Asianet Suvarna News

2022-23ರಿಂದ ಕನ್ನಡದಲ್ಲಿ ವೃತ್ತಿ ಶಿಕ್ಷಣ: ಡಿಸಿಎಂ ಅಶ್ವತ್ಥನಾರಾಯಣ

* ಎಂಜಿನಿಯರಿಂಗ್‌ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳು ಕನ್ನಡದಲ್ಲಿ
* ವೃತ್ತಿಪರ ಶಿಕ್ಷಣ ಮಾತೃಭಾಷೆಯಲ್ಲಿ ನೀಡಬೇಕು ಎಂಬುದು ಹೊಸ ಶಿಕ್ಷಣ ನೀತಿಯ ಪ್ರಮುಖ ಆಶಯ
* ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲೂ ಕನ್ನಡವನ್ನು ಬಳಸಬಹುದು

Career Education in Kannada from 2022-23 Says DCM CN Ashwathnarayan grg
Author
Bengaluru, First Published Jul 19, 2021, 9:21 AM IST
  • Facebook
  • Twitter
  • Whatsapp

ಬೆಂಗಳೂರು(ಜು.19): 2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ್‌ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಎಂಜಿನಿಯರಿಂಗ್‌ ಕೋರ್ಸುಗಳ ಪಠ್ಯವನ್ನು ಕನ್ನಡಕ್ಕೆ ಭಾಷಾಂತರಿಸುವ ಕೆಲಸ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.

ಕರ್ನಾಟಕ ವಿಶ್ವವಿದ್ಯಾಲಯದ ಎಲ್ಲಾ ಭಾಷಾ ವಿಭಾಗದ ಅಧ್ಯಾಪಕರ ಸಂಘದ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ‘ಹೊಸ ಶಿಕ್ಷಣ ನೀತಿ- ಭಾರತೀಯ ಭಾಷೆಗಳ ಅಧ್ಯಯನ’ ಕುರಿತ ವೆಬಿನಾರ್‌ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 60,000 ಮಕ್ಕಳು ಕಲಿಕೆಯಿಂದ ದೂರ..!

ವೃತ್ತಿಪರ ಶಿಕ್ಷಣವನ್ನು ಮಾತೃಭಾಷೆಯಲ್ಲಿ ನೀಡಬೇಕು ಎಂಬುದು ಹೊಸ ಶಿಕ್ಷಣ ನೀತಿಯ ಪ್ರಮುಖ ಆಶಯವಾಗಿದೆ. ಈ ಪರಿಕಲ್ಪನೆ ಎಷ್ಟು ಚೆನ್ನಾಗಿದೆ ಎಂದರೆ ಹೊಸ ತಂತ್ರಜ್ಞಾನವನ್ನು ತಮ್ಮ ಭಾಷೆಯ ಆಧಾರದ ಮೇಲೆಯೇ ರೂಪಿಸಬಹುದು. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲೂ ಕನ್ನಡವನ್ನು ಬಳಸಬಹುದು. ತಂತ್ರಜ್ಞಾನ ಮತ್ತು ಆವಿಷ್ಕಾರ ಬೆಳೆದಂತೆಲ್ಲ ಅದಕ್ಕೆ ಸಮಾನಾಂತರವಾಗಿ ಕನ್ನಡವೂ ಬೆಳೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕನ್ನಡದಲ್ಲಿಯೇ ವೃತ್ತಿಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಅಗತ್ಯ ಪೋತ್ಸಾಹ ನೀಡಲಿದೆ. ತಾಂತ್ರಿಕ ಶಿಕ್ಷಣ ವ್ಯವಸ್ಥೆಯಲ್ಲಿ ಕನ್ನಡವನ್ನು ಹೆಚ್ಚೆಚ್ಚು ಅಳವಡಿಸಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ಮಾತೃಭಾಷೆ ಕನ್ನಡಕ್ಕೆ ಇನ್ನೂ ಹೆಚ್ಚಿನ ಶಕ್ತಿ ಬರುತ್ತದೆ. ಅದರ ಬಗ್ಗೆ ಯಾವ ಗೊಂದಲ, ಅನುಮಾನವೂ ಬೇಡ ಎಂದರು.

ಶಿಕ್ಷಣ ನೀತಿಯ ಪ್ರಕಾರ ಮಕ್ಕಳು ಎರಡು ದೇಶಿಯ ಭಾಷೆಗಳನ್ನು ಹಾಗೂ ಒಂದು ಅಂತಾರಾಷ್ಟ್ರೀಯ ಭಾಷೆಯನ್ನು ಕಡ್ಡಾಯವಾಗಿ ಕಲಿಯಲೇಬೇಕು. ಅದರಲ್ಲಿ ಮಾತೃಭಾಷೆಗೆ ಮೊದಲ ಪ್ರಾಶಸ್ತ್ಯ ಇರುತ್ತದೆ ಎಂದರು.

ಉನ್ನತ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ ಪ್ರೊ.ಬಿ. ತಿಮ್ಮೇಗೌಡ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ, ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಮಿತಿ ಸದಸ್ಯ ಪ್ರೊ.ಟಿ.ವಿ.ಕಟ್ಟಿಮನಿ ಮತ್ತಿತರರು ಭಾಗವಹಿಸಿದ್ದರು.
 

Follow Us:
Download App:
  • android
  • ios