Karnataka Medical Fees: ವೈದ್ಯಕೀಯ ಶಿಕ್ಷಣ ಶುಲ್ಕ ಇಳಿಸಲು ರಾಜ್ಯ ಸರ್ಕಾರ ತೀರ್ಮಾನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ  ವೈದ್ಯಕೀಯ ಶಿಕ್ಷಣ ಶುಲ್ಕ ಇಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಘೋಷಿಸಿದ್ದಾರೆ. 

CM Basavaraj Bommai says  Karnataka looking to reduce medical fees gow

ದಾವಣಗೆರೆ (ಮಾ.21): ರಾಜ್ಯದಲ್ಲಿ  ವೈದ್ಯಕೀಯ ಶಿಕ್ಷಣ (medical education) ಶುಲ್ಕ ಇಳಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಘೋಷಣೆ ಮಾಡಿದ್ದಾರೆ. ದಾವಣಗೆರೆಯಲ್ಲಿ (Davanagere) ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai), ವೈದ್ಯಕೀಯ ಶಿಕ್ಷಣದ ಶುಲ್ಕವನ್ನು ಕಡಿಮೆ ಮಾಡುತ್ತೇವೆ ಎಂದು ಉಕ್ರೇನ್ ನಿಂದ ಹುಟ್ಟೂರಿಗೆ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಬಂದ ಬೆನ್ನಲ್ಲೇ ತಿಳಿಸಿದ್ದಾರೆ.

ಈಗಿರುವ ಮೆಡಿಕಲ್ ಶಿಕ್ಷಣದ ವೆಚ್ಚ ಹೆಚ್ಚಾಗುತ್ತಿದೆ. ಸರ್ಕಾರದ ಸೀಟಿಗೆ ಕಡಿಮೆ ಶುಲ್ಕವಿದ್ದರೂ ಕೂಡ ಖಾಸಗಿ ವಲಯದಲ್ಲಿ ಬಹಳ ಹೆಚ್ಚಾಗುತ್ತಿದೆ. ಶೇಕಡಾ 90-95ರಷ್ಟು ಅಂಕಗಳನ್ನು ದ್ವಿತೀಯ ಪಿಯುಸಿಯಲ್ಲಿ ಗಳಿಸಿದವರು ನೀಟ್ (NEET) ಪರೀಕ್ಷೆಯಲ್ಲಿ ತೇರ್ಗಡೆಯಾಗದೆ ಮ್ಯಾನೇಜ್ ಮೆಂಟ್ ಸೀಟು, ಎನ್ ಆರ್ಐ ಸೀಟುಗಳಿಗೆ ಹೋಗುತ್ತಿದ್ದಾರೆ. ಇಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಖರ್ಚು-ವೆಚ್ಚಗಳು ಹೆಚ್ಚಾಗುತ್ತಿರುವುದರಿಂದ ವಿದೇಶಗಳಿಗೆ ಹೋಗುತ್ತಿದ್ದಾರೆ. ಈ ಬಗ್ಗೆ ನಾನು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ನಮ್ಮ ರಾಜ್ಯದಲ್ಲಿ ಶುಲ್ಕ ಕಡಿಮೆ ಮಾಡಲು ಎಬಿಸಿ ಕ್ಯಾಟಗರಿ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದರು.

ಇಂದು ಇಡೀ ವೈದ್ಯಕೀಯ ಕೋರ್ಸ್ (Medical Courses) ರಾಷ್ಟ್ರೀಯ ವೈದ್ಯಕೀಯ ಕೌನ್ಸಿಲ್ ನ ಅಧೀನದಲ್ಲಿದೆ. ಉಕ್ರೇನ್ ಮೇಲೆ ರಷ್ಯಾ ಯುದ್ಧವಾದ ಮೇಲೆ ಅವರು ಕೂಡ ಚಿಂತನೆಯನ್ನು ನಡೆಸುತ್ತಿದ್ದಾರೆ. ಇದರ ಬಗ್ಗೆ ಪುನರ್ ಚಿಂತನೆ ನಡೆದಿದೆ ಎಂದರು.

NCEE survey: ಲಾಕ್‌ಡೌನ್‌ ನಂತರ ಮೂಲಭೂತ ಕೌಶಲ್ಯ ಕಳೆದುಕೊಂಡ ಮಕ್ಕಳು!

ಉಕ್ರೇನ್​ನಿಂದ (Ukraine) ಬಂದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ. ಅಲ್ಲಿನ ವೈದ್ಯಕೀಯ ಕೋರ್ಸ್​ಗೂ, ಇಲ್ಲಿಗೂ ಬದಲಾವಣೆ ಇದೆ‌. ಈಗಾಗಲೇ ಇಂತಹ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಭಾರತೀಯ ವೈದ್ಯಕೀಯ ಮಂಡಳಿ ಚಿಂತನೆ ಮಾಡುತ್ತಿದೆ ಎಂದು ಕೂಡ ಹೇಳಿದರು. 

