* ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಟ್ಯಾಬ್‌* ಸಿಎಂ ಬಿಎಸ್​​ ಯಡಿಯೂರಪ್ಪ ಚಾಲನೆ * ಸುಮಾರು 1.55 ಲಕ್ಷ ವಿದ್ಯಾರ್ಥಿಗಳು ಪಡೆಯಲಿದ್ದಾರೆ ಉಚಿತ ಟ್ಯಾಬ್

ಬೆಂಗಳೂರು, (ಜೂನ್.23): ಉನ್ನತ ಶಿಕ್ಷಣ ಕಲಿಕೆಗೆ ಅನುಕೂಲ ಆಗುವಂತೆ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಟ್ಯಾಬ್‌, ಪಿಸಿ ವಿತರಣೆ ಯೋಜನೆಗೆ ಇಂದು (ಬುಧವಾರ) ವಿಧಾನಸೌಧದಲ್ಲಿ ಸಿಎಂ ಬಿಎಸ್​​ ಯಡಿಯೂರಪ್ಪ ಚಾಲನೆ ನೀಡಿದರು.

ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಲಿಕಾ ನಿರ್ವಹಣಾ ವ್ಯವಸ್ಥೆಗೆ ಪೂರಕವಾಗುವಂತೆ ಯೋಜನೆ ಜಾರಿ ಮಾಡಲಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಸುಮಾರು 1.55 ಲಕ್ಷ ವಿದ್ಯಾರ್ಥಿಗಳು ಟ್ಯಾಬ್ ಪಡೆದುಕೊಳ್ಳಲಿದ್ದಾರೆ.

ಜುಲೈ 4 ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ : ಅಶ್ವಥ್ ನಾರಾಯಣ್ 

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ನಡೆದ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ಡಿಸಿಎಂ ಅಶ್ವಥ್ ನಾರಾಯಣ್ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಇನ್ನು ಟ್ಯಾಬ್ ವಿತರಣೆ ಕಾರ್ಯಕ್ರಮ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ವ್ಯವಸ್ಥೆ ಮಾಡಲಾಗಿದ್ದು, ಸ್ಥಳೀಯವಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳಿಂದ ಟ್ಯಾಬ್ ವಿತರಣೆಯಾಗಲಿದೆ.

Scroll to load tweet…