CET Results 2022: ಇಂದು ಸಿಇಟಿ ಫಲಿತಾಂಶ ಪ್ರಕಟ
ಮಲ್ಲೇಶ್ವರಂನಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಬೆಳಗ್ಗೆ 9.45ಕ್ಕೆ ಫಲಿತಾಂಶ ಪ್ರಕಟಿಸಲಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು(ಜು.30): ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವು ಇಂದು(ಶನಿವಾರ) ಬೆಳಗ್ಗೆ 9.45ಕ್ಕೆ ಪ್ರಕಟವಾಗಲಿದೆ.
ಮಲ್ಲೇಶ್ವರಂನಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಬೆಳಗ್ಗೆ 9.45ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ. ನಂತರ 11 ಗಂಟೆಗೆ ಪ್ರಾಧಿಕಾರದ ವೆಬ್‌ಸೈಟ್ www.karresults.nic.in/ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು ಎಂದು ಕೆಇಎ ಅಧಿಕಾರಿಗಳು ತಿಳಿಸಿದ್ದಾರೆ. ಎಂಜಿನಿಯರಿಂಗ್, ಕೃಷಿ, ಪಶುಸಂಗೋಪನೆ, ಆಯುಷ್, ಯುನಾನಿ, ಫಾರ್ಮಸಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕಳೆದ ಜೂನ್ 16 ಮತ್ತು 17 ರಂದು ನಡೆದ ಸಿಇಟಿ ಪರೀಕ್ಷೆಗೆ ಇಟ್ಟು 2,10,829 ವಿದ್ಯಾರ್ಥಿಗಳು ಹಾಜರಾಗಿದ್ದರು. ಜೂ.18ರಂದು ಹೊರನಾಡು ಹಾಗೂ ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಸಲಾಗಿತ್ತು. ರಾಜ್ಯದ ಒಟ್ಟು 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.
ಜು.17ರಂದೇ ಸಿಇಟಿ ಪರೀಕ್ಷೆ ಪ್ರಕಟಿಸಲು ಸಿದ್ದತೆ ನಡೆದಿತ್ತಾದರು ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟಣೆ ವಿಳಂಬವಾಗಿದ್ದರಿಂದ ಪ್ರಾಧಿಕಾರ ಈಗ ಫಲಿತಾಂಶ ನೀಡುತ್ತಿದೆ.