Asianet Suvarna News Asianet Suvarna News

ಸಿಇಟಿ, ನೀಟ್: ಸೆ.8ರಿಂದ 2ನೇ ಸುತ್ತಿನ ಸೀಟು‌ ಹಂಚಿಕೆ ಆರಂಭ: ಕೆಇಎ

ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿ‌ನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸೆ.8ರಿಂದ ಆರಂಭಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ. 

CET NEET 2nd Round Seat Allotment Starts From Sep 8 Says KEA gvd
Author
First Published Sep 6, 2024, 7:22 PM IST | Last Updated Sep 6, 2024, 7:22 PM IST

ಬೆಂಗಳೂರು (ಸೆ.06): ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿ‌ನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸೆ.8ರಿಂದ ಆರಂಭಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 11ಕ್ಕೆ ಹಂಚಿಕೆಗೆ ಲಭ್ಯ ಇರುವ ಸೀಟುಗಳ ವಿವರವನ್ನು ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 2ರಿಂದ ಸೆ.11ರವರೆಗೆ 'ಆಯ್ಕೆ' (Options) ಗಳನ್ನು ಬದಲಿಸಿಕೊಳ್ಳಲು ಅವಕಾಶ ಇರುತ್ತದೆ ಎಂದು ಅವರು ವಿವರಿಸಿದ್ದಾರೆ.

ರಾಷ್ಟೀಯ ಮಟ್ಟದ ನೀಟ್ ಫಲಿತಾಂಶ ನೋಡಿಕೊಂಡು ಎರಡನೇ ಸುತ್ತಿನ ಫಲಿತಾಂಶ ದಿನಾಂಕವನ್ನು‌ ನಂತರ ತಿಳಿಸಲಾಗುವುದು ಎಂದು ಅವರು ವಿವರಿಸಿದ್ದಾರೆ. ನೀಟ್ ಗೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಣೆ ನಂತರ ಅಭ್ಯರ್ಥಿಗಳಿಗೆ ಯಾವುದೇ ಛಾಯ್ಸ್ ಗಳನ್ನು ಆಯ್ಕೆ ಮಾಡಲು ಅವಕಾಶ ಇರುವುದಿಲ್ಲ. ಈ ಹಂತದಲ್ಲಿ ಹಂಚಿಕೆಯಾದ ಸೀಟಿಗೆ ಪ್ರವೇಶ ಪಡೆಯುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಶುಲ್ಕ ಪಾವತಿಸಿ, ಕಾಲೇಜಿಗೆ ಪ್ರವೇಶ ಪಡೆಯದಿದ್ದರೆ ಅಂತಹವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ. 

ಹೀಗಾಗಿ ಅಭ್ಯರ್ಥಿಗಳು ಇಷ್ಟ ಇರುವ ಕಾಲೇಜುಗಳನ್ನು ಮಾತ್ರ ದಾಖಲಿಸಬೇಕು‌ ಎಂದು ಅವರು ಸಲಹೆ ನೀಡಿದ್ದಾರೆ. ಯುಜಿ ಸಿಇಟಿಗೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಸೀಟು‌ ಹಂಚಿಕೆಯ ಫಲಿತಾಂಶದ ನಂತರ ಅಭ್ಯರ್ಥಿಗಳು ತಮಗೆ ಇಷ್ಟ ಇರುವ ಯಾವುದಾದರೊಂದು‌ ಛಾಯ್ಸ್ ಆಯ್ಕೆ‌ ಮಾಡಿಕೊಳ್ಳಬಹುದು. ಈ ಕುರಿತು ಸದ್ಯದಲ್ಲೇ ವಿವರಗಳನ್ನು ನೀಡಲಾಗುವುದು ಎಂದು‌ ವಿವರಿಸಿದ್ದಾರೆ.

'ಖುಷಿ' ಚಿತ್ರದ ನಿರ್ದೇಶಕ ಎಸ್.ಜೆ.ಸೂರ್ಯ ಕಪಾಳಕ್ಕೆ ಹೊಡೆದಿದ್ರಾ ಪವನ್ ಕಲ್ಯಾಣ್: ಏನಿದು ಹೊಸ ವಿಷ್ಯ?

ಮೂಲ ದಾಖಲೆ ಸಲ್ಲಿಕೆ: ಯುಜಿ ನೀಟ್ ನ ಮೊದಲ ಸುತ್ತಿನಲ್ಲಿ ಖಾಸಗಿ‌ ಕಾಲೇಜುಗಳಲ್ಲಿ ಸರ್ಕಾರಿ‌ ಕೋಟಾದ ವೈದ್ಯಕೀಯ ಸೀಟು ಪಡೆದಿರುವ ಅಥವಾ ಖಾಸಗಿ ಕೋಟಾದ ಸೀಟುಗಳನ್ನು ಖಾಸಗಿ ಕಾಲೇಜುಗಳಲ್ಲಿ ಪಡೆದವರು ಮೂಲ ದಾಖಲೆಗಳನ್ನು ಸೆ.9ರಿಂದ 12ರವರೆಗೆ ಕೆಇಎಗೆ ಸಲ್ಲಿಸಬೇಕು ಎಂದು ಅವರು ಕೋರಿದ್ದಾರೆ. ಛಾಯ್ಸ್-2 ಆಯ್ಕೆ ಮಾಡಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಕೂಡ ಈ ದಿನಾಂಕಗಳಂದು ಮೂಲ ದಾಖಲೆ ಸಲ್ಲಿಸಬಹುದು ಎಂದು ಅವರು ವಿವರಿಸಿದ್ದಾರೆ.

Latest Videos
Follow Us:
Download App:
  • android
  • ios