CBSE 2022-23 Exam ಪರೀಕ್ಷಾ ಮಾದರಿಯ ಬಗ್ಗೆ ಇನ್ನೂ ನಿರ್ಧರಿಸದ ಸಿಬಿಎಸ್ಇ!

2022-23 ನೇ ಶೈಕ್ಷಣಿಕ ಸಾಲಿನಲ್ಲಿ 10 ಮತ್ತು 12ನೇ ತರಗತಿಯನ್ನು ಎರಡು ಭಾಗಗಳಾಗಿ ವಿಂಗಡಣೆ ಮಾಡಬೇಕೆ ಅಥವಾ ಒಂದೇ ಬೋರ್ಡ್ ಪರೀಕ್ಷೆ ಮಾದರಿಯಲ್ಲಿ ಮಾಡಬೇಕೆ ಎಂಬ ಬಗ್ಗೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಇನ್ನೂ  ನಿರ್ಧರಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

CBSE yet to decide on reverting to single board exam for Class X and XII gow

ನವದೆಹಲಿ(ಏ.18): 2022-23 ನೇ ಶೈಕ್ಷಣಿಕ ಸಾಲಿನಲ್ಲಿ 10 ಮತ್ತು 12ನೇ ತರಗತಿಯನ್ನು ಎರಡು ಭಾಗಗಳಾಗಿ ವಿಂಗಡಣೆ ಮಾಡಬೇಕೆ ಅಥವಾ ಒಂದೇ ಬೋರ್ಡ್ ಪರೀಕ್ಷೆ (Board Exam) ಮಾದರಿಯಲ್ಲಿ ಉಳಿಸಿಕೊಳ್ಳಬೇಕೆ ಎಂಬ ಬಗ್ಗೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ  (Central Board of Secondary Education - CBSE) ಇನ್ನೂ ತೀರ್ಮಾನ ಮಾಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ಅವಧಿಯನ್ನು ವಿಭಜಿಸುವುದು, ಎರಡು ಅವಧಿಯ ಅಂತ್ಯದ ಪರೀಕ್ಷೆಗಳನ್ನು ನಡೆಸುವುದು ಮತ್ತು ಪಠ್ಯಕ್ರಮವನ್ನು ತರ್ಕಬದ್ಧಗೊಳಿಸುವುದು 2021-22 ರಲ್ಲಿ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ವಿಶೇಷ ಮೌಲ್ಯಮಾಪನ ಯೋಜನೆಯ ಭಾಗವಾಗಿತ್ತು.

ಆದರೆ ಈ ವರ್ಷ ಕೂಡ ಹಿಂದಿನ ವರ್ಷದ ರೀತಿ ಮುಂದುವರಿಯುತ್ತದೆಯೇ ಅಥವಾ ಕೋವಿಡ್ ಗಿಂತ ಮೊದಲಿನ ನಿಯಮ ಜಾರಿಗೆ ಬರುತ್ತದೆಯೇ ಎಂಬ ಬಗ್ಗೆ ಇನ್ನೂ ಸಿಬಿಎಸ್ಇ ತೀರ್ಮಾನ ಮಾಡಿಲ್ಲ. 

545 PSI ಹುದ್ದೆ ನೇಮಕಾತಿಯಲ್ಲಿ ಆಕ್ರಮ ಪ್ರಕರಣ: ಮಹತ್ವದ ಹೇಳಿಕೆ ಕೊಟ್ಟ ಡಿಜಿ ಐಜಿಪಿ

ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ 2020-21ರ ಶೈಕ್ಷಣಿಕ ಅವಧಿಗೆ ಯಾವುದೇ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗದ ಕಾರಣ ಪರ್ಯಾಯ ಮೌಲ್ಯಮಾಪನ ಯೋಜನೆಯನ್ನು ಬಳಸಿಕೊಂಡು ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಬೇಕಾಗಿದ್ದ ಬೋರ್ಡ್ ಪರೀಕ್ಷೆಗಳನ್ನು ಎರಡು ಅವಧಿಗಳಲ್ಲಿ ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಈ ಕ್ರಮವನ್ನು ಒಂದು ಬಾರಿಯ ಕ್ರಮವಾಗಿ ಘೋಷಿಸಲಾಗಿತ್ತು ಎಂದು ಮಂಡಳಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಧಾನ ಈ ವರ್ಷ ಕೂಡ ಮುಂದುವರಿಯುತ್ತದೆಯೇ ಅಥವಾ ಹಳೆಯ ವಿಧಾನ ಪುನರಾವರ್ತನೆಯಾಗುತ್ತದೆಯೇ ಎಂದು ಗೊತ್ತಿಲ್ಲ ಎನ್ನುತ್ತಾರೆ. ಶೈಕ್ಷಣಿಕ ಅವಧಿ, ಸಿಲೆಬಸ್ ನ ವಿಂಗಡಣೆ ಸಮಯದಲ್ಲಿ ಮೊದಲ ಅವಧಿಯ ಬೋರ್ಡ್ ಪರೀಕ್ಷೆ ಕಳೆದ ವರ್ಷ ಡಿಸೆಂಬರ್ ನಲ್ಲಿ ನಡೆಸಲಾಗಿತ್ತು.

