ಬಡತನದಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ಸಚಿವ ಎಸ್.ಟಿ.ಸೋಮಶೇಖರ್
ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿಕೊಟ್ಟು ಬಡವರು, ಮಧ್ಯಮ ವರ್ಗದವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡಲು ಆದ್ಯತೆ ನೀಡಲಾಗುತ್ತಿದೆ ಎಂದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್.
ಕೆಂಗೇರಿ(ಮಾ.02): ಬಡತನದ ಕಾರಣಕ್ಕೆ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರಿ ಶಾಲೆಗಳಿಗೆ ಸರ್ಕಾರ ಸಮಗ್ರ ಸೌಲಭ್ಯ ಕಲ್ಪಿಸುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು. ಯಶವಂತಪುರ ವಿಧಾನಸಭಾ ಕ್ಷೇತ್ರ ಅಜ್ಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಲಾಳು ಗ್ರಾಮದಲ್ಲಿ ನೂತನ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿಕೊಟ್ಟು ಬಡವರು, ಮಧ್ಯಮ ವರ್ಗದವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡಲು ಆದ್ಯತೆ ನೀಡಲಾಗುತ್ತಿದೆ ಎಂದರು.
1ನೇ ಕ್ಲಾಸ್ ಪ್ರವೇಶಕ್ಕೆ 6 ವರ್ಷ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ
ಅಜ್ಜನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀದೇವಿ ದೇವರಾಜ್, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಕೌಶಲ್ಯ ತರಬೇತಿ ನೀಡಿ ಸ್ಪರ್ಧಾತ್ಮಕ ಯುಗದ ಅವಶ್ಯಕತೆಗೆ ಅನುಗುಣವಾಗಿ ಸಜ್ಜುಗೊಳಿಸಲು ಸಹಕಾರ ಸಚಿವರು ಪ್ರೋತ್ಸಾಹಿಸುತ್ತಿರುವುದು ಅವರ ಸಾಮಾಜಿಕ ಬದ್ಧತೆಯ ಪ್ರತೀಕವಾಗಿದೆ ಎಂದರು.
ಅಜ್ಜನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರುದ್ರಪ್ಪ, ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಿಸಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಸಹಕಾರ ಸಚಿವರು ಭರವಸೆ ನೀಡಿದ್ದಾರೆ ಎಂದರು. ಬಿಜೆಪಿ ಯುವ ಮುಖಂಡ ನಿಶಾಂತ್ ಸೋಮಶೇಖರ್, ಜಿಪಂ ಮಾಜಿ ಸದಸ್ಯ ಡಿ.ಹನುಮಂತಯ್ಯ, ಗ್ರಾಪಂ ಉಪಾಧ್ಯಕ್ಷ ಗಂಗಾಧರಪ್ಪ, ಮಾಜಿ ಉಪಾಧ್ಯಕ್ಷ ಮಂಜುನಾಥ್ ಸೇರಿ ಇತರರಿದ್ದರು.