ವೈದ್ಯಕೀಯ ವಿದ್ಯಾರ್ಥಿಗಳು ಇಂದು ಸಿಎಂ ಭೇಟಿ ಆಗಲಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ಸಿಎಂ ಬೊಮ್ಮಾಯಿ ಜತೆ ಚರ್ಚೆ ನಡೆಸಲಿದ್ದಾರೆ.

ಪಠ್ಯದಲ್ಲಿ ಭಗವದ್ಗೀತೆ ಪರ-ವಿರೋಧದ ಮಧ್ಯೆ ವಿಶ್ವೇಶ್ವರ ಹೆಗಡೆ ಕಾಗೇರಿ ಎಂಟ್ರಿ, ಏನು ಹೇಳಿದ್ರು?

ಉಕ್ರೇನ್ ವೈದ್ಯಕೀಯ ವಿಶ್ವವಿದ್ಯಾಲಯಗಳಿಂದ ಆನ್‌ಲೈನ್ ತರಗತಿ: ಯುದ್ಧ ಪೀಡಿತ ಉಕ್ರೇನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ನಂತರ ಅತಂತ್ರ ಭವಿಷ್ಯದ ಭಯದಲ್ಲಿದ್ದ ಭಾರತೀಯ ವಿದ್ಯಾರ್ಥಿಗಳಿಗೆ ಹಲವಾರು ಉಕ್ರೇನಿಯನ್ ವೈದ್ಯಕೀಯ ವಿಶ್ವವಿದ್ಯಾಲಯಗಳು ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಿದ್ದು ಕೊಂಚ ನಿರಾಳ ತಂದಿದೆ. ಆದಾಗ್ಯೂ, ಪ್ರಾಯೋಗಿಕ ತರಗತಿಗಳಿಗೆ ಹಾಜರಾಗಲು ಸಾಧ್ಯವಿಲ್ಲದಿರುವುದಕ್ಕೆ ಕೆಲವು ವಿದ್ಯಾರ್ಥಿಗಳು ಚಿಂತಿತರಾಗಿದ್ದಾರೆ.

ರಷ್ಯಾದ ಪಡೆಗಳ ನಿರಂತರ ಶೆಲ್ ದಾಳಿಯ ನಡುವೆ ಉಕ್ರೇನ್‌ನಲ್ಲಿ ದೈಹಿಕ ತರಗತಿಗಳನ್ನು ನಡೆಸುವುದು ಅಸಾಧ್ಯವಾದ ಕಾರಣ, ಪಶ್ಚಿಮ ಉಕ್ರೇನ್‌ನಲ್ಲಿರುವ ಹಲವಾರು ವೈದ್ಯಕೀಯ ವಿಶ್ವವಿದ್ಯಾಲಯಗಳು ಮಾ.14ರಿಂದ  ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಿವೆ.

ಭಾರತೀಯ ವಿದ್ಯಾರ್ಥಿಗಳ ಪ್ರಕಾರ ಮುಂಬರುವ ದಿನಗಳಲ್ಲಿ ಇತರ ವಿಶ್ವವಿದ್ಯಾಲಯಗಳು ಆನ್‌ಲೈನ್ ತರಗತಿಗಳನ್ನು ಪುನರಾರಂಭಿಸಲು ಯೋಜಿಸಿವೆ. ಇನ್ನು ಮುಂದುವರಿದ ಶೆಲ್ ದಾಳಿಯ ನಡುವೆ ತಮ್ಮ ಶಿಕ್ಷಕರು ತಮ್ಮ ಮನೆ ಅಥವಾ ಸುರಕ್ಷಿತ ಸ್ಥಳಗಳಿಂದ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಭಾರತೀಯ ವಿದ್ಯಾರ್ಥಿಗಳು ಹೇಳಿದ್ದಾರೆ.

ಡ್ಯಾನಿಲೊ ಹ್ಯಾಲಿಟ್ಸ್ಕಿ ಎಲ್ವಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯ, ಇವಾನೊ-ಫ್ರಾಂಕಿವ್ಸ್ಕ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯ, ವಿನ್ನಿಟ್ಸಿಯಾ ನ್ಯಾಷನಲ್ ಪಿರೊಗೊವ್ ವೈದ್ಯಕೀಯ ವಿಶ್ವವಿದ್ಯಾಲಯ ಮತ್ತು ಬೊಗೊಮೊಲೆಟ್ಸ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯ ಸೋಮವಾರದಿಂದ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಿವೆ.

ಡ್ಯಾನಿಲೋ ಹ್ಯಾಲಿಟ್ಸ್ಕಿ ಎಲ್ವಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯ ಪ್ರಥಮ ವರ್ಷದ ವಿದ್ಯಾರ್ಥಿ ಕನಿಷ್ಕ್ ತಮ್ಮ ಭವಿಷ್ಯದ ಬಗ್ಗೆ ಅನಿಶ್ಚಿತತೆಗಳಿರುವುದರಿಂದ ತರಗತಿಗಳು ಪುನರಾರಂಭಗೊಂಡಿರುವುದಕ್ಕೆ ಸಮಾಧಾನಗೊಂಡಿದ್ದಾರೆ.

Latest Videos
Follow Us:
Download App:
  • android
  • ios