರವರು ಸನ್ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಒಂದು ಗಂಟೆಗಳ ಕಾಲ ಚರ್ಚಿಸಿ ಕೂಡಲೇ ಬೇಸಿಗೆ ರಜೆ ವಿಸ್ತರಿಸುವಂತೆ ಆದೇಶ ಹೊರಡಿಸಲು ಸೂಚಿಸಿದ್ದರು.
ಈ ವಿಷಯದ ಬಗ್ಗೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೀ ಮರಿತಿಬ್ಬೆಗೌಡರವರು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ದೂರವಾಣಿಯಲ್ಲಿ ಚರ್ಚಿಸಿದ್ದರು. ಆದರೂ ಸಹ ಇನ್ನೂ ಆದೇಶ ಮಾಡಿರದ ಕಾರಣ ಇಂದು ಮತ್ತೊಮ್ಮೆ ಸನ್ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಇನ್ನೂ ಆದೇಶ ಹೊರಡಿಸಿಲ್ಲವೆಂದು ತಿಳಿಸಿದಾಗ ಮಾನ್ಯ ಮುಖ್ಯಮಂತ್ರಿಗಳು ಕೂಡಲೇ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮಾತನಾಡಿ ಬೇಸಿಗೆ ರಜೆಯನ್ನು ದಿನಾಂಕ 28 5 2024ರ ವರೆಗೆ ಮುಂದುವರಿಸಬೇಕು ಹಾಗೂ ವಾರ್ಷಿಕ ಪರೀಕ್ಷೆ- 2ನ್ನು ಒಂದು ವಾರಗಳ ಕಾಲ ಮುಂದೂಡಿ ಈ ಕೂಡಲೇ ಆದೇಶ ಹೊರಡಿಸಬೇಕೆಂದು ಸೂಚಿಸಿದ್ದಾರೆ.
ಕೊಡಗಿನಲ್ಲಿ ಮಳೆ: ಬತ್ತಿದ್ದ ಕಾವೇರಿ ನದಿಯಲ್ಲಿ ಹರಿವು ಶುರು
ಇದರ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ತಮ್ಮ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅತಿಕ್ ರವರಿಗೂ ಸಹ ಸೂಚಿಸಿದ್ದು ಇಂದು ಬೇಸಿಗೆ ರಜೆ ಮುಂದೂಡುವುದು ಮತ್ತು ವಾರ್ಷಿಕ ಪರೀಕ್ಷೆ-2ನ್ನು ಒಂದು ವಾರಗಳ ಕಾಲ ಮುಂದೂಡುವ ಆದೇಶವನ್ನು ಮಾಡಿಸುವಂತೆ ಸೂಚಿಸಿರುತ್ತಾರೆ. ಈ ವಿಷಯದ ಬಗ್ಗೆ ಕೂಡಲೇ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ತುಂಬು ಹೃದಯದ ಧನ್ಯವಾದಗಳು. ನಮ್ಮ ಈ ಭೇಟಿ ಸಂದರ್ಭದಲ್ಲಿ ನಮಗೆ ಸಹಕಾರ ನೀಡಿದ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್ ರವರು ಹಾಗೂ ಹಿಂದುಳಿದ ವರ್ಗ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿಯವರು ಕೃಷಿ ಸಚಿವರಾದ ಚೆಲುವರಾಯಸ್ವಾಮಿಯವರು ಸಮಾಜ ಕಲ್ಯಾಣ ಸಚಿವರಾದ ಎಚ್ ಸಿ ಮಹದೇವಪ್ಪನವರು ರೇಷ್ಮೆ ಮತ್ತು ಪಶುಸಂಗೋಪನೆ ಸಚಿವರಾದ ವೆಂಕಟೇಶ್ ರವರು ಹಾಗೂ ಇನ್ನಿತರ ಎಲ್ಲಾ ಸಚಿವರಿಗೂ ತುಂಬು ಹೃದಯದ ಧನ್ಯವಾದಗಳು ಅರ್ಪಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ತಿಳಿಸಿದ್ದಾರೆ.