KPSC RDWSD Recruitment 2022 ಒಟ್ಟು 136  ಕಿರಿಯ ಇಂಜಿನಿಯರ್ ಹುದ್ದೆಗೆ ನೇಮಕಾತಿ

ಟರ್ಮ್ I ಪರೀಕ್ಷೆಗಳು ಈಗಾಗಲೇ ಮುಗಿದಿದ್ದು, 10 ಮತ್ತು 12 ಎರಡೂ ತರಗತಿಗಳಿಗೆ ಟರ್ಮ್-II ಪರೀಕ್ಷೆಗಳು ಏಪ್ರಿಲ್ 26 ರಿಂದ ಪ್ರಾರಂಭವಾಗುತ್ತವೆ. ಸಾಂಕ್ರಾಮಿಕ ರೋಗದಿಂದಾಗಿ ಶಾಲೆಗಳು ಬಂದ್ ಆಗಿದ್ದನ್ನು ಗಮನದಲ್ಲಿಟ್ಟುಕೊಂಡು ಎರಡು ಪರೀಕ್ಷೆಗಳ ನಡುವೆ ಸಾಕಷ್ಟು ಅಂತರವನ್ನು ನೀಡಲಾಗಿದೆ ಎಂದು ಮಂಡಳಿ ತಿಳಿಸಿದೆ.

ಜೆಇಇ-ಮೇನ್ ಸೇರಿದಂತೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಸಿದ್ಧಪಡಿಸುವಾಗ ಸಾಕಷ್ಟು ಕಾಳಜಿ ವಹಿಸಲಾಗಿದೆ. ಯಾವುದೇ ಎರಡು ವಿಷಯಗಳ ಪರೀಕ್ಷೆಗಳು ಒಂದೇ ದಿನಾಂಕದಂದು ಬರದಂತೆ ನೋಡಿಕೊಳ್ಳಲಾಗಿದೆ ಸಿಬಿಎಸ್ ಇ ಹೇಳಿದೆ.

Karnataka Politics: ಜೆಡಿಎಸ್‌ ಅಧಿಕಾರಕ್ಕೆ ತರುವುದು ನನ್ನ ಕೊನೇ ಆಸೆ: ದೇವೇಗೌಡ

 ಕೋವಿಡ್ 4ನೇ ಅಲೆ ತಲೆದೋರುವ ಭೀತಿ ಹಿನ್ನೆಲೆಯಲ್ಲಿ ಮತ್ತೆ ಶಾಲಾ-ಕಾಲೇಜುಗಳು ಮುಚ್ಚಬಹುದು ಎಂಬ ಆತಂಕ ಉಂಟಾಗಿದೆ. ಆದರೆ ಈ ಬಾರಿ ದೀರ್ಘಕಾಲದವರೆಗೆ ಶಾಲಾ-ಕಾಲೇಜುಗಳನ್ನು ವಿದ್ಯಾರ್ಥಿಗಳ ಶಿಕ್ಷಣ ಹಿತದೃಷ್ಟಿಯಿಂದ ಮುಚ್ಚುವ ಸಾಧ್ಯತೆಗಳು ತೀರಾ ಕಡಿಮೆಯಾಗಿದೆ.

ದೆಹಲಿ ಮತ್ತು ಎನ್ ಸಿಆರ್ ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ಕಂಡುಬಂದಿರುವ ಕಡೆಗಳಲ್ಲಿ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಶಾಲೆಗಳನ್ನು ಕೆಲ ದಿನಗಳವರೆಗೆ ಮುಚ್ಚಲಾಗುತ್ತಿದೆ.

Latest Videos
Follow Us:
Download App:
  • android
  • ios