ಕಾರ್ಮಿಕರ ಮಕ್ಕಳೂ ಇಂಗ್ಲಿಷ್‌ ಕಲಿಯಲಿ: ಎಚ್‌.ವಿಶ್ವನಾಥ

ಬಾಳನಗೌಡ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸುತ್ತೇನೆ. ಬಡವರ ಮಕ್ಕಳೇ ಓದುವ ಈ ಶಾಲೆಯನ್ನು ದತ್ತು ತೆಗೆದುಕೊಳ್ಳುವ ಚಿಂತನೆ ಇದೆ ಎಂದು ಭರವಸೆ ನೀಡಿದ ಎಚ್‌. ವಿಶ್ವನಾಥ 

Children of Workers Should Also Learn English Says BJP MLC H Vishwanath grg

ಹುಬ್ಬಳ್ಳಿ(ಜೂ.23): ಸಂವಹನ ಬಹಳ ಮಹತ್ವದ್ದು, ಶ್ರಮಿಕರ ಮಕ್ಕಳಿಗೂ ಇಂಗ್ಲಿಷ್‌ ಭಾಷೆ ಕಲಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಎಚ್‌. ವಿಶ್ವನಾಥ ಹೇಳಿದರು. ನಗರದ ಎಪಿಎಂಸಿ ಆವರಣದಲ್ಲಿನ ಶ್ರೀಮತಿ ಶಿವಲಿಂಗಮ್ಮ ಶಂಕರಗೌಡ ಬಾಳನಗೌಡ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲನೆ ವೇಳೆ ಅವರು ಮಾತನಾಡಿದರು.

ಬಾಳನಗೌಡ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸುತ್ತೇನೆ. ಬಡವರ ಮಕ್ಕಳೇ ಓದುವ ಈ ಶಾಲೆಯನ್ನು ದತ್ತು ತೆಗೆದುಕೊಳ್ಳುವ ಚಿಂತನೆ ಇದೆ ಎಂದು ಭರವಸೆ ನೀಡಿದರು.

ಹಿಜಾಬ್ ವಿವಾದ ಭುಗಿಲೆದ್ದಿದ್ದ ಮಂಗಳೂರಿನ ಕಾಲೇಜಿನಲ್ಲಿ ಮತ್ತೊಂದು ವಿವಾದ!

ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ಕನ್ನಡದ ಜತೆಗೆ ಅನ್ಯಭಾಷೆ ಕಲಿಸಬೇಕಾಗಿದೆ. ಶಾಲೆಯಲ್ಲಿ ಕಲಿತ ಮಕ್ಕಳು ಉದ್ಯೋಗಕ್ಕಾಗಿ ಬೇರೆ ರಾಜ್ಯಗಳಿಗೆ ತೆರಳಿದರೆ ಭಾಷೆಯ ಸಮಸ್ಯೆಯಾಗಬಾರದು. ಅದಕ್ಕಾಗಿ ಆಂಗ್ಲ, ಹಿಂದಿ ಭಾಷೆಗೂ ಆದ್ಯತೆ ನೀಡಬೇಕು ಎಂದು ಶಿಕ್ಷಕರಿಗೆ ಸಲಹೆ ನೀಡಿದರು.

ದೇಶದಲ್ಲಿ ಹಮಾಲಿ ಕಾರ್ಮಿಕರ ಮಕ್ಕಳಿಗಾಗಿ ತೆರೆದ ಮೊದಲ ಶಾಲೆ ಇದು. ಶ್ರಮಿಕರ ಮಕ್ಕಳೂ ಶಿಕ್ಷಣ ಪಡೆದುಕೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳುವ ಹಕ್ಕು ಹೊಂದಿದ್ದಾರೆ. ಶಿಕ್ಷಣದ ಜತೆಗೆ ಶಾಲೆಯಲ್ಲಿ ಇನ್ನು ಹೆಚ್ಚಿನ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸುವೆ. ಸರ್ಕಾರ ಆರೋಗ್ಯ ಹಾಗೂ ಶಿಕ್ಷಣಕ್ಕೆ ಆದ್ಯತೆ ಕೊಡಬೇಕು. ಜನರಿಗೆ ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳ ಬಗ್ಗೆ ತಿಳಿವಳಿಕೆ ಮೂಡಿಸಬೇಕಾಗಿದೆ ಎನ್ನುತ್ತ ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ಇಲ್ಲಿನ ಹಾಸ್ಟೇಲ್‌ ಕಟ್ಟಡಕ್ಕೆ . 5 ಲಕ್ಷ ಅನುದಾನ ಘೋಷಿಸಿದರು.

ಇದೇ ವೇಳೆ ಶಾಲೆಯಿಂದ ಎಚ್‌. ವಿಶ್ವನಾಥ ಅವರನ್ನು ಗೌರವಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್‌.ಎಸ್‌. ಕೆಳದಿಮಠ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂಧಗಿ, ಶಾಲಾ ಮುಖ್ಯೋಪಾಧ್ಯಾಯ ಎ.ಪಿ. ಬೀಡಿಕರ, ಡಾ. ರಾಮು ಮೂಲಗಿ, ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಸಿದ್ದಣ್ಣವರ, ಹಮಾಲಿ ಕಾರ್ಮಿಕರ ಮುಖಂಡ ಗುರುಸಿದ್ದಪ್ಪ ಅಂಬಿಗೇರ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು, ಇತರರು ಇದ್ದರು.

Latest Videos
Follow Us:
Download App:
  • android
  • ios