COMED-K: ಸಿಇಟಿ ಕೌನ್ಸೆಲಿಂಗ್ ಬಳಿಕ ಕಾಮೆಡ್-ಕೆ ಕೌನ್ಸೆಲಿಂಗ್
ಖಾಸಗಿ ಎಂಜಿಯರಿಂಗ ಕಾಲೇಜು ಸಂಘಕ್ಕೆ ಸರ್ಕಾರ ಸೂಚನೆ, ಸಿಇಟಿ, ಕಾಮೆಡ್ ಕೌನ್ಸೆಲಿಂಗ್ ದಿನಾಂಕ ನಿಗದಿಗೆ ಸೆ.13ಕ್ಕೆ ಮತ್ತೆ ಸಭೆ, ಸಿಇಟಿ ರ‍್ಯಾಂಕಿಂಗ್ ಬಿಕ್ಕಟ್ಟು ಕಾರಣ ಈ ಕ್ರಮ
ಬೆಂಗಳೂರು(ಸೆ.08): ಎಂಜಿನಿಯರಿಂಗ್ ಶಿಕ್ಷಣ ಪ್ರವೇಶಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕೌನ್ಸೆಲಿಂಗ್ ಮುಗಿದ ಬಳಿಕ ಕಾಮೆಡ್-ಕೆ ಕೌನ್ಸೆಲಿಂಗ್ ನಡೆಸುವಂತೆ ಉನ್ನತ ಶಿಕ್ಷಣ ಇಲಾಖೆ ರಾಜ್ಯದ ಖಾಸಗಿ ಅನುದಾನ ರಹಿತ ಎಂಜಿನಿಯರಿಂಗ್ ಕಾಲೇಜುಗಳ ಸಂಘಕ್ಕೆ (ಕುಪೇಕಾ) ಸೂಚನೆ ನೀಡಿದೆ.
ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಬುಧವಾರ ಕುಪೇಕಾ ಪ್ರತಿನಿಧಿಗಳೊಂದಿಗೆ ತಮ್ಮ ಕಚೇರಿಯಲ್ಲಿ ಸಭೆ ನಡೆಸಿ ಈ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ, ಕುಪೇಕಾಗೆ ಇಲಾಖೆಯಿಂದ ಈ ಸಂಬಂಧ ಲಿಖಿತವಾಗಿಯೇ ಇಲಾಖೆ ಸ್ಪಷ್ಟ ಸೂಚನೆ ನೀಡಲಾಗಿದೆ. ಈ ಮಧ್ಯೆ, ಸಿಇಟಿ ಕೌನ್ಸೆಲಿಂಗ್ ಮತ್ತು ಕಾಮೆಡ್-ಕೆ ಕೌನ್ಸೆಲಿಂಗ್‌ಗೆ ದಿನಾಂಕ ನಿಗದಿಪಡಿಸುವ ಸಂಬಂಧ ಸೆ. 13 ರಂದು ಮತ್ತೊಂದು ಸುತ್ತಿನ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಸಭೆಯಲ್ಲಿ ಸಚಿವರು ಸಿಇಟಿ ರಾರಯಂಕಿಂಗ್ ವಿಚಾರದಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನ ಬಗ್ಗೆ ಕುಪೇಕಾ ಪ್ರತಿನಿಧಿಗಳಿಗೆ ವಿವರಿಸಿದ್ದಾರೆ.
ಶಿಕ್ಷಕರ ನೇಮಕಾತಿ ಅಕ್ರಮ ಆರೋಪ; ಶಿಕ್ಷಣ ಸಚಿವರ ತವರು ಜಿಲ್ಲೆಯ 10 ಶಿಕ್ಷಕರು ಸಿಐಡಿ ವಶಕ್ಕೆ
ಕೆಇಎ ಪ್ರಸ್ತುತ ಪ್ರಕಟಿಸಿದ್ದ ಸಿಇಟಿ ರ‍್ಯಾಂಕಿಂಗ್ ಪಟ್ಟಿಯನ್ನು ಹೈಕೋರ್ಟ್ ರದ್ದುಪಡಿಸಿ 24 ಸಾವಿರ ಪುನರಾವರ್ತಿತ ಅಭ್ಯರ್ಥಿಗಳ ಪಿಯು ಫಲಿತಾಂಶವನ್ನೂ ಪರಿಗಣಿಸಿ ರಾರಯಂಕಿಂಗ್ ಪ್ರಕಟಿಸಲು ಆದೇಶಿದೆ. ಆದರೆ, ಆ ರೀತಿ ಮಾಡಿದರೆ ಇಡೀ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರೀ ಏರುಪೇರಾಗುತ್ತದೆ.
ಜೊತೆಗೆ ಈ ವರ್ಷ ದ್ವಿತೀಯ ಪಿಯುಸಿ ಪಾಸಾಗಿ (ಫ್ರೆಷರ್ಸ್) ಸಿಇಟಿ ಬರೆದಿರುವವರಿಗೆ ಅನ್ಯಾಯವಾಗುತ್ತದೆ. ಹಾಗಾಗಿ ನಾವು ಹೈಕೋರ್ಟ್ ಆದೇಶವನ್ನು ಮೇಲ್ಮನವಿ ಸಲ್ಲಿಸಲು ಇಲ್ಲವೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ತೀರ್ಮಾನಿಸಿದ್ದೇವೆ. ಈ ಬಿಕ್ಕಟ್ಟು ನ್ಯಾಯಾಲಯದಲ್ಲಿ ಇತ್ಯರ್ಥವಾಗುವವರೆಗೆ ಕೆಇಎ ಸಿಇಟಿ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಸಲಾಗುವುದಿಲ್ಲ. ಆದಷ್ಟುಬೇಗ ಬಿಕ್ಕಟ್ಟು ಇತ್ಯರ್ಥಕ್ಕೆ ಪ್ರಯತ್ನಿಸುತ್ತೇವೆ. ತಾವು ಕೂಡ ಸಹಕಾರ ನೀಡಬೇಕು. ಸಿಇಟಿ ಕೌನ್ಸೆಲಿಂಗ್ ಬಳಿಕ ಕಾಮೆಡ್-ಕೆ ಕೌನ್ಸೆಲಿಂಗ್ ನಡೆಸಬೇಕೆಂದು ಸೂಚಿಸಿದ್ದಾರೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಮೂಲಗಳು ಖಚಿತಪಡಿಸಿವೆ.
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ, ಕ್ಯುಪೇಕಾ ಪರವಾಗಿ ಎಂ.ಆರ್. ಜಯರಾಂ, ಶಾಮ್ ಮತ್ತು ಭಾಷಾ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಸಂಘದ ಅಧ್ಯಕ್ಷ ಶಫಿ ಅಹಮದ್ ಉಪಸ್ಥಿತರಿದ್ದರು.
ಸಿಇಟಿ ಕೌನ್ಸೆಲಿಂಗ್ ಮತ್ತು ಕಾಮೆಡ್-ಕೆ ಕೌನ್ಸೆಲಿಂಗ್ ಯಾವಾಗ ನಡೆಸಬಹುದೆಂದು ಚರ್ಚಿಸಲು ಸೆ.13ರಂದು ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕಾಮೆಡ್-ಕೆ ಪರಸ್ಪರ ಸಮಾಲೋಚಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ರೂಪಿಸಲಿವೆ ಅಂತ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.