ಚಾಮರಾಜನಗರದಲ್ಲಿ 382 ಶಿಕ್ಷಕರ ಕೊರತೆ; ಅತಿಥಿ ಶಿಕ್ಷಕರ ನೇಮಕಾತಿಗೆ ಕ್ರಮ
ಗಡಿ ಜಿಲ್ಲೆ ಚಾಮರಾಜನಗರಕ್ಕೆ ಮೂಲ ಸೌಕರ್ಯಗಳು ಮಾತ್ರವಲ್ಲ, ಸಂವಿಧಾನದ ಮೂಲಭೂತ ಹಕ್ಕಾದ ಶಿಕ್ಷಣ ಪ್ರಸಾರ ಮಾಡುವುದಕ್ಕೂ ಸಮರ್ಪಕ ಶಿಕ್ಷಕರಿಲ್ಲ.
ಚಾಮರಾಜನಗರ (ಮೇ 14): ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮೂಲ ಸೌಕರ್ಯಗಳಿಗೆ ಮಾತ್ರ ಸಮಸ್ಯೆಯಿಲ್ಲ. ಸಂವಿಧಾನ ಬದ್ಧವಾದ ಮೂಲಭೂತ ಹಕ್ಕು ಗುಣಮಟ್ಟದ ಶಿಕ್ಷಣ ಪಡೆಯುವುದಕ್ಕೂ ಮಕ್ಕಳು ವಂಚಿತರಾಗುತ್ತಿದ್ದಾರೆ. ಈ ಗಡಿ ಜಿಲ್ಲೆಯಲ್ಲಿ382 ಶಿಕ್ಷಕರ ಹುದ್ದೆಗಳು ಖಾಲಿಯಿವೆ. ಇತ್ತೀಚೆಗೆ ಬಂದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿಯೂ ಕೂಡ ಚಾಮರಾಜನಗರ ಜಿಲ್ಲೆ 24ನೇ ಸ್ಥಾನವನ್ನು ಪಡೆದುಕೊಂಡಿದೆ.
ಹೌದು, ಚಾಮರಾಜನಗರ ಜಿಲ್ಲೆಯನ್ನು ಯಾವಾಗಲೂ ಮೂಲ ಸೌಕರ್ಯಗಳಿಲ್ಲದ ಜಿಲ್ಲೆಗಳಿಗೆ ಹೋಲಿಕೆ ಮಾಡಲಾಗುತ್ತದೆ. ಅದು ಅಕ್ಷರಶಃ ಸತ್ಯವೂ ಹೌದು. ಇದಕ್ಕೆ ಸಾಕ್ಷಿ ಎಂಬಂತೆ ಲೋಕಸಭಾ ಚುನಾವಣೆಯ ಮತದಾನದ ವೇಳೆ 5 ಗ್ರಾಮಗಳು ಮತದಾನ ವಿರೋಧಿಸಿ ಇವಿಎಂ ಮಷಿನ್ ಒಡೆದು ಹಾಕಿದ್ದರು. ಈಗ ದೇಶಕ್ಕೆ ಸ್ವಾತಂತ್ರ್ಯ ಬಂದು ಅಮೃತ ವರ್ಷಗಳು ಕಳೆದಿವೆ. ಆದರೂ, ಸಂವಿಧಾನದ ಬಗ್ಗೆ ದೊಡ್ಡದಾಗಿ ಭಾಷಣ ಮಾಡುವ ರಾಜಕಾರಣಿಗಳು ಮಾತ್ರ ಜಿಲ್ಲೆ ಅಭಿವೃದ್ಧಿಗೆ ಗಮನ ನೀಡುತ್ತಿಲ್ಲ. ಶಿಕ್ಷಣದಿಂದಲೇ ಅಭಿವೃದ್ಧಿ ಸಾಧ್ಯ ಎಂಬ ಅರಿವಿದ್ದರೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಲು ಶಿಕ್ಷಕರನ್ನು ನೇಮಕ ಮಾಡುವ ಸಣ್ಣ ಪ್ರಯತ್ನಕ್ಕೂ ಕೈ ಹಾಕಿಲ್ಲ ಎಂಬ ಆರೋಪ ಕೇಳಿಬಂದಿದೆ.
ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ ಸಿಬ್ಬಂದಿಯ ಖುಲ್ಲಂ ಖುಲ್ಲಾ ಕಿಸ್ಸಿಂಗ್; ದಾಖಲಾಯ್ತು ಕೇಸ್
ಪ್ರಾಥಮಿಕ ಶಾಲೆಗೆ 2,999 ಶಿಕ್ಷಕರ ಅಗತ್ಯ: ಚಾಮರಾಜನಗರ ಜಿಲ್ಲೆಗೆ ಶಿಕ್ಷಕರ ಕೊರತೆ ಇರುವುದು ಇದೇ ಮೊದಲೇನಲ್ಲ. ಇದಕ್ಕೆ ಹಲವು ಕಾರಣಗಳೂ ಇವೆ. ಸಂವಿಧಾನಿಕವಾಗಿ 6-14 ವರ್ಷದೊಳಗಿನ ಮಕ್ಕಳು ಶಿಕ್ಷಣ ಪಡೆಯುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ. ಆದರೆ, ಇದು ಚಾಮರಾಜನಗರದಲ್ಲಿ ಲಿಖಿತ ದಾಖಲೆಗಳಿಗೆ ಮಾತ್ರ ಸೀಮಿತಗೊಳಿಸಲಾಗಿದ್ದು, ಮಕ್ಕಳ ಶಿಕ್ಷಣ ಹಕ್ಕುಗಳನ್ನು ಸಾಕಾರಗೊಳಿಸುವ ಜನಪ್ರತಿನಿಧಿಗಳು ಮಾತ್ರ ರಾಜಕಾರಣದ ಅಮಲಿನಲ್ಲಿ ಅಭಿವೃದ್ಧಿಯನ್ನೇ ಮರೆತಂತಿದೆ ಎಂಬ ಆರೋಪ ಉದ್ಭವಿಸಿದೆ. ಜಿಲ್ಲೆ ಪ್ರಾಥಮಿಕ ಶಾಲೆಗೆ 2999 ಶಿಕ್ಷಕರ ಅಗತ್ಯವಿದೆ. ಆದರೆ, ಹಾಲಿ 2,076 ಶಿಕ್ಷಕರಿದ್ದು 923 ಶಿಕ್ಷಕರ ಹುದ್ದೆ ಖಾಲಿ ಇವೆ. ಆದರೆ, ಸದರಿ ವಿದ್ಯಾರ್ಥಿಗಳ ಅನುಸಾರ 317 ಶಿಕ್ಷಕರ ಹುದ್ದೆಗಳ ಖಾಲಿಯಿವೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
257 ಕೊಠಡಿಗಳು ಬಳಕೆಗೆ ಯೋಗ್ಯವಿಲ್ಲ: ಇನ್ನು ಜಿಲ್ಲೆಯಾದ್ಯಂತ ಒಟ್ಟು 257 ಕೊಠಡಿಗಳು ಸಂಪೂರ್ಣ ಶಿಥಿಲವಾಗಿವೆ. ಅವುಗಳನ್ನು ದುರಸ್ತಿ ಮಾಡೂ ಸಾಧ್ಯವಿಲ್ಲದ ಸ್ಥಿತಿ ತಲುಪಿವೆ. ಅವುಗಳನ್ನು ಡೆಮಾಲಿಶ್ ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇನ್ನು ಶಿಕ್ಷಣ ಇಲಾಖೆ ಅನುದಾನ ಹಾಗೂ ಜಿಲ್ಲಾ ಪಂಚಾಯಿತಿಯ ಎಲ್ಲ ಅನುದಾನಗಳೂ ಸೇರಿ ಹಲವು ಕೊಠಡಿಗಳನ್ನು ದುರಸ್ತಿ ಮಾಡಲಾಗುತ್ತಿದ್ದೆ. ಆದಾಗ್ಯೂ ಕುಡ ಇನ್ನೂ 93 ಕೊಠಡಿಗಳನ್ನು ದುರಸ್ತಿ ಮಾಡುವುದಕ್ಕೆ ಯಾವುದೇ ಅನುದಾನ ಲಭ್ಯವಿಲ್ಲ. ಕಳೆದ ವರ್ಷ 13 ಶಾಲೆಗಳು ವಿದ್ಯಾರ್ಥಿಗಳಿಲ್ಲದೇ ಸಂಪೂರ್ಣವಾಗಿ ಮುಚ್ಚಿ ಹೋಗಿವೆ. ಅವುಗಳನ್ನು ಸದರಿ ಶಾಲೆಯಲ್ಲಿ ಆರಂಭಿಸಿ ಮಕ್ಕಳ ದಾಖಲಾತಿ ಮಾಡಿಸಿಕೊಳ್ಳುವುದಕ್ಕೆ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಅಧಿಕಾರಿಗಳು ಮಾಹಿತಿ ನೀಡಿದರು.
ರಾಹುಕಾಲದ ಮೊದಲೇ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬಂದ ಮಾಜಿ ಸಚಿವ ಹೆಚ್.ಡಿ. ರೇವಣ್ಣ
ಅತಿಥಿ ಶಿಕ್ಷಕರ ನೇಮಕ: ಸರ್ಕಾರಿ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನಡೆ ಉಂಟಾಗದಿರಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಶಿಕ್ಷಣ ಇಲಾಖೆಯಿಂದ ಅತಿಥಿ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ, ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಈ ಸಾಲಿನಲ್ಲಿ 24ನೇ ಸ್ಥಾನಕ್ಕೆ ಕುಸಿತವಾಗಿದೆ. ಹೀಗಾಗಿ, ಫೇಲ್ ಆಗಿರುವ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಆಯೋಜಿಸಿ ಪಾಸ್ ಆಗುವಂತೆ ಮಾಡಲು ಸೂಚನೆ ನೀಡಲಾಗಿದೆ. ಪ್ರೌಢಶಾಲೆಗೆ 65 ಅತಿಥಿ ಶಿಕ್ಷಕರನ್ನು ಹಾಗೂ ಪ್ರಾಥಮಿಕ ಶಾಲೆಗಳಿಗೆ 317 ಅತಿಥಿ ಶಿಕ್ಷಕರು ಸೇರಿ ಒಟ್ಟು 382 ಅತಿಥಿ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣಾಧಿಕಾರಿ ತಿಳಿಸಿದರು.